3:24 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಪಿಎಸ್‍ಐ ಹುದ್ದೆ ನೇಮಕಾತಿಯಲ್ಲಿ ಭಾರೀ ಅವ್ಯವಹಾರ ಆರೋಪ: ಬಿಜೆಪಿ ನಾಯಕಿ ಮನೆಗೆ ಸಿಐಡಿ ದಾಳಿ

17/04/2022, 23:41

ಕಲಬುರಗಿ(reporterkarnataka.com): ರಾಜ್ಯದಲ್ಲಿ 545 ಪಿಎಸ್‍ಐ ಹುದ್ದೆ ನೇಮಕಾತಿಯಲ್ಲಿ ಭಾರೀ ಅಕ್ರಮ ನಡೆದಿದೆ ಎಂಬ ಆರೋಪದ ಬಗ್ಗೆ ತನಿಖೆ ಕೈಗೊಂಡಿರುವ ಸಿಐಡಿ ಅಧಿಕಾರಿಗಳು ಇಂದು ಬಿಜೆಪಿ ಜಿಲ್ಲಾ ನಾಯಕಿ ದಿವ್ಯಾ ಹಾಗರಗಿ ಮನೆಗೆ ದಾಳಿ ನಡೆಸಿದೆ.

ನಗರದ ಹಳೆ ಜೇವರ್ಗಿ ರಸ್ತೆಯಲ್ಲಿರುವ ಬಿಜೆಪಿ ಮುಖಂಡೆ ದಿವ್ಯಾ ಹಾಗರಗಿ ಅವರ ಮನೆಯನ್ನು ಶೋಧಿಸಲು ಸಿಐಡಿ ಡಿವೈಎಸ್‌ಪಿ ಶಂಕರಗೌಡ ನೇತೃತ್ವದ ತಂಡ ಭೇಟಿ ನೀಡಿದೆ.

ದಿವ್ಯಾ ಹಾಗರಗಿ ಅವರು ಕಳೆದ 3-4 ದಿನಗಳಿಂದ ನಾಪತ್ತೆಯಾಗಿದ್ದಾರೆ. ಅವರ ಪತಿ ರಾಜೇಶ್ ಅವ​ರನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ದಿವ್ಯಾ ಅವರು ವಿಜಯಪುರಕ್ಕೆ ಹೋಗಿರುವುದಾಗಿ ವಿಚಾರಣೆ ವೇಳೆ ರಾಜೇಶ್ ಹಾಗರಗಿ ಮಾಹಿತಿ ನೀಡಿದ್ದಾರೆ.

ದಿವ್ಯಾ ಹಾಗರಗಿಗೆ ಅವರಿಗೆ ಸೇರಿದ್ದ ಜ್ಞಾನಜೋತಿ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ಪರೀಕ್ಷಾ ಅಕ್ರಮ ನಡೆದಿತ್ತು. ಇದೇ ಶಾಲೆಯ ಮೂವರು ಮಹಿಳಾ ಕೊಠಡಿ ಮೇಲ್ವಿಚಾರಕರು, ಇದೇ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆದಿದ್ದ ನಾಲ್ವರು ಅಭ್ಯರ್ಥಿಗಳು ಸೇರಿ ಒಟ್ಟು ಏಳು ಜನರನ್ನು ಈಗಾಗಲೇ ಸಿಐಡಿ ತಂಡ ಬಂಧಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು