6:43 PM Saturday27 - June 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್…

ಇತ್ತೀಚಿನ ಸುದ್ದಿ

ಮತಗಳ್ಳತನದ ವಿರುದ್ಧ ರಾಹುಲ್ ನೇತೃತ್ವದಲ್ಲಿ ಆ.5ರಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ: ಡಿಸಿಎಂ ಡಿ.ಕೆ.ಶಿವಕುಮಾರ್

31/07/2025, 21:20

ಬೆಂಗಳೂರು(reporterkarnataka.com): ಮತಗಳ್ಳತನದ ವಿರುದ್ಧ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಆಗಸ್ಟ್ 5 ರಂದು ನಗರದ‌ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಲಾಗುವುದು. ನಂತರ ಚುನಾವಣಾ ಆಯೋಗದ ಕಚೇರಿಗೆ ತೆರಳಿ ಮನವಿಪತ್ರ ಸಲ್ಲಿಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.
ಕೆಪಿಸಿಸಿ ಕಚೇರಿ ಹಾಗೂ ಸ್ವಾತಂತ್ರ್ಯ ಉದ್ಯಾನದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಮಾತನಾಡಿದರು.
ಮತದಾರರ ಹಕ್ಕು, ಸಂವಿಧಾನದ ರಕ್ಷಣೆ ಮಾಡಬೇಕಿದೆ. ಕರ್ನಾಟಕದ ಭೂಮಿಯಿಂದಲೇ ಈ ಹೋರಾಟ ಪ್ರಾರಂಭ ಮಾಡಿದರೆ ಹೆಚ್ಚಿನ ಶಕ್ತಿ ದೊರೆಯುತ್ತದೆ ಎಂದು ರಾಹುಲ್ ಗಾಂಧಿಯವರು ಇಲ್ಲಿಂದ ಪ್ರಾರಂಭ ಮಾಡುತ್ತಿದ್ದಾರೆ. ವಿಧಾನಸಭೆ, ಲೋಕಸಭೆ ಚುನಾವಣೆ ವೇಳೆ ಆದಂತಹ ಹಲವಾರು ಲೋಪದೋಷಗಳನ್ನು ನಮ್ಮ ನಾಯಕರು ಎತ್ತಿಹಿಡಿಯಲಿದ್ದಾರೆ ಎಂದು ತಿಳಿಸಿದರು.
ನಮ್ಮ ಸರ್ಕಾರವೇ ಮಾಡಿರುವ ನಿಯಮಗಳು ಹಾಗೂ ನ್ಯಾಯಾಲಯ ನೀಡಿರುವ ನಿರ್ದೇಶನದ ಮೇರೆಗೆ ಪ್ರತಿಭಟನೆ ನಡೆಸಲಾಗುವುದು. ಮುಖಂಡರು, ಕಾರ್ಯಕರ್ತರು ಈ ಪ್ರತಿಭಟನೆಯಲ್ಲಿ ಭಾಗವಹಿಸಬೇಕು ಎಂದು ತಿಳಿಸಲಾಗಿದೆ. ರಾಜ್ಯದ ಎಲ್ಲಾ ಬ್ಲಾಕ್ ಗಳಿಂದ ಪ್ರತಿನಿಧಿಗಳು ಹಾಜರಾಗಬೇಕು ಎಂದು ಆಹ್ವಾನ ನೀಡಲಾಗಿದೆ ಎಂದರು.
ಕರಡು ಮತದಾರರ‌ ಪಟ್ಟಿಯ ಬಗ್ಗೆ ಏಕೆ ಕಾಂಗ್ರೆಸ್ ಈ‌‌ ಮೊದಲೇ ಆಕ್ಷೇಪಣೆ ಸಲ್ಲಿಸಲಿಲ್ಲ ಎಂದಾಗ, “ನಾವು ಆಕ್ಷೇಪಣೆ ಸಲ್ಲಿಸಿದ್ದೆವು. ಆದರೆ ಚುನಾವಣಾ ಆಯೋಗ ಅದನ್ನು ಸ್ವೀಕರಿಸಲಿಲ್ಲ. ಮಹದೇವರಪುರ ಕ್ಷೇತ್ರದಲ್ಲಿ ಅಭ್ಯರ್ಥಿ ನಾಗೇಶ್ ಅವರು ಹಾಗೂ ಅವರ ಮಗ ದಾಖಲೆಗಳನ್ನು ತೊರಿಸಿದರು. ದಿನೇಶ್ ಗುಂಡೂರಾವ್ ಕ್ಷೇತ್ರ ಗಾಂಧಿನಗರದಲ್ಲೂ ಇದೇ ರೀತಿ ನಡೆದಿದೆ. ಇಲ್ಲಿ ಒಂದು ವಾರ್ಡ್ ನಲ್ಲಿ 7 ಸಾವಿರದಷ್ಟು ಮತದಾರರ ಸೇರ್ಪಡೆಯಾಗಿದೆ ಎಂದರು‌.
ಪಾದಯಾತ್ರೆ ಎಲ್ಲಿಂದ ಎಲ್ಲಿಯವರೆಗೆ ಇರಲಿದೆ ಎಂದು ಕೇಳಿದಾಗ, “ನಾವು ಪಾದಯಾತ್ರೆ ಮಾಡುತ್ತಿಲ್ಲ. ಸ್ವಾತಂತ್ರ್ಯ ಉದ್ಯಾನದಲ್ಲಿ ಸೇರಿ ನಮ್ಮ ವಿಚಾರ ಜನರಿಗೆ ತಿಳಿಸುತ್ತೇವೆ. ನಂತರ ಐದಾರು ನಾಯಕರು ಚುನಾವಣಾ ಆಯೋಗ ಕಚೇರಿಗೆ ಹೋಗಿ ಮನವಿ ಸಲ್ಲಿಸುತ್ತೇವೆ” ಎಂದು ಅವರು ನುಡಿದರು.
ನಡಿಗೆ ಮೂಲಕ ಹೋಗುತ್ತೀರಾ ಎಂದು ಕೇಳಿದಾಗ, “ಪೊಲೀಸರು ವಾತಾವರಣ ನೋಡಿ ಯಾವ ಸಲಹೆ ನೀಡುತ್ತಾರೋ ಆ ರೀತಿ ಮಾಡುತ್ತೇವೆ. ನಡಿಗೆ ಮೂಲಕ ಆದರೂ ಹೋಗಬಹುದು ಅಥವಾ ವಾಹನದಲ್ಲಿಯಾದರೂ ತೆರಳಬಹುದು” ಎಂದರು.
ಯಾವ ಕ್ಷೇತ್ರಗಳ ದಾಖಲೆ ಬಿಡುಗಡೆ ಮಾಡುತ್ತೀರಾ ಎಂದು ಕೇಳಿದಾಗ, “ಈ ವಿಚಾರವನ್ನು ರಾಹುಲ್ ಗಾಂಧಿ ಅವರು ತೀರ್ಮಾನ ಮಾಡಿ ಬಹಿರಂಗಪಡಿಸಿದ್ದಾರೆ. ನಾನು ಈ ವಿಚಾರವಾಗಿ ಏನು ಹೇಳುವುದಿಲ್ಲ” ಎಂದರು.
ಚುನಾವಣೆಯಾದ 45 ದಿನಗಳವರೆಗೂ ಕಾಂಗ್ರೆಸ್ ನವರು ಏನು ಮಾಡುತ್ತಿದ್ದರು ಎಂಬ ಬಿಜೆಪಿ ಪ್ರಶ್ನೆ ಬಗ್ಗೆ ಕೇಳಿದಾಗ, “ನಾವು ಚುನಾವಣೆ ನಂತರ ಮಲಗಿದ್ದೆವು. ಅಧಿಕಾರ ಪ್ರಮಾಣ ವಚನ ಸ್ವೀಕರಿಸಿ, ಐದು ಗ್ಯಾರಂಟಿ ಯೋಜನೆ ಜಾರಿ ಮಾಡಿ ಜನರಿಗೆ ಅನುಕೂಲ ಮಾಡಿಕೊಟ್ಟೆವು” ಎಂದು ತಿರುಗೇಟು ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು