2:26 AM Thursday15 - January 2026
ಬ್ರೇಕಿಂಗ್ ನ್ಯೂಸ್
ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ…

ಇತ್ತೀಚಿನ ಸುದ್ದಿ

ಪಾಲಿಕೆ ಖಾಯಂ ನೌಕರರ ಪ್ರತಿಭಟನೆ: ಶಾಸಕ ವೇದವ್ಯಾಸ ಕಾಮತ್ ಭೇಟಿ; ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಜತೆ ಮಾತುಕತೆ

11/07/2025, 12:59

ಮಂಗಳೂರು(reporterkarnataka.com): ವಿವಿಧ ಬೇಡಿಕೆಗಳ ಆಗ್ರಹಿಸಿ ಮಂಗಳೂರಿನ ಎಸ್.ಕೆ. ಮುನ್ಸಿಪಲ್ ಎಂಪ್ಲಾಯಿಸ್ ಯೂನಿಯನ್ ನೇತೃತ್ವದಲ್ಲಿ, ಮಂಗಳೂರು ಮಹಾನಗರ ಪಾಲಿಕೆ ಮುಂಭಾಗದಲ್ಲಿ ಗುರುವಾರ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಶಾಸಕ ವೇದವ್ಯಾಸ ಕಾಮತ್ ರವರು ಭೇಟಿ ನೀಡಿ ಮಾತುಕತೆ ನಡೆಸಿದರು.
ಪ್ರತಿಭಟನಾಕಾರರ ಬೇಡಿಕೆ ಹಾಗೂ ಸಮಸ್ಯೆಗಳನ್ನು ಆಲಿಸಿದ ಶಾಸಕರು, ಸ್ಥಳದಲ್ಲಿಯೇ ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಗಳಾದ ದೀಪಾ ಚೋಳನ್ ಅವರಿಗೆ ಕರೆಮಾಡಿ, ಇಲ್ಲಿ ನಡೆಯುತ್ತಿರುವ ಪ್ರತಿಭಟನೆಯಿಂದಾಗಿ ಮಂಗಳೂರು ಜನತೆಗೆ ತೀವ್ರ ತೊಂದರೆಯಾಗುತ್ತಿದೆ. ಅವರ ನ್ಯಾಯಯುತ ಬೇಡಿಕೆಗಳನ್ನು ಕಡೆಗಣಿಸುವ ಬದಲು ಬಗೆಹರಿಸುವ ನಿಟ್ಟಿನಲ್ಲಿ ಕೂಡಲೇ ಸಭೆ ಕರೆಯಿರಿ ಎಂದು ಮನವಿ ಮಾಡಿದರು. ಶಾಸಕರ ಸಲಹೆಯ ಮೇರೆಗೆ ಕಾರ್ಯದರ್ಶಿಗಳು ಬೆಂಗಳೂರಿನಲ್ಲಿಯೂ ಪ್ರತಿಭಟನೆ ನಡೆಯುತ್ತಿದ್ದು ಇಲ್ಲಿನ ಪ್ರಮುಖರೊಂದಿಗೆ ಶುಕ್ರವಾರ ಮಧ್ಯಾಹ್ನವೇ ಸಭೆ ನಡೆಸುತ್ತೇವೆಂದು ತಿಳಿಸಿದರು.

ಶಾಸಕರು ಅದನ್ನು ಪ್ರತಿಭಟನಾಕಾರರಿಗೆ ಮನವರಿಕೆ ಮಾಡಿ, ಪ್ರತಿಭಟನೆ ನಿಮ್ಮ ಸಂವಿಧಾನಬದ್ಧ ಹಕ್ಕು, ಅದಕ್ಕೆ ಅಭ್ಯಂತರವಿಲ್ಲ. ಆದರೆ ನಗರದಲ್ಲಿ ಕಸ ವಿಲೇವಾರಿ ಸೇರಿದಂತೆ ಅನೇಕ ಕೆಲಸಗಳು ಸ್ಥಗಿತಗೊಂಡ ಪರಿಣಾಮ ಸಮಸ್ಯೆಯಾಗಿದೆ. ಮಂಗಳೂರಿನ ಜನತೆಗೆ ನಿಮ್ಮ ಸೇವೆ ಅತ್ಯಂತ ಅಗತ್ಯವಾಗಿದ್ದು ಯಾರಿಗೂ ತೊಂದರೆಯಾಗದಂತೆ ದಯವಿಟ್ಟು ಸಹಕರಿಸಿ. ನಿಮ್ಮ ಎಲ್ಲಾ ಕಷ್ಟಗಳನ್ನು ಖಂಡಿತವಾಗಿಯೂ ಮುಂಬರುವ ಅಧಿವೇಶನದಲ್ಲಿ ಪ್ರಸ್ತಾಪಿಸಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುತ್ತೇನೆ. ಗ್ಯಾರಂಟಿಯಿಂದಾಗಿ ಈಗಾಗಲೇ ಎಲ್ಲಾ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆಯಾಗಿದೆ ಎಂದು ಸ್ವತಃ ಆಡಳಿತ ಪಕ್ಷದವರೇ ಹೇಳುತ್ತಿದ್ದಾರೆ. ಹಾಗಿರುವಾಗ ನಿಮ್ಮ ಬೇಡಿಕೆಗಳನ್ನು ಈಡೇರಿಸುತ್ತಾರೋ, ಇಲ್ಲವೋ ಗೊತ್ತಿಲ್ಲ. ಆದರೂ ನಾನಂತೂ ನಿಮ್ಮ ಪರವಾಗಿ ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು