5:05 AM Thursday1 - October 2026
ಬ್ರೇಕಿಂಗ್ ನ್ಯೂಸ್
ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ…

ಇತ್ತೀಚಿನ ಸುದ್ದಿ

ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ

26/03/2026, 10:46

ಬೆಂಗಳೂರು(reporterkarnataka.com): ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯ ಪ್ರಶ್ನೆಯಾಗಿರುವ ಉಪ ಚುನಾವಣೆಯಲ್ಲಿ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಬಂಡಾಯ ಅಭ್ಯರ್ಥಿಯನ್ನು ಮನವೊಲಿಸಿ ನಾಮಪತ್ರ ವಾಪಸ್ ತೆಗೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಜಮೀರ್ ಅಹ್ಮದ್ ಅವರಿಗೆ ಸೂಚನೆ ನೀಡಿದ್ದಾರೆ. ತಡರಾತ್ರಿ ಕಾವೇರಿ ನಿವಾಸದಲ್ಲಿ ಮುಸ್ಲಿಂ ಮುಖಂಡರೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿ, ಎರಡು ಉಪಚುನಾವಣೆಗಳನ್ನು ಗೆಲ್ಲುವುದು ಸರ್ಕಾರಕ್ಕೆ ಅತ್ಯಂತ ಮುಖ್ಯ. ಈ ಚುನಾವಣೆ ಸರ್ಕಾರದ ಪ್ರತಿಷ್ಠೆಯ ಪ್ರಶ್ನೆಯಾಗಿರುವುದರಿಂದ ಯಾವುದೇ ರೀತಿಯ ಮತ ವಿಭಜನೆಯು ಪಕ್ಷಕ್ಕೆ ಹಿನ್ನಡೆಯಾಗಬಹುದು ಎಂದು ಎಚ್ಚರಿಕೆ ನೀಡಿದ್ದಾರೆ.
ದಾವಣಗೆರೆಯಲ್ಲಿ ಮುಸ್ಲಿಂ ಮತಗಳು ವಿಭಜನೆಯಾದರೆ ಪಕ್ಷಕ್ಕೆ ನಷ್ಟವಾಗುವ ಸಾಧ್ಯತೆ ಇದೆ. ಆದ್ದರಿಂದ, ವ್ಯಕ್ತಿಗಿಂತ ಪಕ್ಷವೇ ಮುಖ್ಯ ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದ್ದಾರೆ. ಯಾವುದೇ ಭಿನ್ನಾಭಿಪ್ರಾಯಗಳಿದ್ದರೂ ಪಕ್ಷದ ಅಭ್ಯರ್ಥಿಯ ಪರ ಪ್ರಚಾರದಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದು ಮುಖಂಡರಿಗೆ ಮನವಿ ಮಾಡಿದ್ದಾರೆ.
ಇಂದು ಸಂಜೆಯೊಳಗೆ ಬಂಡಾಯ ಅಭ್ಯರ್ಥಿ ಪೈಲ್ವಾನ್ ಅವರ ನಾಮಪತ್ರವನ್ನು ವಾಪಸ್ ಪಡೆಯುವಂತೆ ನೋಡಿಕೊಳ್ಳಬೇಕು. ಈ ಸಂಬಂಧ ಜಮೀರ್ ಅಹ್ಮದ್ ಖಾನ್ ಜೊತೆ ಮುಖಂಡರು ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸಬೇಕು ಎಂದು ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು