4:24 AM Sunday22 - March 2026
ಬ್ರೇಕಿಂಗ್ ನ್ಯೂಸ್
ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ

ಇತ್ತೀಚಿನ ಸುದ್ದಿ

ಉಡುಪಿಗೆ ನ.28ರಂದು ಪ್ರಧಾನಿ ಮೋದಿ ಭೇಟಿ: ಸಾರ್ವತ್ರಿಕ ರಜೆ ಘೋಷಿಸಲು ಶಾಸಕ ಯಶ್ ಪಾಲ್ ಸುವರ್ಣ ಆಗ್ರಹ

24/11/2025, 18:57

ಉಡುಪಿ(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 28ರಂದು ಉಡುಪಿಗೆ ಭೇಟಿ ನೀಡಲಿದ್ದು, ಉಡುಪಿ ಜಿಲ್ಲೆಯಾದ್ಯಂತ ಅಂದು ಒಂದು ದಿನದ ಸಾರ್ವತ್ರಿಕ ರಜೆ ಘೋಷಿಸಬೇಕೆಂದು ಸ್ಥಳೀಯ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹಿಸಿದ್ದಾರೆ.

ಪ್ರಧಾನಿ ಭೇಟಿ ಹಿನ್ನೆಲೆ ಉಡುಪಿ ಜಿಲ್ಲೆಯಲ್ಲಿ ರಜೆ ಘೋಷಣೆಗೆ ಜಿಲ್ಲಾಧಿಕಾರಿಗಳಿಗೆ ಶಾಸಕರು ಮನವಿ ಮಾಡಿದ್ದಾರೆ.
ಉಡುಪಿ ಪರ್ಯಾಯ ಶ್ರೀಪುತ್ತಿಗೆ ಶ್ರೀಕೃಷ್ಣ ಮಠದ ವತಿಯಿಂದ ಆಯೋಜಿಸಿರುವ ಬೃಹತ್ ಗೀತೋತ್ಸವ ಪ್ರಯುಕ್ತ ನವೆಂಬರ್ 2 ರಂದು ನಡೆಯಲಿರುವ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಉಡುಪಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ಅಂದು ಸ್ಥಳೀಯ ರಜೆ ಘೋಷಣೆ ಮಾಡುವಂತೆ ಉಡುಪಿ ಜಿಲ್ಲಾಧಿಕಾರಿಗಳಿಗೆ ಶಾಸಕ ಸುವರ್ಣ ಮನವಿ ಮಾಡಿದ್ದಾರೆ.
ದೇಶದ ಪ್ರಧಾನಿಯೋರ್ವರು ಸರಿಸುಮಾರು ಮೂರು ದಶಕಗಳ ಬಳಿಕ (ಚುನಾವಣಾ ಪ್ರಚಾರವನ್ನು ಹೊರತುಪಡಿಸಿ) ಉಡುಪಿಗೆ ಭೇಟಿ ನೀಡುತ್ತಿರುವುದು ಜಿಲ್ಲೆಗೆ ಸಂಭ್ರಮದ ವಿಚಾರವಾಗಿದೆ.
ಜಿಲ್ಲಾಡಳಿತ ಸ್ಥಳೀಯ ರಜೆ ನೀಡಿದಲ್ಲಿ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಜಿಲ್ಲೆಯ ಜನತೆ ಭಾಗಿಯಾಗಲು ಅನುಕೂಲವಾಗಲಿದೆ.
ಪ್ರಧಾನಮಂತ್ರಿಗಳ ಭೇಟಿ ಸಮಯದಲ್ಲಿ ಶಿಷ್ಟಾಚಾರಕ್ಕೆ ಸಂಬಂಧಿಸಿದಂತೆ ವಾಹನಗಳ ಸಂಚಾರ ಮತ್ತು ಸಾರ್ವಜನಿಕ ಓಡಾಟದ ನಿರ್ಬಂಧವಿರುವ ಹಿನ್ನೆಲೆಯಲ್ಲಿ 28ರ ಶುಕ್ರವಾರದಂದು ತುರ್ತು ಮತ್ತು ಅಗತ್ಯ ಸೇವೆಗಳನ್ನು ಹೊರತುಪಡಿಸಿ, ಅಂಗನವಾಡಿ, ಶಾಲಾ-ಕಾಲೇಜು ಹಾಗೂ ಸರಕಾರಿ ಕಛೇರಿಗಳೂ ಸೇರಿದಂತೆ ಜಿಲ್ಲಾದ್ಯಂತ ಒಂದು ದಿನದ ಸಾರ್ವತ್ರಿಕ ಸ್ಥಳೀಯ ರಜೆ ಘೋಷಿಸಬೇಕೆಂದು ಯಶ್ ಪಾಲ್ ಸುವರ್ಣ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು