8:37 PM Friday16 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಆಸ್ಪತ್ರೆ, ಶಾಲಾ ಆವರಣ ಕ್ಯಾಂಟೀನ್‌ಗಳಲ್ಲಿ ಜಂಕ್‌ ಫುಡ್‌ ನಿಷೇಧಕ್ಕೆ ಚಿಂತನೆ: ಆರೋಗ್ಯ ಸಚಿವ ಯು.ಟಿ. ಖಾದರ್

19/07/2026, 23:23

ಮಂಗಳೂರು(reporterkarnataka.com):ರಾಜ್ಯದ ಎಲ್ಲ ಆಸ್ಪತ್ರೆ ಹಾಗೂ ಶಾಲೆಗಳ ಆವರಣದಲ್ಲಿರುವ ಕ್ಯಾಂಟೀನ್‌ಗಳಲ್ಲಿ ಆರೋಗ್ಯಕರ ಆಹಾರಗಳನ್ನು ಮಾತ್ರ ಕನಿಷ್ಠ ದರದಲ್ಲಿ ಮಾರಾಟ ಮಾಡಬೇಕು. ಇದನ್ನು ಹೊರತುಪಡಿಸಿ ಯಾವುದೇ ರೀತಿಯ ಜಂಕ್ ಫುಡ್‌ಗಳನ್ನು ಮಾರಾಟ ಮಾಡುವಂತಿಲ್ಲ. ರಾಜ್ಯಾದ್ಯಂತ ಈ ನಿಯಮ ಜಾರಿಗೆ ತರಲು ಚಿಂತನೆ ನಡೆಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ಹೇಳಿದರು.
ಮಂಗಳೂರಿನ ವೆನ್ಲಾಕ್‌ ಸರ್ಕಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಶನಿವಾರ ಕುಂದುಕೊರತೆ ಹಾಗೂ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಎಲ್ಲ ಆಸ್ಪತ್ರೆಗಳ ಹಾಗೂ ಶಾಲೆಗಳ ಕ್ಯಾಂಟೀನ್‌ಗಳಲ್ಲಿ ಜಂಕ್‌ ಆಹಾರ ಮಾರಾಟ ಎಗ್ಗಿಲ್ಲದೆ ನಡೆಯುತ್ತಿದೆ. ಇದಕ್ಕೆ ವಿಪರೀತವಾಗಿ ಅವಲಂಬನೆಯಾಗಿರುವುದು ಕೂಡ ಸಾಕಷ್ಟು ರೋಗಗಳಿಗೆ ಆಹ್ವಾನ ನೀಡಿದಂತಾಗುತ್ತದೆ. ಕ್ಯಾನ್ಸರ್, ಮೂತ್ರಪಿಂಡ ಮೊದಲಾದ ಸಾಂಕ್ರಾಮಿಕವಲ್ಲದ ಕಾಯಿಲೆಗಳು ಹೆಚ್ಚುತ್ತಿವೆ. ಇದನ್ನು ಶಾಲಾ ಅಥವಾ ಆಸ್ಪತ್ರೆ ಹಂತದಲ್ಲೇ ನಿಯಂತ್ರಿಸಿದರೆ, ಕನಿಷ್ಠ ದೇಹದ ಆರೋಗ್ಯವನ್ನೂದರೂ ಕಾಪಾಡಲು ಸಾಧ್ಯವಿದೆ. ಅದಕ್ಕಾಗಿ ಆಸ್ಪತ್ರೆ ಮಾತ್ರವಲ್ಲ ಒಂದರಿಂದ 10ನೇ ತರಗತಿವರೆಗೆ ಇರುವ ಶಾಲೆಗಳ ಸುತ್ತಮುತ್ತ ಕೂಡ ಜಂಕ್ ಫುಡ್ ಮಾರಾಟಕ್ಕೆ ಅವಕಾಶ ನೀಡದಂತೆ ನಿಯಮ ಜಾರಿಗೊಳಿಸಲು ಉದ್ದೇಶಿಸಲಾಗಿದೆ ಎಂದರು.
ಇದಕ್ಕೆ ಪೂರಕವಾಗಿ ಆಹಾರ ಮತ್ತು ಸುರಕ್ಷತಾ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಅನುಷ್ಠಾನಕ್ಕೆ ತರಲು ತೀರ್ಮಾನಿಸಲಾಗಿದೆ. ಮಾಲ್‌ ಸೇರಿದಂತೆ ವಿವಿಧ ಕಡೆಗಳಲ್ಲಿ ಮಾರಾಟ ಮಾಡುವ ಆಹಾರ ವಸ್ತುಗಳ ಗುಣಮಟ್ಟವನ್ನು ಕಡ್ಡಾಯವಾಗಿ ಪರೀಕ್ಷೆಗೆ ಒಳಪಡಿಸಿ, ಗುಣಮಟ್ಟ ರಹಿತ ಆಹಾರ ವಸ್ತುಗಳ ಮಾರಾಟವನ್ನು ನಿರ್ಬಂಧಿಸಲಾಗುವುದು. ಮಾತ್ರವಲ್ಲ ಅಂತಹವುಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಬೆಂಗಳೂರಿನಲ್ಲಿ ಹಾಲಿ ಇರುವ ಆಹಾರ ಗುಣಮಟ್ಟ ತಪಾಸಣಾ ಲ್ಯಾಬ್‌ನ್ನು ಅತ್ಯುತ್ಕೃಷ್ಟ ಮಟ್ಟದಲ್ಲಿ ಮೇಲ್ದರ್ಜೆಗೆ ಪಿಪಿಪಿ ಮಾದರಿಯಲ್ಲಿ ಏರಿಸಲು ನಿರ್ಧರಿಸಲಾಗಿದೆ. ಅಲ್ಲಿ ಆಹಾರ ವಸ್ತುಗಳ ತಪಾಸಣೆ ನಡೆಸಿ ನೀಡುವ ವರದಿಯನ್ನು ಸುಪ್ರೀಂ ಕೋರ್ಟ್‌ ಕೂಡ ಸಮ್ಮತಿಸುವಂತೆ ಇರಬೇಕು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು