9:15 PM Monday15 - December 2025
ಬ್ರೇಕಿಂಗ್ ನ್ಯೂಸ್
ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ…

ಇತ್ತೀಚಿನ ಸುದ್ದಿ

ಪ್ರವೀಣ್ ನೆಟ್ಟಾರು ಹತ್ಯೆ: ಸರಕಾರದ ವೈಫಲ್ಯ ವಿರೋಧಿಸಿ ಉಡುಪಿಯಲ್ಲಿ 50ಕ್ಕೂ ಹೆಚ್ಚು ಕಾರ್ಯಕರ್ತರು ರಾಜೀನಾಮೆ

28/07/2022, 23:32

ಉಡುಪಿ(reporterkarnataka.com):
ಬಿಜೆಪಿ ಯುವ ಮುಖಂಡ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಕೊಲೆಯ ಹಿನ್ನೆಲೆಯಲ್ಲಿ ಸರ್ಕಾರದ ವೈಫಲ್ಯವನ್ನು ವಿರೋಧಿಸಿ ಉಡುಪಿಗೆ ಮಲ್ಪೆ ಭಾಗದ ತೆಂಕನಿಡಿಯೂರು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ವಿಜಯಪ್ರಕಾಶ್ ಬೈಲಕರೆ ಮತ್ತು 50ಕ್ಕೂ ಹೆಚ್ಚು ಕಾರ್ಯಕರ್ತರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಬಿಜೆಪಿಯಲ್ಲಿ ಜವಾಬ್ದಾರಿಯಿಂದ ದುಡಿದಿದ್ದೇವೆ. ಆದರೇ ಈಗ ಕಾರ್ಯಕರ್ತರಿಗೆ ರಕ್ಷಣೆಯ ಭರವಸೆಯನ್ನು ಕಳೆದುಕೊಂಡು ನೋವಿನಿಂದ ರಾಜೀನಾಮೆ ನೀಡುತ್ತೇವೆ ಎಂದು ತಿಳಿಸಲಾಗಿದೆ.

ಬಿಜೆಪಿಯ ಉಡುಪಿ ಜಿಲ್ಲಾ ಸಾಮಾಜಿಕ ಜಾಲತಾಣದ ಸಂಚಾಲಕ ನಿಟ್ಟೆ ಸುದೀಪ್ ಶೆಟ್ಟಿಯೂ ತಮ್ಮ ಜವಾಬ್ದಾರಿ ಗೆ ರಾಜಿನಾಮೆ ನೀಡಿದ್ದಾರೆ.

ಈ ಹಿಂದೆ ಬಿಜೆಪಿ ವಿರೋಧ ಪಕ್ಷದಲ್ಲಿದ್ದಾಗ, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ 22ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರ ಕೊಲೆಯಾದಾಗ ನಾವು ಪಕ್ಷದ ಸಾಮಾಜಿಕ ಜಾಲತಾಣದಲ್ಲಿ ಅವುಗಳನ್ನು ಖಂಡಿಸಿದ್ದೇವೆ. ಈಗ ನಮ್ಮದೇ ಪಕ್ಷ ಅಧಿಕಾರದಲ್ಲಿರುವಾಗ ನಡೆಯುತ್ತಿರುವ ಕೊಲೆಗಳ ಸಂದರ್ಭದಲ್ಲಿ ನಮ್ಮ ನಡೆ, ನಿಲುವನ್ನು ಸಮರ್ಥಿಸಲು ಸಾಧ್ಯವಿಲ್ಲ, ಆದ್ದರಿಂದ ರಾಜೀನಾಮೆ ನೀಡುವುದಾಗಿ ಸುದೀಪ್ ಶೆಟ್ಟಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು