11:00 AM Saturday5 - July 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ

ಇತ್ತೀಚಿನ ಸುದ್ದಿ

ಪ್ರೇಮ ವೈಫಲ್ಯ?: ಯುವಕನಿಂದ ವಿದ್ಯಾರ್ಥಿನಿ ಮೇಲೆ ಆ್ಯಸಿಡ್ ದಾಳಿ; ಪಕ್ಕದಲ್ಲಿದ್ದ ಇನ್ನಿಬ್ಬರೂ ವಿದ್ಯಾರ್ಥಿನಿಯರಿಗೂ ಗಾಯ

04/03/2024, 16:53

ಮಂಗಳೂರು(reporterkarnataka.com): ಕಡಬ ತಾಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಅವರಣದಲ್ಲಿ ವ್ಯಕ್ತಿಯೊಬ್ಬ ವಿದ್ಯಾರ್ಥಿನಿಯೋರ್ವಳ ಮೇಲೆ ಆ್ಯಸಿಡ್​ ಎರಚಿದ್ದು, ಪಕ್ಕದಲ್ಲಿದ್ದ ಇನ್ನಿಬ್ಬರು ವಿದ್ಯಾರ್ಥಿ ನಿಯರೂ ಗಾಯಗೊಂಡ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ.
ವಿದ್ಯಾರ್ಥಿನಿಯೋರ್ವಳ ಮೇಲೆ ಕಾಲೇಜು ಆವರಣದಲ್ಲೇ ಆ್ಯಸಿಡ್​ ಎರಚಿದ್ದಾನೆ. ಈ ವೇಳೆ ಪಕ್ಕದಲ್ಲಿದ್ದ ಮತ್ತಿಬ್ಬರು ವಿದ್ಯಾರ್ಥಿನಿಯರಿಗೂ ಆ್ಯಸಿಡ್​ ತಗುಲಿದೆ. ಗಾಯಗೊಂಡಿರುವ ಮೂವರೂ ವಿದ್ಯಾರ್ಥಿನಿಯರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಆರೋಪಿಯನ್ನು ಕೇರಳದ ಮಲ್ಲಪುರಂ ಜಿಲ್ಲೆಯ 23 ವರ್ಷದ ಯುವಕ ಎಂದು ಗುರುತಿಸಲಾಗಿದೆ. ಈತನನ್ನು ಇತರ ವಿದ್ಯಾರ್ಥಿಗಳು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿ ಮತ್ತು ಆ್ಯಸಿಡ್ ದಾಳಿಗೊಳಗಾದ ವಿದ್ಯಾರ್ಥಿನಿ ಒಂದೇ ಕೋಮಿಗೆ ಸೇರಿದವರಾಗಿದ್ದಾರೆ. ಪ್ರೇಮ ವೈಫಲ್ಯದ ಹಿನ್ನೆಲೆಯಲ್ಲಿ ಆರೋಪಿ ಈ ಕೃತ್ಯ ನಡೆಸಿರುವುದಾಗಿ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.
ಘಟನೆಯನ್ನು ಖಂಡಿಸಿ ಟ್ವೀಟ್​ ಮಾಡಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, “ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ಸರ್ಕಾರಿ ಪಿಯು ಕಾಲೇಜಿನ ಹೆಣ್ಣು ಮಕ್ಕಳ ಮೇಲೆ ಆಸಿಡ್ ಎರಚಿರುವ ಘಟನೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿರುವುದಕ್ಕೆ ಕೈಗನ್ನಡಿಯಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದ್ದು, ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಗಾಯಾಳು ಹೆಣ್ಣುಮಕ್ಕಳು ಅಪಾಯದಿಂದ ಪಾರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು