11:55 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಪುಂಜಾಲಕಟ್ಟೆ: 18 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ನಾರಾಯಣಗುರು ವಸತಿ ಶಾಲೆಗೆ ಶಂಕುಸ್ಥಾಪನೆ

21/01/2024, 20:00

ಬೆಳ್ತಂಗಡಿ(reporterkarnataka.com): ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 18 ಕೋಟಿ ವೆಚ್ಚದಲ್ಲಿ ಪುಂಜಾಲಕಟ್ಟೆಯಲ್ಲಿ ನಿರ್ಮಾಣ ಗೊಳ್ಳಲಿರುವ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹಾದೇವಪ್ಪ ಅವರು ಭಾನುವಾರ ಶಂಕುಸ್ಥಾಪನೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಸಾಮಾಜಿಕವಾಗಿ ಹಿಂದುಳಿದಿದ್ದ ವರ್ಗಗಳಿಗೆ ನಾರಾಯಣ ಗುರುಗಳು ಶಕ್ತಿ ತುಂಬಿದ್ದರು. ಅವರ ಹೆಸರಿನಲ್ಲಿ ಪೂಂಜಾಲಕಟ್ಟೆಯ15 ಎಕರೆ ಜಮೀನಿನಲ್ಲಿ ವಸತಿ ಶಾಲೆ ನಿರ್ಮಾಣಗೊಳ್ಳಲಿರುವುದು ಶ್ಲಾಘನೀಯ. 250 ವಿದ್ಯಾರ್ಥಿಗಳಿಗೆ ನಾರಾಯಣ ಗುರು ವಸತಿ ಶಾಲೆಯಲ್ಲಿ ಅವಕಾಶ ದೊರಕಲಿದೆ ಎಂದು ಹೇಳಿದರು.
ವಸತಿ ಶಾಲೆಯ ಕಂಪೌಂಡ್ ನಿರ್ಮಾಣ ಸೇರಿದಂತೆ ಪೂರಕ ಕಾಮಗಾರಿಗಳಿಗೆ ಹೆಚ್ಚುವರಿ ಅನುದಾನ ಅಗತ್ಯ ಬಿದ್ದರೆ ನೀಡಲಾಗುವುದು ಎಂದು ಸಚಿವರು ತಿಳಿಸಿದರು.
ಶಾಸಕ ರಾಜೇಶ್ ನಾಯ್ಕ್ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಚಿವ ವಿನಯಕುಮಾರ್ ಸೊರಕೆ, ಜಿ.ಪಂ. ಸಿಇಓ ಡಾ. ಆನಂದ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು