ಇತ್ತೀಚಿನ ಸುದ್ದಿ
ಪೂರ್ವ ಮುಂಗಾರು: ದ.ಕ., ಉಡುಪಿ ಸಹಿತ ರಾಜ್ಯದ 7 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ
23/05/2024, 15:41
ಬೆಂಗಳೂರು(reporterkarnataka.com): ನೆರೆಯ ಕೇರಳದಲ್ಲಿ ಅಬ್ಬರದ ಪೂರ್ವ ಮುಂಗಾರು ಮಳೆಯಾಗುತ್ತಿದ್ದು, ಕರ್ನಾಟಕದ 7 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ,ಹಾಸನ, ಕೊಡಗು, ಮಂಡ್ಯ, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಿಗೆ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಸುಮಾರು 30 ರಿಂದ 40 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಇಲಾಖೆ ತಿಳಿಸಿದೆ.