11:36 PM Wednesday6 - August 2025
ಬ್ರೇಕಿಂಗ್ ನ್ಯೂಸ್
ಮತದಾರರ ಹಕ್ಕು ರಕ್ಷಣೆ ರಾಜಕೀಯ ಪಕ್ಷಗಳ ಕರ್ತವ್ಯ: ಡಿಸಿಎಂ ಡಿ.ಕೆ. ಶಿವಕುಮಾರ್ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ‘ರಿದಂ ಆಫ್ ಬಿಎಲ್‌ಆರ್‌’: ವಿಶಿಷ್ಟ ಧ್ವನಿ ಗುರುತು… ಶಿಬು ಸೊರೇನ್ ನಿಧನ: ಮತಗಳ್ಳತನ ವಿರುದ್ಧ ಪ್ರತಿಭಟನಾ ಸಭೆ ಆ. 8ಕ್ಕೆ ಮುಂದೂಡಿಕೆ:… ವಿಶ್ವ ವಿಖ್ಯಾತ ಮೈಸೂರು ದಸರಾ: ಪುಷ್ಪಾರ್ಚನೆ ಮೂಲಕ ಅಭಿಮನ್ಯು ನೇತೃತ್ವದ ಗಜ ಪಯಣಕ್ಕೆ… Shivamogga | ತೀರ್ಥಹಳ್ಳಿ: ಮನೆಗಾಗಿ ಸಾಲ; ಮನನೊಂದ ವೃದ್ದ ದಂಪತಿ ಒಂದೇ ಮರಕ್ಕೆ… Kodagu | ಬೆಕ್ಕೆಸುಡ್ಲೂರಿನಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಪಲ್ಟಿ: ಕುಟ್ಟ- ಪೊನ್ನಂಪೇಟೆ… Kodagu | ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ: ರ್‍ಯಾಂಬುಟನ್ ಹಣ್ಣು ಮಾರಾಟಕ್ಕೆ ನಿರ್ಬಂಧ; ವ್ಯಾಪಾರಸ್ಥರ… SIT | ಧರ್ಮಸ್ಥಳ ಪ್ರಕರಣ: ದೂರು ನೀಡಲು ಮತ್ತೊಬ್ಬ ದೂರುದಾರ ಎಸ್ಐಟಿ ಕಚೇರಿಗೆ… ಸುಹಾಸ್ ಶೆಟ್ಟಿ ಮರ್ಡರ್ ಕೇಸ್: ಕಾಫಿನಾಡು ಕಳಸದಲ್ಲಿ ಎನ್ಐಎ ಅಧಿಕಾರಿಗಳಿಂದ ಮಾಹಿತಿ ಸಂಗ್ರಹ Bangaluru | ನಮ್ಮ ಮೆಟ್ರೋದಲ್ಲಿ ಮೊದಲ ಬಾರಿಗೆ ಯಕೃತ್‌ ರವಾನೆ: ಸ್ಪರ್ಶ್‌ ಆಸ್ಪತ್ರೆಯಲ್ಲಿ…

ಇತ್ತೀಚಿನ ಸುದ್ದಿ

ಮತದಾರರ ಹಕ್ಕು ರಕ್ಷಣೆ ರಾಜಕೀಯ ಪಕ್ಷಗಳ ಕರ್ತವ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

06/08/2025, 22:45

ಬೆಂಗಳೂರು(reporterkarnataka.com):“ಮತಗಳ್ಳತನ ವಿಚಾರವನ್ನು ನಮ್ಮ ಹೈಕಮಾಂಡ್ ನಾಯಕರು ಗಂಭೀರವಾಗಿ ಪರಿಗಣಿಸಿದ್ದು, ಮತದಾರರ ಹಕ್ಕಿನ ರಕ್ಷಣೆ ಮಾಡಬೇಕಾಗಿರುವುದು ರಾಜಕೀಯ ಪಕ್ಷಗಳ ಕರ್ತವ್ಯ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.
ಕೆಪಿಸಿಸಿ ಕಚೇರಿ ಆವರಣದಲ್ಲಿ ಬುಧವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದರು.
ಆಗಸ್ಟ್ 8ರಂದು ನಡೆಯಲಿರುವ ಪ್ರತಿಭಟನೆ ಬಗ್ಗೆ ಕೇಳಿದಾಗ, “ನಮ್ಮ ಮೈತ್ರಿ ನಾಯಕ ಶಿಬು ಸೊರೇನ್ ಅವರ ನಿಧನವಾದ ಕಾರಣಕ್ಕೆ ಆಗಸ್ಟ್ 5ರಂದು ನಡೆಸಬೇಕಾಗಿದ್ದ ಪ್ರತಿಭಟನೆಯನ್ನು ಆಗಸ್ಟ್ 8ಕ್ಕೆ ಮುಂದೂಡಲಾಯಿತು. ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು 8ರ ಬೆಳಗ್ಗೆ 10.30ಕ್ಕೆ ಆಗಮಿಸಲಿದ್ದು, ಚುನಾವಣೆ ಸಮಯದಲ್ಲಿ ಆಗಿರುವ ಅಕ್ರಮಗಳ ಬಗ್ಗೆ ದಾಖಲೆಗಳ ಸಮೇತ ಆಯೋಗಕ್ಕೆ ಮನವರಿಕೆ ಮಾಡಿಕೊಡುವ ಪ್ರಯತ್ನ ಮಾಡುತ್ತೇವೆ” ಎಂದು ತಿಳಿಸಿದರು.


ಆಯೋಗಕ್ಕೆ ಯಾವ ದಾಖಲೆಗಳನ್ನು ನೀಡುತ್ತೀರಿ ಎಂದು ಕೇಳಿದಾಗ, “ಈ ವಿಚಾರವನ್ನು ನಾನು ಬಹಿರಂಗಪಡಿಸುವುದಿಲ್ಲ. ಇದು ರಾಷ್ಟ್ರೀಯ ವಿಚಾರ ಆಗಿರುವ ಹಿನ್ನೆಲೆಯಲ್ಲಿ ನಮ್ಮ ನಾಯಕರು ಮಾಧ್ಯಮಗೋಷ್ಠಿ ನಡೆಸಿ ಮಾಹಿತಿ ನೀಡಲಿದ್ದಾರೆ” ಎಂದು ತಿಳಿಸಿದರು.
ಮೆರವಣಿಗೆ ನಡೆಯಲಿದೆಯೇ ಎಂದು ಕೇಳಿದಾಗ, “ಸ್ವಾತಂತ್ರ್ಯ ಉದ್ಯಾನದಲ್ಲಿ ಕಾನೂನು ಚೌಕಟ್ಟಿನಲ್ಲಿ ಪ್ರತಿಭಟನೆ ನಡೆಯಲಿದೆ” ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು