2:54 AM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಪಿಯು ಫಲಿತಾಂಶ ಪ್ರಕಟ: ರಾಜ್ಯಕ್ಕೆ ದಾಖಲೆಯ ಶೇ.86 ಫಲಿತಾಂಶ; ದಕ್ಷಿಣ ಕನ್ನಡದ ದಿಶಾಗೆ 600ಕ್ಕೆ 600 ಅಂಕ

09/04/2026, 19:34

ಬೆಂಗಳೂರು(reporterkarnataka.com): ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ನಿರೀಕ್ಷಿಸುತ್ತಿದ್ದ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಇಂದು ಮಧ್ಯಾಹ್ನ 3 ಗಂಟೆಗೆ ವೆಬ್‌ಸೈಟ್‌ನಲ್ಲಿ ಅಧಿಕೃತವಾಗಿ ಪ್ರಕಟವಾಗಿದೆ. ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯವು ದಾಖಲೆಯ ಮಟ್ಟದ ಫಲಿತಾಂಶ ಕಂಡಿದ್ದು, ಒಟ್ಟು ಶೇ.86ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ ಫಲಿತಾಂಶದಲ್ಲಿ ಶೇ.12.5ರಷ್ಟು ಏರಿಕೆ ಕಂಡುಬಂದಿರುವುದು ವಿಶೇಷ.

*ಪಾಸ್‌ ಅಂಕ 35ರಿಂದ 33ಕ್ಕೆ ಇಳಿಸಿರುವುದು ಈ ಸಾಧನೆಗೆ ಕಾರಣ*
ಈ ಬಾರಿ ಪರೀಕ್ಷೆಗೆ ಹಾಜರಾದ ಒಟ್ಟು 7,10,363 ವಿದ್ಯಾರ್ಥಿಗಳ ಪೈಕಿ ಸುಮಾರು 6.1 ಲಕ್ಷ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು, ರಾಜ್ಯದ ಶಿಕ್ಷಣ ಕ್ಷೇತ್ರದಲ್ಲಿ ಇದು ಮಹತ್ವದ ಸಾಧನೆ ಎಂದು ಪರಿಗಣಿಸಲಾಗಿದೆ. ಕಳೆದ ವರ್ಷ ಪಿಯುಸಿ ಫಲಿತಾಂಶ ಶೇ.73.45ರಷ್ಟಿದ್ದು, ಈ ಬಾರಿ ಅದನ್ನು ಮೀರಿ ಫಲಿತಾಂಶ ಪಡೆದುಕೊಳ್ಳುವಲ್ಲಿ ವಿದ್ಯಾರ್ಥಿಗಳು ಯಶಸ್ವಿಯಾಗಿದ್ದಾರೆ. ಫಲಿತಾಂಶದಲ್ಲಿ ಏರಿಕೆಗೆ ಪ್ರಮುಖ ಕಾರಣವಾಗಿ ಪಾಸ್‌ ಅಂಕವನ್ನು 35ರಿಂದ 33ಕ್ಕೆ ಇಳಿಸಿರುವುದು ಗಮನಾರ್ಹವಾಗಿದೆ.
ಈ ವರ್ಷದ ಫಲಿತಾಂಶವನ್ನು ಮಧ್ಯಾಹ್ನ 3 ಗಂಟೆಗೆ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದ್ದು, ಫಲಿತಾಂಶಕ್ಕೂ ಮುನ್ನವೇ ಉತ್ತಮ ಸಾಧನೆ ಆಗಲಿದೆ ಎಂಬ ನಿರೀಕ್ಷೆಯನ್ನು ಶಾಲಾ ಶಿಕ್ಷಣ ಸಚಿವರು ವ್ಯಕ್ತಪಡಿಸಿದ್ದರು. ಅಂತೆಯೇ, ನಿರೀಕ್ಷೆಯಂತೆ ಈ ಬಾರಿ ಉತ್ತಮ ಫಲಿತಾಂಶ ದಾಖಲಾಗಿದೆ.
ಕಳೆದ ವರ್ಷ ಪರೀಕ್ಷೆಗೆ 6,37,805 ವಿದ್ಯಾರ್ಥಿಗಳು ಹಾಜರಾಗಿದ್ದು, ಅವರಲ್ಲಿ 4,68,439 ವಿದ್ಯಾರ್ಥಿಗಳು ಮಾತ್ರ ಪಾಸಾಗಿದ್ದರು. ಸುಮಾರು 1,69,366 ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದು, ಒಟ್ಟು ಶೇಕಡಾ 73.45ರಷ್ಟು ಫಲಿತಾಂಶ ದಾಖಲಾಗಿತ್ತು. ಜಿಲ್ಲಾವಾರು ಫಲಿತಾಂಶದಲ್ಲಿ ಉಡುಪಿ ಮೊದಲ ಸ್ಥಾನದಲ್ಲಿದ್ದರೆ, ಯಾದಗಿರಿ ಕೊನೆಯ ಸ್ಥಾನದಲ್ಲಿತ್ತು.

*600ಕ್ಕೆ 600 ಪಡೆದ ವಿದ್ಯಾರ್ಥಿಗಳು*
ಈ ಬಾರಿಯ ಉತ್ತಮ ಫಲಿತಾಂಶದಿಂದ ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಣ ವಲಯದಲ್ಲಿ ಸಂತಸ ವ್ಯಕ್ತವಾಗಿದೆ. ರಾಜ್ಯದ ವಿವಿಧ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಉತ್ತಮ ಸಾಧನೆ ತೋರಿದ್ದು, ಕೆಲವು ವಿದ್ಯಾರ್ಥಿಗಳು ಪರಿಪೂರ್ಣ ಅಂಕಗಳನ್ನು ಗಳಿಸಿರುವುದು ವಿಶೇಷ. ಅದರಲ್ಲೂ ಕಾಮರ್ಸ್ ವಿಭಾಗದಲ್ಲಿ ಜೈನ್ ಕಾಲೇಜಿನ ವಿದ್ಯಾರ್ಥಿನಿ ಅದಿತಿ ಬಾಪು, ದಕ್ಷಿಣ ಕನ್ನಡದ ಆಳ್ವಾಸ್ ಕಾಲೇಜಿನ ದಿಶಾ ಅವರು 600ಕ್ಕೆ 600 ಅಂಕಗಳನ್ನು ಗಳಿಸಿ ವಿಶಿಷ್ಟ ಸಾಧನೆ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು