5:41 AM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ರಾಜ್ಯ ಬಾಯಿ ಆರೋಗ್ಯ ಕಾರ್ಯಕ್ರಮದ ವಿಷನ್ ಸಮಿತಿ ಅಧ್ಯಕ್ಷರಾಗಿ ಪ್ರೊ. ಡಾ. ಅಖ್ತರ್ ಹುಸೇನ್

10/08/2026, 12:31

ಮಂಗಳೂರು:(reporterkarnataka.com):ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ರಾಜ್ಯ ಬಾಯಿ ಆರೋಗ್ಯ ಕಾರ್ಯಕ್ರಮದ (State Oral Health Programme) ವಿಷನ್ ಸಮಿತಿಯ ಅಧ್ಯಕ್ಷರಾಗಿ ಪ್ರೊ. ಡಾ. ಅಖ್ತರ್ ಹುಸೇನ್, MDS, FDSRCPS (Glasgow) ಅವರನ್ನು ನೇಮಕ ಮಾಡಲಾಗಿದೆ.
ಡಾ.ಅಖ್ತರ್ ಹುಸೇನ್ ಅವರು ಕ್ರೇನಿಯೋಫೇಶಿಯಲ್ ಅನಾಮಲಿಸ್ ಕೇಂದ್ರದ ನಿರ್ದೇಶಕರಾಗಿದ್ದು, ಯೆನೆಪೋಯ ದಂತ ವೈದ್ಯಕೀಯ ಕಾಲೇಜು, ಯೆನೆಪೋಯ ವಿಶ್ವವಿದ್ಯಾಲಯದ ಮಾಜಿ ಡೀನ್ ಹಾಗೂ ಪ್ರಾಂಶುಪಾಲರಾಗಿದ್ದಾರೆ. ಅವರು ಇಂಡಿಯನ್ ಆರ್ಥೊಡಾಂಟಿಕ್ ಸೊಸೈಟಿಯ ಮಾಜಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಕರ್ನಾಟಕದಾದ್ಯಂತ ಬಾಯಿ ಆರೋಗ್ಯ ಸೇವೆಗಳನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ವಿಷನ್ ಸಮಿತಿಯು ರಾಜ್ಯ ಸರ್ಕಾರಕ್ಕೆ ಅಗತ್ಯ ಸಲಹೆ ಹಾಗೂ ಮಾರ್ಗದರ್ಶನ ನೀಡಲಿದೆ.

ಬಾಯಿ ಮತ್ತು ದಂತ ರೋಗಗಳ ತಡೆಗಟ್ಟುವಿಕೆ, ಆರಂಭಿಕ ಹಂತದಲ್ಲೇ ಪತ್ತೆಹಚ್ಚುವಿಕೆ, ಆರೋಗ್ಯ ಸೇವೆಗಳ ಸುಲಭ ಲಭ್ಯತೆ ಹಾಗೂ ಬಾಯಿ ಆರೋಗ್ಯವನ್ನು ಸಾಮಾನ್ಯ ಆರೋಗ್ಯ ಸೇವೆಗಳೊಂದಿಗೆ ಸಮಗ್ರಗೊಳಿಸುವುದು ಸೇರಿದಂತೆ ಹಲವು ಪ್ರಮುಖ ಕ್ಷೇತ್ರಗಳಿಗೆ ಸಮಿತಿ ಒತ್ತು ನೀಡಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು