3:56 AM Wednesday17 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಬಂಟ್ವಾಳದಲ್ಲಿ ಪ್ರಾಂತೀಯ ಹಿಂದೂ ರಾಷ್ಟ್ರ ಅಧಿವೇಶ ಶಂಖನಾದದೊಂದಿಗೆ ಆರಂಭ

16/03/2025, 15:35

ಬಂಟ್ವಾಳ(reporterkarnataka.com): ಪರಿಶುದ್ಧ ಗಂಗೆ ಸ್ವರೂಪ ಹಿಂದೂ ಧರ್ಮ, ಈ ಹಿಂದೂ ಧರ್ಮದ ಮೇಲೆ ನಿರಂತರ ಆಘಾತ ನಡೆಯುತ್ತಿದೆ. ಹೋಳಿ ಇರಲಿ, ದೀಪಾವಳಿ ಇರಲಿ ಹಿಂದೂಗಳಲ್ಲಿ ಸಾಂಸ್ಕೃತಿಕ ಆಘಾತ ನಡೆಯುತ್ತಿದೆ. ಹಿಂದೂಗಳ ಆಚರಣೆಯ ಬಗ್ಗೆ ಪ್ರಸಾರ ಮಾಧ್ಯಮಗಳ ಮುಖಾಂತರ ಅಪಹಾಸ್ಯ ಮಾಡಲಾಗುತ್ತಿದೆ. ಹಿಂದೂಗಳ ಶ್ರದ್ಧಾ ಕೇಂದ್ರಗಳಾದ ದೇವಸ್ಥಾನಗಳ ಮೇಲೆ ಆರೋಪಗಳನ್ನು ಮಾಡಲಾಗುತ್ತದೆ. ಹಿಂದೂ ಸಮಾಜ ಜಾಗೃತವಾದರೆ ಇತರ ಪಂಥೀಯರು ಏನೂ ಮಾಡಲು ಸಾಧ್ಯವಿಲ್ಲ. ಸಂತರ ಮೇಲೆ ಆರೋಪಗಳನ್ನು ಹಾಕಲಾಗುತ್ತದೆ, ಆಕ್ರಮಣಗಳನ್ನು ಮಾಡಲಾಗುತ್ತದೆ. ಎಡಪಂಥೀಯರು ಕ್ರಿಟಿಕಲ್ ರೇಸ್ ಥಿಯರಿ ಮುಖಾಂತರ ಹಿಂದೂಗಳನ್ನು ಜಾತಿ ಮತ ಪಂಥಗಳ ಹೆಸರಿನಲ್ಲಿ ವಿಭಜನೆಯನ್ನು ಮಾಡಲಾಗುತ್ತಿದೆ. ಅಮೆರಿಕದಿಂದ ಪ್ರಾಯೋಜಿತ ಮತಾಂತರ ಹಾಗೂ ದೇಶ ವಿರೋಧಿ ಷಡ್ಯಂತ್ರಕ್ಕೆ ಹಿಂದೂ‌ ಸಮಾಜ ವ್ಯಾಪಕವಾಗಿ ಬಲಿಯಾಗುತ್ತಿದೆ. ಇದೆಲ್ಲದಕ್ಕೂ ಪರಿಹಾರವೆಂದರೆ ನಮ್ಮ ಧರ್ಮ ರಕ್ಷಣೆ ನಮ್ಮದೇ ಕರ್ತವ್ಯವಾಗಿದೆ ಎಂಬ ಅರಿವು ನಮ್ಮಲ್ಲಿ ನಿರ್ಮಾಣವಾಗಬೇಕು. ಧರ್ಮ ರಕ್ಷಣೆಗಾಗಿ ಸರ್ವಸ್ವದ ತ್ಯಾಗ ಮಾಡಲು ನಾವು ಸಿದ್ಧರಾಗಿರಬೇಕು ಎಂದು
ಚಕ್ರವರ್ತಿ ಸೂಲಿಬೆಲೆ ಹೇಳಿದರು.


ಹಿಂದೂ ರಾಷ್ಟ್ರದ ಸ್ಥಾಪನೆಗಾಗಿ ಭಾನುವಾರದಂದು ಬಿ.ಸಿ. ರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ಪ್ರಾಂತೀಯ ಹಿಂದೂ ರಾಷ್ಟ್ರ ಅಧಿವೇಶನವು ಶಂಖನಾದ ಮತ್ತು ವೇದಮಂತ್ರ ಪಠಣದೊಂದಿಗೆ ಪ್ರಾರಂಭಿಸಲಾಯಿತು. ಅಧಿವೇಶನದ ಉದ್ಘಾಟನೆಯನ್ನು ಅದಮಾರು ಮಠದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು, ಸನಾತನ ಸಂಸ್ಥೆಯ ಸಂತರಾದ ಪೂಜ್ಯ ರಮಾನಂದ ಗೌಡ, ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾ. ಕೃಷ್ಣಮೂರ್ತಿ, ಯುವ ಬ್ರಿಗೇಡ್‌ನ ಸಂಸ್ಥಾಪಕ
ಚಕ್ರವರ್ತಿ ಸೂಲಿಬೆಲೆ, ಉದ್ಯಮಿಗಳಾದ ಎಂ. ಜೆ. ಶೆಟ್ಟಿ ಮತ್ತು ಹಿಂದೂ ಜನಜಾಗೃತಿ ಸಮಿತಿಯ ರಾಜ್ಯ ಸಮನ್ವಯಕರಾದ ಗುರುಪ್ರಸಾದ್ ಗೌಡ ಅವರ ದಿವ್ಯ ಹಸ್ತಗಳಿಂದ ದೀಪ ಪ್ರಜ್ವಲನೆಯನ್ನು ಮಾಡಿ ಅಧಿವೇಶನದ ಉದ್ಘಾಟನೆಯನ್ನು ಮಾಡಲಾಯಿತು.
*ಸ್ವಾರ್ಥ ಮರೆತು ನಾವು ಪರಮಾರ್ಥದ ಕಡೆಗೆ ಹೋಗಬೇಕಾಗಿದೆ! – ನ್ಯಾಯವಾದಿ ಶ್ರೀ. ಕೃಷ್ಣಮೂರ್ತಿ:*
ಸ್ವಾರ್ಥ ಮರೆತು ನಾವು ಪರಮಾರ್ಥದ ಕಡೆಗೆ ಹೋಗಬೇಕಾಗಿದೆ, ವಿವಿಧ ಸಂಘಟೆನೆಗಳೆಲ್ಲಾ ಸೇರಿ ಹಿಂದೂ ರಾಷ್ಟ್ರದೆಡೆಗೆ ಸಾಗಬೇಕಾಗಿದೆ. ಇದಕ್ಕಾಗಿ ನ್ಯಾಯ ವ್ಯವಸ್ಥೆಯನ್ನು ಅರಿತುಕೊಂಡು ಅದರ ಸದುಪಯೋಗವನ್ನು ಮಾಡಬೇಕು. ನ್ಯಾಯವಾದಿಗಳು ತಮ್ಮ ಕರ್ತವ್ಯವೆಂದು ರಾಷ್ಟ್ರ ಮತ್ತು ಧರ್ಮದ ವಿಚಾರಗಳಲ್ಲಿ ದಿಟ್ಟ ಹೆಜ್ಜೆಗಳನ್ನಿಡಬೇಕು ಎಂದು ಉಪಸ್ಥಿತ ವಕೀಲರಿಗೆ ಕರೆ ನೀಡಿದರು.
ಅಧಿವೇಶನದಲ್ಲಿ ಹಿಂದೂ ರಾಷ್ಟ್ರ ಆಕ್ಷೇಪ ಮತ್ತು ಖಂಡನೆ, ಹಬ್ಬಗಳನ್ನು ಆಚರಿಸುವ ಯೋಗ್ಯ ಪದ್ಧತಿ ಮತ್ತು ಶಾಸ್ತ್ರ ಈ ೨ ಗ್ರಂಥಗಳ ಇ-ಬುಕ್ ನ ಉದ್ಘಾಟನೆಯನ್ನು ಗಣ್ಯರ ಹಸ್ತದಿಂದ ಮಾಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು