2:40 PM Monday7 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ

ಇತ್ತೀಚಿನ ಸುದ್ದಿ

ಪಿಎಸ್‌ಐ ನೇಮಕಾತಿ ಹಗರಣ: ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆಗೆ ಸಿಐಡಿ ಮತ್ತೆ ನೋಟಿಸ್

05/05/2022, 10:38

ಬೆಂಗಳೂರು(reporterkarnataka.com): ಪಿಎಸ್‌ಐ ನೇಮಕಾತಿ ಅಕ್ರಮದ ವಿಚಾರಣೆಗೆ ಸಂಬಂಧಿಸಿದಂತೆ ಹಾಜರಾಗಲು ಶಾಸಕ ಪ್ರಿಯಾಂಕ ಖರ್ಗೆಗೆ ಸಿಐಡಿ ಮತ್ತೆ ನೋಟಿಸ್ ಜಾರಿಗೊಳಿಸಿದೆ.

ಪ್ರಿಯಾಂಕ ಖರ್ಗೆ ಅವರಿಗೆ ಪಿಎಸ್ ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ಈಗಾಗಲೇ ಎರಡು ಬಾರಿ ಸಿಐಡಿ ನೋಟಿಸ್ ಜಾರಿಗೊಳಿಸಿತ್ತು. ಖರ್ಗೆ ಲಿಖಿತ ಉತ್ತರ ಕೂಡ ನೀಡಿದ್ದರು.

ಆದರೆ ಪ್ರಕರಣದಲ್ಲಿ ನೀವು ಸಲ್ಲಿಸಿರುವ ಉತ್ತರದಲ್ಲಿ ಪ್ರಕರಣಕ್ಕೆ ಸಂಬಂಧವಿಲ್ಲದ ಸಂಗತಿಗಳಿವೆ. ಹೀಗಾಗಿ ಮತ್ತೆ ತಮ್ಮ ಬಳಿ ಪ್ರಕರಣ ಸಂಬಂಧ ಇರುವಂತ ದಾಖಲಾತಿ, ಮಾಹಿತಿ ಸಲ್ಲಿಸುವಂತೆ ಸಿಐಡಿ ನೋಟಿಸ್ ಜಾರಿಗೊಳಿಸಿದೆ.

ಈ ಬಗ್ಗೆ ಶಾಸಕ ಪ್ರಿಯಾಂಕ್ ಖರ್ಗೆಗೆ ಪಿಎಸ್‌ಐ ನೇಮಕಾತಿ ಅಕ್ರಮದ ತನಿಖೆ ನಡೆಸುತ್ತಿರುವ ಸಿಐಡಿಯ ಸಹಾಯಕ ತನಿಖಾಧಿಕಾರಿ ಹಾಗೂ ಪೊಲೀಸ್ ಉಪಾಧಿಕ್ಷಕ ನರಸಿಂಹಮೂರ್ತಿ ಪಿ ಅವರು ನೋಟಿಸ್ ಜಾರಿ ಮಾಡಿದ್ದು,’ ದಿನಾಂಕ 28-04-2022ರಂದು ಒಂದು ಉತ್ತರವನ್ನು ನೀವು ಸಲ್ಲಿಸಿದ್ದು, ಅದನ್ನು ಪರಿಶೀಲಿಸಿದಾಗ ಅದರಲ್ಲಿ ಪ್ರಕರಣಕ್ಕೆ ಸಂಬಂಧವಿಲ್ಲದ ಸಂಗತಿಗಳು ಕಂಡು ಬಂದಿರುತ್ತವೆ ಎಂದಿದ್ದಾರೆ.

ಸಾರ್ವಜನಿಕ ಜಾಲತಾಣಗಳಲ್ಲಿ ಎಷ್ಟೋ ಅನಗತ್ಯ ಹಾಗೂ ನೈಜತೆಯಿಲ್ಲದ ಮಾಹಿತಿಗಳು ಹರಿದಾಡುತ್ತಿದ್ದು, ಅವುಗಳನ್ನು ತನಿಖೆಯಲ್ಲಿ ಸಾಕ್ಷ್ಯವನ್ನಾಗಿಸಿ, ಅಳವಡಿಸಿಕೊಳ್ಳಲು ಬರುವುದಿಲ್ಲ. ಆದರೆ ತಾವು ಕಲಬುರ್ಗಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಆಡಿಯೋ ಕ್ಲಿಪಿಂಗ್ ಹಾಜರು ಪಡಿಸಿ, ತಮ್ಮ ಬಳಿ ಇನ್ನೂ ಸಾಕ್ಷ್ಯಾಧಾರಗಳು ಇವೆ ಎಂದು ಹೇಳಿದ್ದನ್ನು ಗಮನಿಸಲಾಗಿದೆ. ತಾವು ಅವುಗಳನ್ನು ಹಾಜರು ಪಡಿಸುವ ಮೊದಲು, ಅವುಗಳ ಸತ್ಯಾಸತ್ಯತೆಯನ್ನು ಪರಿಶೀಲಿಸಿದ ನಂತರ

ಮಾಧ್ಯಮದವರ ಮುಂದೆ ಹಾಜರುಪಡಿಸಿರುತ್ತೀರಿ ಎಂದು ಭಾವಿಸಿ, ಸದರಿ ನೋಟೀಸ್ ಅನ್ನು ನೀಡಲಾಗಿತ್ತು ಎಂದಿದ್ದಾರೆ.

ಈ ಹಿನ್ನಲೆಯಲ್ಲಿ ಜವಾಬ್ದಾರಿಯುತ ಮತ್ತು ಗೌರವಾನ್ವಿತ ಶಾಸಕರಾದ ತಾವು, ಈ ನೋಟಿಸ್ ಮುಟ್ಟಿದ ಎರಡು ದಿನಗಳೊಳಗಾಗಿ ಕೆಳಗೆ ಸಹಿ ಮಾಡಿದ ಸಹಾಯಕ ತನಿಖಾಧಿಕಾರಿಯವರ ಮುಂದೆ, ಹಾಜರಾಗಿ, ಪ್ರಕರಣದ ತನಿಖೆಗೆ ಸಹಾಯವಾಗಬಹುದಾದ ತಮ್ಮ ಬಳಿಯಿರುವಂತ ದಾಖಲಾತಿ ಹಾಗೂ ಮಾಹಿತಿಯನ್ನು ಹಾಜರುಪಡಿಸಲು ಸೂಚಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು