12:50 PM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಪುಷ್ಪ ಸಿನಿಮಾದ ಸ್ಟೈ ಲ್ ನಲ್ಲಿ ಬೆಂಗಳೂರಿಗೆ ಗಾಂಜಾ ಸಪ್ಲೈ: ಮಂಗಳೂರು ಮೂಲದ ಇಬ್ಬರ ಬಂಧನ

24/07/2022, 19:23

ಮಂಗಳೂರು(reporterkarnataka.com): ಪುಷ್ಪ ಸಿನಿಮಾ ಸ್ಟೈಲ್‌ನಲ್ಲಿ ಬೊಲೇರೋ ವಾಹನದಲ್ಲಿ ಸುಮಾರು 1 ಕೋಟಿ ರೂ. ಮೌಲ್ಯದ ಗಾಂಜಾ ಸಾಗಾಟ ಮಾಡುತ್ತಿದ್ದ 7 ಮಂದಿ ಆರೋಪಿಗಳನ್ನು ಬೆಂಗಳೂರಿನ ಬೇಗೂರು ಪೊಲೀಸರು ಬಂಧಿಸಿದ್ದಾರೆ.

ಬೊಲೇರೋ ಗೂಡ್ಸ್ ವಾಹನದ ಲಗೇಜ್ ಇಡುವ ಪ್ಲಾಟ್‌ಫಾರಂ ಕೆಳಭಾಗದಲ್ಲಿ ದೊಡ್ಡ ಬಾಕ್ಸ್ ಮಾಡಿಕೊಂಡು ಅದರಲ್ಲಿ ಗಾಂಜಾ ಅಡಗಿಸಿಟ್ಟು ಆಂಧ್ರಪ್ರದೇಶದಿಂದ ಬೆಂಗಳೂರಿಗೆ ಸಾಗಾಟ ಮಾಡುತ್ತಿದ್ದರು.

ಬಂಧಿತರಲ್ಲಿ ಇಬ್ಬರು ಮಂಗಳೂರು ಮೂಲದವರೆಂದು ತಿಳಿದು ಬಂದಿದೆ. ಬಂಧಿತರಿಂದ 1 ಕೋಟಿ ರೂ ಮೌಲ್ಯದ 175 ಕೆ.ಜಿ. ಗಾಂಜಾ ವಶಕ್ಕೆ ಪಡೆದಿದ್ದಾರೆ.

ಬಂಧಿತರನ್ನು ಅರವಿಂದ್, ಪವನ್, ಪ್ರಭು, ಪ್ರಸಾದ್, ಪತ್ತಿ ಸಾಯಿಚಂದ್ರ ಪ್ರಕಾಶ್, ಅಮ್ಮದ್ ಇತಿಯಾರ್, ನಜೀಮ್ ಎಂದು ಗುರುತಿಸಲಾಗಿದೆ.

ಬಂಧಿತರಲ್ಲಿ ಅಮ್ಮದ್ ಇತಿಯಾರ್, ನಜೀಮ್ ಮಂಗಳೂರು ಮೂಲದವರು, ಆ ಪೈಕಿ ನಜೀಂ ರೌಡಿಶೀಟರ್ ಆಗಿದ್ದು, ಸದ್ಯ ಬಾಡಿ ವಾರಂಟ್ ಮೂಲಕ ಕೊಣಾಜೆ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಇವರು ಬೆಂಗಳೂರಿಗೆ ತಂದು ಅಲ್ಲಿಂದ ಕಾಲೇಜು, ಪಬ್, ಕಬ್ 3 ಗಳಿಗೆ ಆಟೋ ರಿಕ್ಷಾದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ಇದೀಗ ಆರೋಪಗಳನ್ನು ಬಂಧಿಸಿ ಹೆಚ್ಚಿನ ವಿಚಾರಣೆಯನ್ನು ಮಾಡುತ್ತಿದ್ದಾರೆ. ಪುಷ್ಪ ಸಿನಿಮಾದಿಂದ ಪ್ರೇರಣೆಗೊಂಡು ಗಾಂಜಾ ಸಾಗಾಟ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು