6:59 AM Tuesday20 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಪ್ರೊ.ಪಿ.ಎಲ್.ಧರ್ಮ ಮಂಗಳೂರು ವಿವಿಯ 10ನೇ ಕುಲಪತಿಯಾಗಿ ನೇಮಕ

05/03/2024, 22:40

 

ಮಂಗಳೂರು (Reporter Karnataka): ಮಂಗಳೂರು ವಿಶ್ವವಿದ್ಯಾನಿಲಯದ 10ನೇ ಕುಲಪತಿಯಾಗಿ ವಿವಿಯ ಮಾಜಿ ಕುಲಸಚಿವ (ಪರೀಕ್ಷಾಂಗ), ರಾಜ್ಯಶಾಸ್ತ್ರ ಉಪನ್ಯಾಸಕ ಪ್ರೊ. ಪಿ.ಎಲ್. ಧರ್ಮ ಅವರು ಮಂಗಳವಾರ ಪ್ರಭಾರ ಕುಲಪತಿ ಪ್ರೊ. ಜಯರಾಜ್ ಅಮಿನ್ ಅವರಿಂದ ಅಧಿಕಾರ ವಹಿಸಿಕೊಂಡರು.

4 ವರ್ಷಗಳಿಂದ ಮಂಗಳೂರು ವಿ.ವಿ. ಕುಲಪತಿಯಾಗಿದ್ದ ಪ್ರೊ|ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯ ಕಳೆದ ವರ್ಷ ಜೂ.2ರಂದು ಸೇವಾ ನಿವೃತ್ತಿ ಹೊಂದಿದ್ದರು. ಬಳಿಕ ಕುಲಪತಿ ಹುದ್ದೆ ಖಾಲಿ ಇತ್ತು. ಮಂಗಳೂರು ವಿ.ವಿ. ರಾಜ್ಯಶಾಸ್ತ್ರ ವಿಭಾಗದ ಹಿರಿಯ ಪ್ರಾಧ್ಯಾಪಕ ಹಾಗೂ ಕಲಾ ನಿಕಾಯದ ಡೀನ್‌ ಪ್ರೊ| ಜಯರಾಜ್‌ ಅಮೀನ್‌ ಅವರು ಜೂ.2ರಿಂದ “ಪ್ರಭಾರ ಕುಲಪತಿ’ಗಳಾಗಿ ಕರ್ತವ್ಯದಲ್ಲಿದ್ದರು.

ಅಧಿಕಾರ ಸ್ವೀಕರಿಸಿದ ದಿನದಿಂದ ನಾಲ್ಕು ವರ್ಷಗಳವರೆಗೆ ಅಥವಾ 67 ವರ್ಷ ಭರ್ತಿಯಾಗುವವರೆಗೆ, ಇವೆರಡಲ್ಲಿ ಯಾವುದು ಮೊದಲೋ ಆ ದಿನಾಂಕದವರೆಗೆ ಪ್ರೊ.ಪಿ.ಎಲ್.ಧರ್ಮ ಕುಲಪತಿಯಾಗಿ ಮುಂದುವರಿಯಲಿದ್ದಾರೆ ಎಂದು ವಿಶ್ವವಿದ್ಯಾಲಯದ ಕುಲಾಧಿಪತಿಯಾಗಿರುವ ರಾಜ್ಯಪಾಲ ಥಾವರಚಂದ್‌ ಗೆಹ್ಲೋಠ್ ಮಂಗಳವಾರ ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು