ಇತ್ತೀಚಿನ ಸುದ್ದಿ
ಬಾಳೆಹೊನ್ನೂರು ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಕೇಂದ್ರ ಸರ್ಕಾರ ವಿರುದ್ಧ ಪ್ರತಿಭಟನೆ
10/07/2025, 16:13

ಕೊಪ್ಪ(reporterkarnataka.com): ಬಾಳೆಹೊನ್ನೂರು ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ರಸಗೊಬ್ಬರ ಬೆಲೆ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ನಡೆಯನ್ನು ಖಂಡಿಸಿ ನರಸಿಂಹರಾಜಪುರದ ತಾಲೂಕು ಆಫೀಸ್ ಮುಂದೆ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಕಾಡ ಅಧ್ಯಕ್ಷರಾದ ಡಾ. ಅಂಶುಮಂತ್,ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀಜಿತ್ ಗೌಡ ದಂಡಿನಮಕ್ಕಿ,ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಮಂಜೇಶ್ ಬಿಳುವ, ಅಭಿಲಾಶ್ ಎಂ.ಪಿ., ಕೌಶಿಕ್ ಪಟೇಲ್, ಬಾಳೆಹೊನ್ನೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ರತನ್ ಗೌಡ ಅರಗಿ ಹಾಗೂ ಬ್ಲಾಕ್ ಕಾಂಗ್ರೆಸ್ ನ ಹಿರಿಯ ಕಿರಿಯ ಯುವ ಮುಖಂಡರುಗಳು ಭಾಗವಹಿಸಿದ್ದರು.