7:03 AM Wednesday17 - December 2025
ಬ್ರೇಕಿಂಗ್ ನ್ಯೂಸ್
1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಪುಂಜಾಲಕಟ್ಟೆ ಸರಕಾರಿ ಆಸ್ಪತ್ರೆ ಮೇಲ್ದರ್ಜೆಗೇರಿಸುವ ಕಾಮಗಾರಿ ಆರಂಭ: ಶಾಸಕ ರಾಜೇಶ್ ನಾಯ್ಕ್

24/03/2023, 00:30

ಬಂಟ್ವಾಳ(reporterkarnataka.com): ಬಂಟ್ವಾಳ ಕ್ಷೇತ್ರದ ಜನತೆಯ ಆರೋಗ್ಯ ವಿಚಾರದಲ್ಲಿ ವಿಶೇಷ ಗಮನಹರಿಸಿ ತಾಲೂಕು ಸರಕಾರಿ ಆಸ್ಪತ್ರೆಗೆ ಡಯಾಲಿಸಿಸ್ ಘಟಕ, ಆಕ್ಸಿಜನ್ ಘಟಕ ಹಾಗೂ ಐಸಿಯು ಘಟಕ ಒದಗಿಸಿದ್ದು, ಪುಂಜಾಲಕಟ್ಟೆ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸುವ ಕಾಮಗಾರಿಯೂ ಈಗಾಗಲೇ ಪ್ರಾರಂಭಗೊಂಡಿದೆ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹೇಳಿದರು.


ಸಜೀಪ ಭಾಗದಲ್ಲಿ ಸಾಕಷ್ಟು ಮಂದಿ ಪಕ್ಷವನ್ನು ಕಟ್ಟಿ ಗಟ್ಟಿಗೊಳಿಸುವ ಕಾರ್ಯ ಮಾಡಿದ ಹಿರಿಯರಿಗೆ ನಾವು ಸದಾ ಚಿರ ಋಣಿಯಾಗಬೇಕಿದ್ದು, ಅವರ ಮಾರ್ಗದರ್ಶನ ದಲ್ಲಿ ಕಾರ್ಯಕರ್ತರು ಮುನ್ನೆಡೆದರೆ ಬಿಜೆಪಿ ಬಲಿಷ್ಠ ವಾಗಿ ಬೆಳೆಯಲಿದೆ.
ಕಳೆದ ನಾಲ್ಕು ವರೆ ವರ್ಷಗಳಲ್ಲಿ ಶಾಸಕನಾಗಿ ಕ್ಷೇತ್ರದ ಪ್ರತಿ ಗ್ರಾಮ ಗಳ ಅಭಿವೃದ್ಧಿ ಗೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದು, ಸಾವಿರದ ಐನೂರ ಎಂಟು ರಸ್ತೆಗಳು ಈತನಕ ಅಭಿವೃದ್ಧಿ ಯಾಗಿದೆ. ಶಾಸಕನಾಗಿರುವ ಕೊನೆಯ ಕ್ಷಣದವರೆಗೂ ಅಷ್ಟು ಅನುದಾನಗಳನ್ನು ತಂದು , ಶಾಸಕತ್ವದ ಮೊದಲ ಅವಧಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸಿದ ತೃಪ್ತಿ ಇದೆ ಎಂದರು.
ವಲಯ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಗಟ್ಟಿ, ಗಣೇಶ್ ಭಂಡಾರಿ, ಧನೇಶ್ ಪೂಜಾರಿ, ಆನಂದ ಪೂಜಾರಿ, ಪ್ರಕಾಶ್ ಪೂಜಾರಿ, ಪ್ರೇಮ ಶೆಟ್ಟಿ, ತಿಮ್ಮಪ್ಪ ಬೆಳ್ಚಾಡ ಅವರನ್ನು ಬಿಜೆಪಿ ಪಕ್ಷಕ್ಕೆ ಶಾಸಕ ರಾಜೇಶ್ ನಾಯ್ಕ್ ಹಾಗೂ ಪಕ್ಷದ ಅಧ್ಯಕ್ಷ ದೇವಪ್ಪ ಪೂಜಾರಿ ಅವರ ಸಮ್ಮುಖದಲ್ಲಿ ಸೇರ್ಪಡೆಗೊಳಿಸಲಾಯಿತು .
ಮುಂಬಯಿ ಮಹಾನಗರ ಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷ ಸಂತೋಷ್ ಜಿ.ಶೆಟ್ಟಿ ದಳಂದಿಲ, ಜಿ.ಪಂ.ಮಾಜಿ ಸದಸ್ಯ ರವೀಂದ್ರ ಕಂಬಳಿ, ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಪ್ರಧಾನ ಕಾರ್ಯದರ್ಶಿ ಡೊಂಬಯ್ಯ ಅರಳ, ಕಾರ್ಯದರ್ಶಿ ರಮನಾಥ ರಾಯಿ, ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಶ್ರೀಕಾಂತ್ ಶೆಟ್ಟಿ ಸಜೀಪ, ಸಜೀಪ ಮಾಗಣೆ ತಂತ್ರಿ ಸುಬ್ರಹ್ಮಣ್ಯ ಭಟ್, ಪ್ರಭಾರಿ ಪುರುಷೋತ್ತಮ ಸಾಲಿಯಾನ್ ನರಿಕೊಂಬು, ಗ್ರಾ.ಪಂ.ಸದಸ್ಯರಾದ ಪ್ರವೀಣ್ ಗಟ್ಟಿ, ಸುಮತಿ, ಸುಂದರ ಪೂಜಾರಿ , ನವೀನ್ ಅಂಚನ್, ಗಣೇಶ್, ಸರೋಜಿನಿ, ಧಯಾಲಕ್ಮೀ, ಸಂದೀಪ್ ಮಾರ್ನಬೈಲು, ಅನಿತಾ, ಚಂದ್ರಕಲಾ, ರಾಜೇಶ್ ಮರ್ತಾಜೆ,ಪ್ರಮುಖರಾದ ಚರಣ್ ಕಟ್ಟೆ, ಇದಿನಬ್ಬ, ಜಯಶಂಕರ ಬಾಸ್ರಿತ್ತಾಯ, ಸೋಮಶೇಖರ ಅಲಾಡಿ, ಪ್ರಸಾದ್ ಮುಗುಳಿಯಾ, ವೀರೇಂದ್ರ ಕುಲಾಲ್, ವಿಶ್ವನಾಥ ಕೊಟ್ಟಾರಿ, ಕೃಷ್ಣ ಉದ್ದೊಟ್ಟು, ದಿವಾಕರ ವಿದ್ಯಾನಗರ, ನಿತ್ಯಾನಂದ ವಿದ್ಯಾನಗರ, ಸುಂದರ ಪೂಜಾರಿ ಉದ್ದೊಟ್ಟು ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು