ಇತ್ತೀಚಿನ ಸುದ್ದಿ
Primary Education | ಮಕ್ಕಳಲ್ಲಿ ಕಲಿಕಾ ಸಾಮರ್ಥ್ಯ ವೃದ್ದಿಗೆ ಕಲಿಕಾ ದೀಪ, ಜ್ಞಾನ ಸೇತು ಜಾರಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ
06/03/2025, 22:04

ಬೆಂಗಳೂರು (reporterkarnataka.com): ಮಕ್ಕಳಲ್ಲಿ ಕಲಿಕಾ ಸಾಮರ್ಥ್ಯ ಹೆಚ್ಚಿಸಲು ಕಲಿಕಾ ದೀಪ, ಜ್ಞಾನ ಸೇತುವಿನಂತಹ ವಿನೂತನ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗುವುದೆಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಾದ ಮಧು ಬಂಗಾರಪ್ಪ ಹೇಳಿದರು
ಅವರು ಇಂದು ವಿಧಾನ ಪರಿಷತ್ ಅಧಿವೇಶನದಲ್ಲಿ ಸದನದ ಸದಸ್ಯರಾದ ಡಾ.ಧನಂಜಯ ಸರ್ಜಿ ಅವರು ನಿಯಮ 72 ರಡಿ ಮಕ್ಕಳು ಕಲಿಕೆಯಲ್ಲಿ ಹಿಂದುಳಿಯುತ್ತಿರುವ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮಕ್ಕಳಲ್ಲಿ ಭಾಷೆ ಮತ್ತು ಗಣಿತದ ಕೌಶಲ್ಯ ಹೆಚ್ಚಿಸಲು ಸರ್ಕಾರ Fundamental Literacy and Numeracy(FLN) ಎಂಬ ಕಾರ್ಯಕ್ರಮ ಹಮ್ಮಿಕೊಂಡಿದೆ. 4 ಮತ್ತು 5 ನೇ ತರಗತಿ ವಿದ್ಯಾರ್ಥಿಗಳಿಗೆ ‘ಕಲಿಕಾ ಮಟ್ಟಕ್ಕೆ ಅನುಗುಣವಾಗಿ ಬೋಧನೆ’ ಎಂಬ ವಿಧಾನವನ್ನು ಬಳಸಿಕೊಳ್ಳಲಾಗುತ್ತಿದೆ. 2025-26ನೇ ಸಾಲಿನಿಂದ 4 ರಿಂದ 10ನೇ ತರಗತಿಯ ಅಂದಾಜು 2 ಲಕ್ಷ ವಿದ್ಯಾರ್ಥಿಗಳಿಗೆ ‘ಕಲಿಕಾ ದೀಪ’ ಎಂಬ ಕಾರ್ಯಕ್ರಮವನ್ನು ಜಾರಿಗೊಳಿಸಲಾಗುತ್ತಿದೆ ಎಂದರು.
ಖಾನ್ ಅಕಾಡೆಮಿ ಸಹಯೋಗದೊಂದಿಗೆ ರಾಜ್ಯದ 6ರಿಂದ 10ನೇ ತರಗತಿಯ ಸರ್ಕಾರಿ ಶಾಲೆಗಳಲ್ಲಿ ‘ ಜ್ಞಾನ ಸೇತು’ ಎಂಬ ವಿನೂತನ ಕಾರ್ಯಕ್ರಮ ಜಾರಿಗೊಳಿಸಲಾಗುವುದು. ಕಂಪ್ಯೂಟರ್ ಹೊಂದಿರುವ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಕೃತಕ
ಬುದ್ದಿಮತ್ತೆ ಮತ್ತು ತಂತ್ರಜ್ಞಾನದ ಬಳಕೆ ಮೂಲಕ ಗಣಿತ ಮತ್ತು ವಿಜ್ಞಾನ ವಿಷಯಗಳನ್ನು ಪರಿಣಾಮಕಾರಿಯಾಗಿ ಕಲಿಯಲು ಅವಕಾಶ ಕಲ್ಪಿಸಲಾಗುವುದೆಂದರು.