9:42 PM Tuesday2 - September 2025
ಬ್ರೇಕಿಂಗ್ ನ್ಯೂಸ್
ಸೌಜನ್ಯ ಪ್ರಕರಣ | ಸುಪ್ರೀಂಕೋರ್ಟ್ ಮೊರೆ ಹೋದರೆ ಸಂಪೂರ್ಣ ಬೆಂಬಲ: ಬಿಜೆಪಿ ರಾಜ್ಯಾಧ್ಯಕ್ಷ… ಸರಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ವಿಶೇಷ ಪೌಷ್ಟಿಕ ಆಹಾರ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್… ಕೊಡಗಿನಾದ್ಯoತ ಕೈಲೂ ಮುಹೂರ್ತ ಹಬ್ಬ ಸಂಭ್ರಮ: ಮಾಂಸ ಖರೀದಿ ಜೋರು ಮಗು ಹೊಟ್ಟೆಯಲ್ಲಿರುವಾಗಲೇ ವಾಕ್ ಮತ್ತು ಶ್ರವಣ ಸಮಸ್ಯೆ ಪತ್ತೆ ಹಚ್ಚಲು ಸಾಧ್ಯವಾಗಿರುವುದು ನಿಜಕ್ಕೂ… Kaali river | ಸೂಪಾ ಅಣೆಕಟ್ಟು ಪ್ರದೇಶದಲ್ಲಿ ಭಾರೀ ಮಳೆ: ಪ್ರವಾಹದ ಕುರಿತು… ಸಿದ್ದರಾಮನಹುಂಡಿಯಲ್ಲಿ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಕಟ್ಟಡ ಉದ್ಘಾಟನೆ: ಸಿಎಂ ಚಾಲನೆ ಧರ್ಮಸ್ಥಳ ಯಾತ್ರೆಯಿಂದ ಬಿಜೆಪಿಗೆ ರಾಜಕೀಯ ಲಾಭ ಸಿಗಲಾರದು: ಸಿಎಂ ಸಿದ್ದರಾಮಯ್ಯ ಗಣೇಶ ವಿಸರ್ಜನೆ: ಕುಶಾಲನಗರದಲ್ಲಿ ನಿಯಮ ಉಲ್ಲಂಘಿಸಿದ 5 ಡಿಜೆ ವಾಹನ ಪೊಲೀಸ್ ವಶಕ್ಕೆ ದಂತ ವೈದ್ಯಕೀಯ ಸೇವೆ ಹಳ್ಳಿ ಹಳ್ಳಿಗಳಿಗೂ ತಲುಪಲಿ: ಡೆಂಟಿಸ್ಟ್‌ ಶೃಂಗಸಭೆ-2025 ಸಮಾವೇಶದಲ್ಲಿ ಸಚಿವ… ಗೂಡ್ಸ್ ವಾಹನದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ: ಮಾಲು ಸಹಿತ ಆರೋಪಿ ಬಂಧನ

ಇತ್ತೀಚಿನ ಸುದ್ದಿ

ಬರವಣಿಗೆಯಲ್ಲಿ ಗುಣಮಟ್ಟಕ್ಕೆ ಆದ್ಯತೆ ನೀಡಿ: ಕಲ್ಲಚ್ಚು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಾಹಿತಿ ಮೆಹಂದಳೆ

02/09/2025, 15:49

ಮಂಗಳೂರು(reporterkarnataka.com): ಕರ್ನಾಟಕದ ಒಟ್ಟು ವ್ಯಾಪ್ತಿಯಲ್ಲಿ ವರ್ಷಕ್ಕೆ ಸುಮಾರು ಆರು ಸಾವಿರ ಸಾಹಿತ್ಯ ಕೃತಿಗಳು ಪ್ರಕಟವಾಗುತ್ತಿದ್ದರೂ ಇವುಗಳಲ್ಲಿ ಓದುಗರನ್ನು ಹಿಡಿದಿಟ್ಟುಕೊಳ್ಳುವ ಸಾಮರ್ಥ್ಯ ಇರುವಂತವುಗಳು ಕೇವಲ ಹತ್ತಾರು ಮಾತ್ರ, ಇಂತಹ ಸಂದರ್ಭದಲ್ಲಿ ಬರಹಗಾರರು ಗುಣ ಮಟ್ಟದ ಬರವಣಿಗೆ ಬಗ್ಗೆ ಹೆಚ್ಚು ಅದ್ಯತೆ ನೀಡಬೇಕಾಗಿ ಸಾಹಿತಿ ಸಂತೋಷ ಕುಮಾರ ಮೆಹಂದಳೆ ಅಭಿಪ್ರಾಯಪಟ್ಟರು.
ಕಲ್ಲಚ್ಚು ಪ್ರಕಾಶನದ ಬೆಳ್ಳಿಹಬ್ಬ ‘ರಜತ ರಂಗು’ ಪ್ರಯುಕ್ತ 16ನೇ ಆವೃತ್ತಿಯ 2025ರ ಕಲ್ಲಚ್ಚು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು. ಸೂಕ್ತ ಆನುಭವ ಮತ್ತು ಓದಿನ ಹಿನ್ನೆಲೆಯಿಲ್ಲದೆ, ಕೇವಲ ಗ್ರಂಥಾಲಯ ಸರಬರಾಜಿನ ಉದ್ದೇಶದಿಂದ ಮಾತ್ರ ಕೃತಿ ರಚನೆ ಉತ್ತಮವಲ್ಲ ಎಂದು ಅವರು ಸಂಧರ್ಭದಲ್ಲಿ ಹೇಳಿದರು.

ವಿವಿಧ ಕ್ಷೇತ್ರಗಳ ಕರ್ನಾಟಕದ ಪಂಚ ಸಾಧಕರಾದ ಡಾ ಎಸ್ ಎಮ್ ಶಿವಪ್ರಕಾಶ್, ಡಾ ಪ್ರಕಾಶ ಕೇಶವ ನಾಡಿಗ್, ಜಬೀವುಲ್ಲಾ ಎಂ ಅಸದ್, ರೆಮೊನಾ ಎವೆಟ್ ಪೆರೇರಾ ಮತ್ತು ಗೋಕಾವಿ ಗೆಳೆಯರ ಬಳಗದ ಪರವಾಗಿ ಜಯಾನಂದ ಮಾದರ ಅವರಿಗೆ ಡಾ ಹರಿಕೃಷ್ಣ ಪುನರೂರು ಪ್ರಶಸ್ತಿ ಪ್ರದಾನ ಮಾಡಿದರು. ರಘು ಇಡ್ಕಿದು ಅಭಿನಂದನ ನುಡಿಗಳನ್ನಾಡಿದರು. ಈ ಸಂದರ್ಭದಲ್ಲಿ ಕಲ್ಲಚ್ಚು ಪ್ರಕಾಶನ ಹೊರ ತಂದಿರುವ ಹಿರಿಯ ಲೇಖಕ ಕಡ್ಕೆ ರಾಮ ಅವಭೃತ ಅವರ ಪರ್ಯಟನಾನುಭವ ಕೃತಿ ಬಿಡುಗಡೆ ನಡೆಯಿತು. ಡಾ ಮೀನಾಕ್ಷಿ ರಾಮಚಂದ್ರ, ಡಾ ಶ್ರೀಧರ್ ಅವಭೃತ ಮತ್ತಿತರರು ಉಪಸ್ಥಿತರಿದ್ದರು. ಪ್ರಕಾಶನದ ವ್ಯವಸ್ಥಾಪಕ ಮುಖ್ಯಸ್ಥ ಸಾಹಿತಿ ಮಹೇಶ ಆರ್ ನಾಯಕ್ ಸ್ವಾಗತಿಸಿದರು. ಎನ್ ಸುಬ್ರಾಯ ಭಟ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು