3:13 PM Sunday22 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

ಇತ್ತೀಚಿನ ಸುದ್ದಿ

ಕಳಸ ಬಳಿ ಖಾಸಗಿ ಬಸ್ ಪಲ್ಟಿ: ಹಲವರಿಗೆ ಗಾಯ; ಕುದುರೆಮುಖಕ್ಕೆ ಟ್ರೆಕ್ಕಿಂಗ್‌ಗೆ ತೆರಳುತ್ತಿದ್ದಾಗ ದುರ್ಘಟನೆ

20/12/2025, 09:09

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬೆಂಗಳೂರಿನಿಂದ ಕುದುರೆಮುಖ ಟ್ರೆಕ್ಕಿಂಗ್‌ಗೆ ತೆರಳುತ್ತಿದ್ದ ಸುಮಾರು 48 ಮಂದಿಯನ್ನು ಹೊತ್ತೊಯ್ಯುತ್ತಿದ್ದ ಬಸ್ ಕಳಸ ಸಮೀಪದ ಕಚಗಾನೆ ತಿರುವಿನಲ್ಲಿ ಪಲ್ಟಿಯಾದ ಘಟನೆ ಇಂದು ಮುಂಜಾನೆ ನಡೆದಿದೆ.
ಅಪಘಾತದಲ್ಲಿ ಗಾಯಗೊಂಡ ಪ್ರಯಾಣಿಕರನ್ನು ತಕ್ಷಣ ಕಳಸ ಪಟ್ಟಣದ ಖಾಸಗಿ ಕಾವೇರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳೀಯರು ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿದರು. ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾದುದರಿಂದ ಕೆಲವರಿಗೆ ಕೈಕಾಲುಗಳಿಗೆ ಹಾಗೂ ತಲೆಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಅದೃಷ್ಟವಶಾತ್ ಪ್ರಾಣಾಪಾಯ ಸಂಭವಿಸಿಲ್ಲ ಎನ್ನಲಾಗಿದೆ.
ಅಪಘಾತಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು