1:19 PM Thursday16 - January 2025
ಬ್ರೇಕಿಂಗ್ ನ್ಯೂಸ್
ಗರೋಡಿ ಜಾತ್ರೆಗೂ ಊರವರಿಗೆ ನೀರಿಲ್ಲ!: 5 ದಿನಗಳಿಂದ ನೋ ವಾಟರ್!!; ಮೇಯರ್ ಅವರೇ… ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಸಚಿವ ಜಮೀರ್‌ ಭಾವಚಿತ್ರಕ್ಕೆ ಸಗಣಿ ಬಳಿದು ಬಿಜೆಪಿ… ಕೆಚ್ಚಲು ಕೊಯ್ದ ಪ್ರಕರಣ: ದನದ ಮಾಲೀಕನ ತಾಯಿಗೆ 3 ಹಸು ಕೊಡಿಸಿದ ಸಚಿವ… 5 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರ: ಆರೋಪಿಯ ತಕ್ಷಣ ಬಂಧಿಸಲು ಆಗ್ರಹಿಸಿ ಎಐಎಂಎಸ್ಎಸ್… ಕಾಡಾನೆಯ ಚಿತ್ರೀಕರಣ ಮಾಡಲು ಹೋದ ಯೂಟ್ಯೂಬರ್ ಮೇಲೆ ಸಲಗ ದಾಳಿ: ಕೂದಲೆಳೆ ಅಂತರದಲ್ಲಿ… ವಿಕಲಚೇತನ ಉದ್ಯೋಗಿಗಳ ಜತೆ ಸಂಕ್ರಾಂತಿ ಹಬ್ಬ ಆಚರಿಸಿಕೊಂಡ ಕೇಂದ್ರ ಸಚಿವ ಕುಮಾರಸ್ವಾಮಿ ಶಬರಿಮಲೆ: ಆಕಾಶದತ್ತ ಮುಖ ಮಾಡಿ ಕಾಯುತ್ತಿದ್ದ ಭಕ್ತರಿಗೆ ಮಕರ ಜ್ಯೋತಿ ದರ್ಶನ: ಪುನೀತರಾದ… ನಂಜನಗೂಡು: ಶಿವಶರಣ ಶ್ರೀ ಸಿದ್ದರಾಮೇಶ್ವರ ರ ಜಯಂತಿ ಆಚರಣೆ ಜಿಹಾದಿ ಮನಸ್ಥಿತಿಯನ್ನು ಪೋಷಿಸಿ ಬೆಳೆಸುತ್ತಿರುವ ಸಿದ್ದರಾಮಯ್ಯ ಸರಕಾರ: ಸಂಸದ ಕ್ಯಾ ಬ್ರಿಜೇಶ್ ಚೌಟ… ವಿಜಯಪುರ: 4 ಮಂದಿ ಮಕ್ಕಳ ಜತೆ ಕಾಲುವೆಗೆ ಜಿಗಿದ ಹೆತ್ತಬ್ಬೆ: ಮಕ್ಕಳ ದಾರುಣ…

ಇತ್ತೀಚಿನ ಸುದ್ದಿ

ಪಿಯು ವಿದ್ಯಾರ್ಥಿನಿ ಸಾವು: ತಮಿಳುನಾಡಿನಲ್ಲಿ ಭಾರೀ ಹಿಂಸಾಚಾರ, ಇಬ್ಬರು ಶಿಕ್ಷಕಿಯರ ಬಂಧನ, 3 ಮಂದಿ ಪೊಲೀಸ್ ವಶಕ್ಕೆ

18/07/2022, 12:22

ಚೆನ್ನೈ(reporterkarnataka.com):
ತಮಿಳುನಾಡಿನ ಕಲ್ಲಕುರಿಚಿಯ ಚಿನ್ನಸೇಲಂನಲ್ಲಿರುವ ಖಾಸಗಿ ವಸತಿ ಶಾಲೆಯೊಂದರ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಆಕೆಯ ಸಾವಿಗೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿ ನಾಲ್ಕು ದಿನಗಳಿಂದ ನಡೆಯುತ್ತಿದ್ದ ಪ್ರತಿಭಟನೆ ಭಾನುವಾರ ಹಿಂಸಾಚಾರಕ್ಕೆ ತಿರುಗಿದೆ. ಈ ನಡುವೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಶಿಕ್ಷಕಿಯರನ್ನು ಬಂಧಿಸಲಾಗಿದ್ದು, ಮತ್ತೆ ಮೂವರು ಶಿಕ್ಷಕರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಕಲ್ಲಕುರಿಚಿಯ ಚಿನ್ನಸೇಲಂನಲ್ಲಿರುವ ಖಾಸಗಿ ವಸತಿ ಶಾಲೆಯ ಕೆಮೆಸ್ಟ್ರಿ ಶಿಕ್ಷಕಿ ಹರಿಪ್ರಿಯಾ ಹಾಗೂ ಗಣಿತ ಶಿಕ್ಷಕಿ ಕೃತ್ತಿಕಾ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಈ ನಡುವೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಶಿಕ್ಷಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಪೊಲೀಸ್ ವಶದಲ್ಲಿರುವ ಶಿಕ್ಷಕರ ಕುರಿತು ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

ವಿದ್ಯಾರ್ಥಿನಿ ಸಾವಿನ ಹಿನ್ನೆಲೆಯಲ್ಲಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು.ಈ ಹಿನ್ನೆಲೆಯಲ್ಲಿ  ಕಲ್ಲಕುರಿಚಿ ತಾಲೂಕು ಮತ್ತು ಚಿನ್ನಸೇಲಂ ತಾಲೂಕಿನ ಕೆಲವು ಭಾಗಗಳಲ್ಲಿ ಜುಲೈ 31ರವರೆಗೆ ಸೆಕ್ಷನ್ 144 ರ ಅಡಿಯಲ್ಲಿ ಜಿಲ್ಲಾಧಿಕಾರಿ ಪಿಎನ್ ಶ್ರೀಧರ್ ನಿಷೇಧಾಜ್ಞೆ ಜಾರಿಗೊಳಿಸಿದ್ದರು.

ವಿದ್ಯಾರ್ಥಿನಿಯ ಸಾವಿಗೆ ನ್ಯಾಯ ಒದಗಿಸಬೇಕೆಂದು ಒತ್ತಾಯಿಸಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿಶಾಲಾ ಆವರಣಕ್ಕೆ ನುಗ್ಗಿ ಶಾಲಾ ಬಸ್ಸು ಮತ್ತು ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಿ ದಾಂಧಲೆ ನಡೆಸಿದ್ದು ಪರಿಸ್ಥಿತಿ ವಿಕೋಪಕ್ಕೆ ತಿರುಗಿತ್ತು.

ಇತ್ತ ಖಾಸಗಿ ಶಾಲೆಯಲ್ಲಿ ಶಿಕ್ಷಕರ ಕಿರುಕುಳ ತಾಳಲಾರದೆ 12ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗುತ್ತಿದ್ದು, ಘಟನೆಗೆ ಸಂಬಂಧಿಸಿದಂತೆ ವಿವರವಾದ ವರದಿ ನೀಡುವಂತೆ ಮುಖ್ಯ ಶಿಕ್ಷಣಾಧಿಕಾರಿಗಳಿಗೆ ಆದೇಶ ನೀಡಿದ್ದಾರೆ.

ಕಲ್ಲಕುರಿಚಿಯ ಚಿನ್ನಸಲೇಂ ಎಂಬಲ್ಲಿ ಪ್ರತಿಭಟನಾಕಾರರು ಶಾಲೆಯ ಅವರಣದೊಳಗೆ ನುಗ್ಗಿದ ಪ್ರತಿಭಟನಾಕಾರರು ಅಲ್ಲಿ ನಿಲ್ಲಿಸಿದ್ದ ಶಾಲಾ ಬಸ್ಸುಗಳ ಕಿಟಕಿ ಗಾಜುಗಳನ್ನು ಮುರಿದು ಬೆಂಕಿ ಹಚ್ಚಿದ್ದರು.. ಬಸ್ಸಿನ ಮೇಲೆ ಏರಿ ಕೇಕೆ ಹಾಕುತ್ತಾ, ಆಕ್ರೋಶ ವ್ಯಕ್ತಿಪಡಿಸುತ್ತಾ ಧ್ವಂಸ ಮಾಡಿದ್ದರು. ಪರಿಸ್ಥಿತಿಯನ್ನು ತಿಳಿಗೊಳಿಸಲು ಕಲ್ಲಕುರಿಚಿ ಜಿಲ್ಲಾ ಪೊಲೀಸರು ಲಾಠಿಪ್ರಹಾರ ಮಾಡಿದ್ದರು. ಆಶ್ರುವಾಯು ಸಿಡಿಸಿದ್ದರು. ಪ್ರತಿಭಟನಾಕಾರರು ಪೊಲೀಸ್ ಸಿಬ್ಬಂದಿ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಘಟನೆಯಲ್ಲಿ ಡಿಐಜಿ ಎಂ ಪಾಂಡಿಯಾನ್ ಸೇರಿದಂತೆ 20ಕ್ಕೂ ಹೆಚ್ಚು ಪೊಲೀಸರು ಗಾಯಗೊಂಡಿದ್ದಾರೆ. 13ಕ್ಕೂ ಹೆಚ್ಚು ಬಸ್ಸುಗಳಿಗೆ ಬೆಂಕಿ ಹಚ್ಚಿ ಕೆಲವು ಬಸ್ಸುಗಳನ್ನು ಜಖಂಗೊಳಿಸಿದ್ದಾರೆ.

ಘಟನೆಯೇನು..?

ಜುಲೈ 13 ರಂದು ಮುಂಜಾನೆ ಕಡಲೂರು ಜಿಲ್ಲೆಯ ಪೆರಿಯನೆಸಲೂರು ಗ್ರಾಮದ 17 ವರ್ಷದ ಶ್ರೀಮತಿ ಎಂಬ ವಿದ್ಯಾರ್ಥಿನಿ ಶಾಲೆಯ ಹಾಸ್ಟೆಲ್ ಆವರಣದಲ್ಲಿ ಶವವಾಗಿ ಪತ್ತೆಯಾಗಿದ್ದರು. ಈ ಶಾಲೆಯು ಕಲ್ಲಕುರಿಚಿ ಜಿಲ್ಲೆಯ ಚಿನ್ನಸೇಲಂ ಬಳಿಯ ಕಣಿಯಮೂರ್‌ನಲ್ಲಿದೆ. 12ನೇ ತರಗತಿ ವಿದ್ಯಾರ್ಥಿನಿ ಶ್ರೀಮತಿ ಹಾಸ್ಟೆಲ್‌ನಲ್ಲಿ ವಾಸವಾಗಿದ್ದಳು.

ಹಾಸ್ಟೆಲ್‌ನ ಮೂರನೇ ಮಹಡಿಯ ಕೊಠಡಿಯೊಂದರಲ್ಲಿ ವಾಸವಾಗಿದ್ದ ವಿದ್ಯಾರ್ಥಿನಿ ಮೇಲಿನ ಮಹಡಿಯಿಂದ ನೆಲಕ್ಕೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಶಂಕಿಸಲಾಗಿದೆ. ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ದೇಹಕ್ಕೆ ಗಾಯವಾಗಿದ್ದು ಪತ್ತೆಯಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು