ಇತ್ತೀಚಿನ ಸುದ್ದಿ
ವಿರಾಜಪೇಟೆಯ ಮಾಕುಟ್ಟ ಹೆದ್ದಾರಿಯಲ್ಲಿ ಖಾಸಗಿ ಬಸ್ ಬೆಂಕಿಗಾಹುತಿ: ಒಂದು ತಾಸು ಹೆದ್ದಾರಿ ಬಂದ್
16/12/2025, 11:11
ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com
ಕೇರಳ ಮತ್ತು ಕರ್ನಾಟಕ ಸಂಪರ್ಕ ಕಲ್ಪಿಸುವ ಮಾಕುಟ್ಟ ಹೆದ್ದಾರಿಯಲ್ಲಿ ಖಾಸಗಿ ಬಸ್ ವೊಂದು ಬೆಂಕಿಗೆ ಅಹುತಿಯಾಗಿದೆ. ಇಲ್ಲಿನ ಮಗಡಿಪುರ ಆಂಜನೇಯ ದೇವಾಲಯ ಸಮೀಪ ಮೈಸೂರು ಕಡೆಯಿಂದ ಕೇರಳಕ್ಕೆ ತೆರಳುತ್ತಿದ್ದ ಬಸ್ ಈ ಘಟನೆ ಸಂಭಾವಿಸಿದ್ದು ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ದಿನಪೂರ್ತಿ ಚಾಲನೆಯಲ್ಲಿದ್ದ ಬಸ್ ಕೇರಳದಿಂದ ಮೈಸೂರು ಕಡೆಗೆ ಪ್ರವಾಸಿಗರನ್ನು ಬಿಟ್ಟು ವಾಪಸಾಗುತ್ತಿದ್ದ ವೇಳೆ ಈ ಘಟನೆ ಸಂಭಾವಿಸಿದ್ದು, ಘಟನೆ ವೇಳೆ ಬಸ್ ನಲ್ಲಿ ಚಾಲಕ ಮತ್ತು ನಿರ್ವಾಹಕ ಮಾತ್ರ ಇದ್ದರು ಎನ್ನಲಾಗಿದೆ. ಘಟನೆಯಿಂದ ಒಂದು ಗಂಟೆಗಳ ಕಾಲ ರಾಜ್ಯ ಹೆದ್ದಾರಿ ಬಂದ್ ಆಗಿದ್ದು, ಅಗ್ನಿ ಶಾಮಕ ದಳ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












