1:23 AM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಎಸ್‌ಟಿಪಿಗಳ ನಿರ್ವಹಣೆಗೆ ಹೆಚ್ಚಿನ ಅನುದಾನ ನೀಡಿ: ಸರಕಾರಕ್ಕೆ ಶಾಸಕ ಡಾ. ಭರತ್ ಶೆಟ್ಟಿ ಆಗ್ರಹ

08/05/2026, 20:22

ಸುರತ್ಕಲ್(reporterkarnataka.com): ಪಲ್ಗುಣಿ ನದಿಗೆ ಒಳಚರಂಡಿ ತ್ಯಾಜ್ಯ ನೀರನ್ನು ನೇರವಾಗಿ ಬಿಡುತ್ತಿರುವುದು ಹಾಗೂ ವಿವಿಧ ಭಾಗಗಳಲ್ಲಿ ಒಳಚರಂಡಿ ಸೋರಿಕೆ ಸಂಭವಿಸುತ್ತಿರುವ ಪರಿಣಾಮ ಮೀನುಗಳು ಸಾವನ್ನಪ್ಪುತ್ತಿದ್ದು ಸರಕಾರವೇ ಪರೋಕ್ಷ ಕಾರಣ ಎಂದು ಆರೋಪಿಸಿರುವ ಶಾಸಕ ಡಾ.ಭರತ್ ಶೆಟ್ಟಿ ಅವರು ಸರಕಾರ ಎಸ್ ಟಿಪಿಗಳ ನಿರ್ವಹಣೆಗೆ ಹೆಚ್ಚಿನ ಅನುದಾನ ಪಾಲಿಕೆಗೆ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಸರಕಾರಕ್ಕೆ ಪತ್ರ ಬರೆದಿದ್ದಾರೆ.
ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಎಸ್‌ಟಿಪಿಗಳನ್ನು (ಮಲಿನ ನೀರು ಶುದ್ಧೀಕರಣ ಘಟಕ) ಸಮರ್ಪಕವಾಗಿ ನಿರ್ವಹಣೆ ಮಾಡದೇ ಇರುವುದರಿಂದ ಈ ಸಮಸ್ಯೆ ಮತ್ತಷ್ಟು ಗಂಭೀರವಾಗುತ್ತಿದೆ. ಸರ್ಕಾರದಿಂದ ನಿರ್ವಹಣಾ ವೆಚ್ಚಕ್ಕೆ ಅಗತ್ಯ ಅನುದಾನ ಬಿಡುಗಡೆ ಆಗದೇ ಇರುವುದರಿಂದ ಘಟಕಗಳ ಕಾರ್ಯಕ್ಷಮತೆ ಕುಂಠಿತಗೊಂಡಿದೆ ಎಂದು ಅವರು ಆರೋಪಿಸಿದ್ದಾರೆ.
ಬಹುತೇಕ ಎಸ್‌ಟಿಪಿಗಳಲ್ಲಿ ಅಳವಡಿಸಲಾದ ಜನರೇಟರ್‌ಗಳು ಸಕಾಲದಲ್ಲಿ ದುರಸ್ತಿ ಆಗದೇ ಇರುವ ಕಾರಣ, ವಿದ್ಯುತ್ ವ್ಯತ್ಯಯ ಉಂಟಾದ ಸಂದರ್ಭಗಳಲ್ಲಿ ಒಳಚರಂಡಿ ನೀರನ್ನು ಸಂಸ್ಕರಿಸದೇ ನೇರವಾಗಿ ನದಿಗಳಿಗೆ ಬಿಡಲಾಗುತ್ತಿದೆ. ಇದು ಪರಿಸರಕ್ಕೆ ಹಾಗೂ ಸಾರ್ವಜನಿಕ ಆರೋಗ್ಯಕ್ಕೆ ಗಂಭೀರ ಅಪಾಯ ಉಂಟುಮಾಡುತ್ತಿದೆ. ಇನ್ನೊಂದೆಡೆ ಜಲಚರಗಳುಸಾವನ್ನಪ್ಪುತ್ತಿದೆ ಎಂದು ತಿಳಿಸಿದ್ದಾರೆ.
ಒಳಚರಂಡಿ ತ್ಯಾಜ್ಯ ನೀರನ್ನು ನದಿಗಳಿಗೆ ಹರಿಸುವ ಮೂಲಕ ಸರ್ಕಾರವೇ ಪರಿಸರ ಮಾಲಿನ್ಯಕ್ಕೆ ಕಾರಣವಾಗುತ್ತಿರುವುದು ಖಂಡನೀಯ ಸಂಗತಿ. ತಕ್ಷಣವೇ ಎಸ್‌ಟಿಪಿಗಳ ಸಮರ್ಪಕ ನಿರ್ವಹಣೆಗೆ ಅಗತ್ಯ ಅನುದಾನ ಬಿಡುಗಡೆ ಮಾಡಿ, ತಾಂತ್ರಿಕ ದೋಷಗಳನ್ನು ಸರಿಪಡಿಸಿ, ನದಿಗಳ ಮಾಲಿನ್ಯ ತಡೆಗೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಡಾ. ಭರತ್ ಶೆಟ್ಟಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು