4:03 AM Saturday8 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಪುಟಾಣಿಗಳಿಗೆ ಗಂಟೆ ಬಾರಿಸುವ ಸಮಯ: ದಸರಾ ರಜೆ ಬಳಿಕ 1ರಿಂದ 5ನೇ ತರಗತಿ ಆರಂಭ? ಅ.21ರಿಂದ ಸಾಧ್ಯತೆ

28/09/2021, 08:48

ಬೆಂಗಳೂರು(reporterkarnataka.com):

ದಸರಾ ರಜೆ ಮುಗಿದ ನಂತರ 1ರಿಂದ 5ನೇ ತರಗತಿ ಶಾಲೆ ಆರಂಭಿಸಲಾಗುವುದು. ಅಕ್ಟೋಬರ್ 20ಕ್ಕೆ ದಸರಾ ರಜೆ ಮುಕ್ತಾಯವಾಗಲಿದೆ. ಅಕ್ಟೋಬರ್ 21 ರ ನಂತರ ಭೌತಿಕ ತರಗತಿಗಳನ್ನು ಆರಂಭಿಸಲು ಸರ್ಕಾರ ಚಿಂತನೆ ನಡೆಸಿದೆ.

ಅಕ್ಟೋಬರ್ 10 ರಿಂದ ಮಧ್ಯಂತರ ಅಥವಾ ದಸರಾ ರಜೆ ಆರಂಭವಾಗಲಿದ್ದು, ಅಕ್ಟೋಬರ್ 20 ಕ್ಕೆ ಮುಕ್ತಾಯವಾಗಲಿದೆ. ರಾಜ್ಯದಲ್ಲಿ ಕೊರೋನಾ ಸೋಂಕು ಕಡಿಮೆಯಾಗುತ್ತಿದೆ. ಹೀಗಾಗಿ ಶಿಕ್ಷಣ ತಜ್ಞರು, ಶಾಲೆಗಳ ಆಡಳಿತ ಮಂಡಳಿ, ಶಿಕ್ಷಕರು, ಪೋಷಕರು, ಆರೋಗ್ಯ, ಶಿಕ್ಷಣ, ವೈದ್ಯಕೀಯ ಇಲಾಖೆ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ 1ರಿಂದ 5ನೇ ತರಗತಿಗಳನ್ನು ಆರಂಭಿಸಲು ಕುರಿತು ತೀರ್ಮಾನ ಕೈಗೊಳ್ಳಲಾಗುತ್ತದೆ. ಖಾಸಗಿ ಶಾಲೆಗಳಲ್ಲಿ 1ರಿಂದ 5ನೇ ತರಗತಿ ಆರಂಭಿಸುವ ಬಗ್ಗೆ ಅಭಿಪ್ರಾಯ ಪಡೆಯಲಾಗುತ್ತಿದೆ ಎನ್ನಲಾಗಿದೆ. ಅಕ್ಟೋಬರ್ 20ಕ್ಕೆ ಮಧ್ಯಂತರ ರಜೆ ಮುಗಿದ ನಂತರ 1ರಿಂದ 5ನೇ ತರಗತಿ ಆರಂಭಿಸುವ ಕುರಿತು ಸರ್ಕಾರ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು