4:31 AM Monday5 - October 2026
ಬ್ರೇಕಿಂಗ್ ನ್ಯೂಸ್
ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ…

ಇತ್ತೀಚಿನ ಸುದ್ದಿ

President of India | ಗಡಿಭಾಗದ ಸಮಸ್ಯೆ ಪರಿಹಾರಕ್ಕೆ ವಿಶೇಷಾಧಿಕಾರಿ ನೇಮಿಸಿ: ರಾಷ್ಟ್ರಪತಿಗಳಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿಳಿಮಲೆ ಆಗ್ರಹ

27/02/2025, 20:56

ಬೆಂಗಳೂರು(reporterkarnataka.com): ಬೆಳಗಾವಿ ಸೇರಿದಂತೆ ರಾಜ್ಯದ ಯಾವುದೇ ಭಾಗದಲ್ಲಿ ದಾಖಲಾಗುವ ಅಂತಾರಾಜ್ಯ ಗಲಭೆಗಳನ್ನು ಸಮರ್ಥವಾಗಿ ಹತ್ತಿಕ್ಕಲು ಸಂವಿಧಾನವೇ ಅವಕಾಶ ಕಲ್ಪಿಸಿದ್ದು, ಕೇಂದ್ರ ಸರ್ಕಾರ ಈ ಬಗ್ಗೆ ಮನಸ್ಸು ಮಾಡಬೇಕಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಅಭಿಪ್ರಾಯಪಟ್ಟಿದ್ದಾರೆ.
ಈ ಕುರಿತಂತೆ ಗುರುವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ರವರಿಗೆ ಪತ್ರ ಬರೆದಿರುವ ಅವರು, ಸಂವಿಧಾನದ 350 (ಬಿ) ಅನುಚ್ಛೇದದಲ್ಲಿ ಗಡಿ ಪ್ರದೇಶಗಳಲ್ಲಿ ವಾಸಿಸುವ ಭಾಷಾ ಅಲ್ಪಸಂಖ್ಯಾತರು ಬಹುಸಂಖ್ಯಾತರೊಂದಿಗೆ ಸಾಮರಸ್ಯದ ಜೀವನವನ್ನು ನಡೆಸುವಲ್ಲಿ ಕೇಂದ್ರ ಸರ್ಕಾರದ ಜವಾಬ್ದಾರಿಯನ್ನು ಸ್ಪಷ್ಟವಾಗಿ ನಿಗದಿಪಡಿಸಲಾಗಿದ್ದು, ಅದರಂತೆ ಕೇಂದ್ರ ಸರ್ಕಾರವು ವಿಶೇಷಾಧಿಕಾರಿಯನ್ನು ನೇಮಿಸಬೇಕಿದೆ ಎಂದಿದ್ದಾರೆ. ಹೀಗೆ ನೇಮಿಸಲಾಗುವ ವಿಶೇಷಾಧಿಕಾರಿ, ಗಡಿ ಭಾಗಗಳ ಭಾಷಾ ಅಲ್ಪಸಂಖ್ಯಾತರು ಎದುರಿಸುತ್ತಿರುವ ಸಮಸ್ಯೆಗಳ ಕುರಿತಂತೆ ಕೂಲಂಕಷವಾಗಿ ಅಧ್ಯಯನ ನಡೆಸಬೇಕು. ಸಮಸ್ಯೆವಾರು ವಿವರಗಳನ್ನು ಸಿದ್ಧಪಡಿಸಿ, ರಾಷ್ಟ್ರಪತಿಗಳಿಗೆ ಸಲ್ಲಿಸಬೇಕು. ರಾಷ್ಟ್ರಪತಿಗಳು ಅದನ್ನು ಸಂಸತ್ತಿನ ಉಭಯ ಸದನಗಳ ಮುಂದೆ ಮಂಡಿಸಲು ನಿರ್ದೇಶಿಸಬಹುದಾಗಿದ್ದು, ಕೇಂದ್ರ ಸರ್ಕಾರವು ವರದಿಯ ಆಧಾರದಲ್ಲಿ ಉಭಯ ರಾಜ್ಯಗಳ ಗಡಿ ಹಿಂಸಾಚಾರಗಳನ್ನು ಹತ್ತಿಕ್ಕುವಲ್ಲಿ ಕ್ರಮ ವಹಿಸಬೇಕಾಗುತ್ತದೆ ಎಂದು ಡಾ.ಬಿಳಿಮಲೆ ಹೇಳಿದ್ದಾರೆ.
ಕರ್ನಾಟಕ-ಮಹಾರಾಷ್ಟ್ರ ಗಡಿ ಭಾಗದ ಗಲಭೆ ಈ ಪತ್ರ ಬರೆಯಲು ಪ್ರೇರೇಪಿಸಿದೆ ಎಂದು ಹೇಳಿರುವ ಡಾ.ಬಿಳಿಮಲೆ, ಈ ಸಮಸ್ಯೆ ಮೇಲ್ನೋಟಕ್ಕೆ ಕಾಣುವುದಕ್ಕಿಂತಲೂ ತೀವ್ರವಾಗಿದ್ದು, ಎರಡೂ ರಾಜ್ಯಗಳ ಆಡಳಿತ ವ್ಯವಸ್ಥೆಯ ಮೇಲೆ ಪ್ರತಿಕೂಲ ಪರಿಣಾಮವನ್ನು ಬೀರಿರುವುದಷ್ಟೇ ಅಲ್ಲ, ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿ, ಅಗಾಧ ಹಿಂಸಾಚಾರ ವೇದನೆ ತರುವ ವಿಷಯವಾಗಿದೆ. ಈ ಅರ್ಥಹೀನ ಗಲಭೆಗಳಿಗೆ ಇತಿಶ್ರೀ ಹಾಡಲು ಕೇಂದ್ರ ಸರ್ಕಾರವು ಕೂಡಲೇ ಮುಂದಾಗಬೇಕೆಂದು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು