2:41 AM Sunday30 - November 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಪುರುಷನ ಜತೆಗಿದ್ದ ಮಹಿಳೆ ಸಂಬಂಧ ಕೆಟ್ಟಾಗ ಅತ್ಯಾಚಾರವಾಯಿತು ಅನ್ನೋ ಹಾಗಿಲ್ಲ: ಸುಪ್ರೀಂಕೋರ್ಟ್

15/07/2022, 23:15

ಹೊಸದಿಲ್ಲಿ(reporterkarnataka.com): ಮಹಿಳೆ ತಾನು ಇಷ್ಟಪಟ್ಟು ಪುರುಷನ ಜೊತೆಗಿದ್ದು,ಆ ಬಳಿಕ ಸಂಬಂಧ ನಡುವೆ ವೈಮನಸು ಉಂಟಾಗಿ ದೂರವಾದಾಗ ಅತ್ಯಾಚಾರವಾಯಿತು ಎಂದು ದೂರು ನೀಡುವಂತಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ.

ಆರೋಪಿ ಅನ್ಸಾರ್ ಮೊಹಮ್ಮದ್ ಎಂಬಾತ ತಮ್ಮ ವಿರುದ್ಧ ಸಲ್ಲಿಕೆ ಆಗಿರುವ ಅತ್ಯಾಚಾರ ಆರೋಪದ ಕುರಿತಂತೆ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನಿಗೆ ಸಂಬಂಧಿತ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಗುಪ್ತ ಮತ್ತು ವಿಕ್ರಮ್​ನಾಥ್ ಅವರಿದ್ದ ಪೀಠ, ಮೇಲಿನ ತೀರ್ಪು ನೀಡಿ, ಜಾಮೀನು ಮಂಜೂರು ಮಾಡಿದೆ.

ದೂರುದಾರ ಮಹಿಳೆಯು ಅನ್ಸಾರ್​ ಮೊಹಮ್ಮದ್​ನೊಂದಿಗೆ ಇಷ್ಟಪಟ್ಟೇ ಜತೆಗಿದ್ದರು. ಆದರೆ ಈಗ ಇಬ್ಬರ ನಡುವಿನ ಸಂಬಂಧ ಹದೆಗೆಟ್ಟಿದೆ ಎಂಬ ಕಾರಣಕ್ಕೆ ಸೆಕ್ಷನ್​ 376(2)ರ ಪ್ರಕಾರ ಎಫ್​ಐಆರ್ ದಾಖಲು ಮಾಡಲಾಗದು ಎಂದು ಪೀಠ ಅಭಿಪ್ರಾಯಪಟ್ಟಿದೆ. ಮಾತ್ರವಲ್ಲ, ಆರೋಪಿಗೆ ನಿರೀಕ್ಷಣಾ ಜಾಮೀನು ನಿರಾಕರಿಸಿ ರಾಜಸ್ಥಾನ್ ಹೈಕೋರ್ಟ್ ನೀಡಿದ್ದ ತೀರ್ಪನ್ನು ತಳ್ಳಿಹಾಕಿದೆ.

25 ವರ್ಷದ ಮಹಿಳೆ ಈ ಪ್ರಕರಣದಲ್ಲಿ ದೂರುದಾರರಾಗಿದ್ದು, ಅನ್ಸಾರ್ ಜತೆ ನಾಲ್ಕು ವರ್ಷದಿಂದ ಸಂಬಂಧ ಹೊಂದಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು