1:17 PM Thursday27 - November 2025
ಬ್ರೇಕಿಂಗ್ ನ್ಯೂಸ್
ಟೈಯರ್ ಸ್ಫೋಟ: ನಿಯಂತ್ರಣ ಕಳೆದುಕೊಂಡು ಪಿಕ್ ಅಪ್ ಪಲ್ಟಿ; ಚಾಲಕನಿಗೆ ತೀವ್ರ ಗಾಯ ಛಲವಾದಿ ಹಾಗೂ ಆರ್. ಅಶೋಕ್ ಗೆ ರಾಜಕೀಯ ವಿವೇಕ ಇಲ್ಲ: ಸಚಿವ ಎನ್.… ಸಂತಾನ ಹರಣ ಚಿಕಿತ್ಸೆ ಬಳಿಕವೂ ಗರ್ಭಿಣಿಯಾದ ಪತ್ನಿ: ಪತಿಯಿಂದ ವೈದ್ಯರಿಗೆ ಬೆದರಿಕೆ ಆರೋಪ:… ರಾಜ್ಯದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನ ಜತೆಗೆ ಸರ್ಕಾರಿ… ಹೈವಿಷನ್ ಇಂಡಿಯಾ ಜತೆ ಕೊರಿಯನ್ ಸಂಸ್ಥೆ ಜಿಟಿಟಿಸಿ ಒಪ್ಪಂದಕ್ಕೆ ಸಹಿ |ರಾಜ್ಯದ ಪ್ರವಾಸಿ… ಗಗನಯಾನಿಯಾಗಲು ದೈಹಿಕ, ಮಾನಸಿಕ ಆರೋಗ್ಯ ಬಹಳ ಮುಖ್ಯ: ಶುಭಾಂಶು ಶುಕ್ಲಾ Kodagu | ಅಪಘಾತಕ್ಕೆ ಈಡಾಗಿ ಗಂಭೀರ ಸ್ಥಿತಿಯಲ್ಲಿ ಪುತ್ರ: ನೊಂದ ತಾಯಿ ಕೆರೆಗೆ… ಅಕ್ರಮ‌ ಆಸ್ತಿ ಸಂಪಾದನೆ ಆರೋಪ: ಕೊಡಗು ಪಿಡಬ್ಲ್ಯುಡಿ ಎಂಜಿನಿಯರ್ ಕಚೇರಿ, ಮನೆ ಮೇಲೆ… Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ

ಪ್ರೀತಿ ನಿರಾಕರಿಸಿದ ಯುವತಿಯ ಮೇಲೆ ಅತ್ಯಾಚಾರ ; ಆರೋಪಿಯ ಬಂಧನ

10/12/2021, 17:23

ಮಂಗಳೂರು:(reporterkarnataka.com): ಪ್ರೀತಿ ನಿರಾಕರಿಸಿದಳೆಂದು ತನ್ನ ಸಹಪಾಠಿ ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿಯನ್ನು ಬಜೆ ಪೊಲೀಸರು ಬಂಧಿಸಿದ್ದಾರೆ.

ಅಬೂಬಕರ್ ಸಿದ್ದಿಕ್ (21) ಬಂಧಿತ ಆರೋಪಿ. 2019ರಲ್ಲಿ ನಡೆದಿದ್ದ ಕಾಲೇಜು ಬೀಳ್ಕೊಡುಗೆ ಸಮಾರಂಭದಲ್ಲಿ ಇಬ್ಬರು ಜೊತೆಯಾಗಿ ನಿಂತು ಫೋಟೋ ತೆಗೆಸಿಕೊಂಡಿದ್ದರು. ಈ ಫೋಟೋವನ್ನು ಮುಂದಿಟ್ಟುಕೊಂಡು ಆರೋಪಿ ಅಬೂಬಕರ್ ಸಿದ್ದಿಕ್ ಯುವತಿಯನ್ನು ಪ್ರೀತಿಸುವಂತೆ ಪೀಡಿಸುತ್ತಿದ್ದ. ಒಂದು ವೇಳೆ ಪ್ರೀತಿಗೆ ನಿರಾಕರಿಸಿದಲ್ಲಿ ಇಬ್ಬರೂ ಜೊತೆಯಾಗಿರುವ ಫೋಟೊವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುವುದಾಗಿ ಬೆದರಿಸುತ್ತಿದ್ದ ಎನ್ನಲಾಗಿದೆ.

ಅಬೂಬಕರ್ ಸಿದ್ದಿಕ್ ಎಷ್ಟೇ ಪೀಡಿಸಿ, ಬೆದರಿಸಿದರೂ ಯುವತಿ ಪ್ರೀತಿಗೆ ಒಪ್ಪಿರಲಿಲ್ಲ. ಈ ಹಿನ್ನೆಲೆಯಲ್ಲಿ ಡಿ.8 ರಂದು ಯುವತಿ ಕೆಲಸ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ಸಂದರ್ಭದಲ್ಲಿ ಹಿಂಬಾಲಿಸಿ ಬಂದ ಆರೋಪಿ, ಆಕೆಯ ಮನೆಗೆ ನುಗ್ಗಿ ಅತ್ಯಾಚಾರ ನಡೆಸಿದ್ದಾನೆ ಎಂದು ದೂರು ದಾಖಲಿಸಿಕೊಂಡಿರುವ ಬಜಪೆ ಪೋಲಿಸರು ಆರೋಪಿಯನ್ನು ಬಂಧಿಸಿ ತನಿಖೆ ಮುಂದುವರಿಸಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು