3:54 PM Sunday8 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

ಪುತ್ತೂರು: 1.6 ಕ್ವಿಂಟಾಲ್ ಗಾಂಜಾ ವಶಪಡಿಸಿಕೊಂಡ ಪ್ರಕರಣ; 3 ಮಂದಿ ಆರೋಪಿಗಳ ಬಂಧನ

08/02/2026, 14:18

ಪುತ್ತೂರು(reporterkarnataka.com): ಸುಮಾರು 1 ಕ್ವಿಂಟಾಲ್ 6 ಕೆ.ಜಿ 50 ಗ್ರಾಂ ಗಾಂಜಾ ವಶಪಡಿಸಿದ ಪ್ರಕರಣದಲ್ಲಿ, ಗಾಂಜಾ ಪೂರೈಕೆ ಮಾಡುತ್ತಿದ್ದ ಒರಿಸ್ಸಾದ ವ್ಯಕ್ತಿ ಸೇರಿದಂತೆ, ಮೂವರು ಆರೋಪಿಗಳನ್ನು
ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆ ಪೊಲೀಸರು
ಬಂಧಿಸಿದ್ದಾರೆ.
ಬೆಳ್ತಂಗಡಿ ಚಾರ್ಮಾಡಿ ನಿವಾಸಿ ಮಹಮ್ಮದ್ ಫಯಾಜ್ ಡಿ ಕೆ (27), ಬೆಳ್ತಂಗಡಿ ಕಕ್ಕಿಂಜೆ ನಿವಾಸಿ ನಝಿರ್ (42) ಹಾಗೂ ಆರೋಪಿಗಳಿಗೆ ಮಾದಕವಸ್ತು ಗಾಂಜಾವನ್ನು ಪೂರೈಕೆ ಮಾಡುತ್ತಿದ್ದ ಒರಿಸ್ಸಾ ರಾಜ್ಯದ ದೀಪಕ್ ಪಾತ್ರ (37) ಬಂಧಿತ ಆರೋಪಿಗಳು.
ಜನವರಿ 19ರಂದು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರೂ.53,03,000/- ಮೌಲ್ಯದ 1 ಕ್ವಿಂಟಾಲ್ 6 ಕೆ.ಜಿ 50 ಗ್ರಾಂ ಗಾಂಜಾ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಆರೋಪಿಗಳಿಗೆ ಹಣ ಮತ್ತು ವಾಹನದ ವ್ಯವಸ್ಥೆಯನ್ನು ಮಾಡಿದ ಬೆಳ್ತಂಗಡಿ ಚಾರ್ಮಾಡಿ ನಿವಾಸಿ ಮಹಮ್ಮದ್ ಫಯಾಜ್ ಡಿ. ಕೆ. (27) ಹಾಗೂ ಬೆಳ್ತಂಗಡಿ ಕಕ್ಕಿಂಜೆ ನಿವಾಸಿ ನಝಿರ್ (42) ಎಂಬವರನ್ನು ದಸ್ತಗಿರಿ ಮಾಡಲಾಗಿದೆ. ಆರೋಪಿಗಳಿಗೆ ಮಾದಕವಸ್ತು ಗಾಂಜಾವನ್ನು ಪೂರೈಕೆ ಮಾಡುತ್ತಿದ್ದ ಒರಿಸ್ಸಾ ರಾಜ್ಯದ ದೀಪಕ್ ಪಾತ್ರ (37) ಎಂಬಾತನನ್ನು ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಪ್ರಮೋದ್ ಕುಮಾರ್ ಅವರ ನೇತೃತ್ವದಲ್ಲಿ, ತನಿಖಾ ತಂಡವು ಒರಿಸ್ಸಾ ರಾಜ್ಯಕ್ಕೆ ತೆರಳಿ ದಸ್ತಗಿರಿ ಮಾಡಿದ್ದಾರೆ. ಈ ವೇಳೆ ಆತನಿಂದ ರೂ 80,೦00/- ಮೌಲ್ಯದ, 1 ಕೆ.ಜಿ 788 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆಯಲ್ಲಿ ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಪ್ರಮೋದ್ ಕುಮಾರ್, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ಗುಣಪಾಲ ಜೆ. ಹಾಗೂ ಸಿಬ್ಬಂದಿಗಳಾದ ದೇವರಾಜ್, ಹರ್ಷಿತ್, ಪ್ರಶಾಂತ್, ಅದ್ರಾಮ, ಪ್ರಶಾಂತ್ ರೈ, ಪ್ರವೀಣ್ ರೈ, ಸುಬ್ರಮಣಿ, ಭೀಮಸೆನ್, ಸುರೇಶ ಹಾಗೂ ದಿವ್ಯಾಪ್ರಕಾಶ್ ರವರುಗಳನ್ನು ಒಳಗೊಂಡ ತಂಡ ಪಾಲ್ಗೊಂಡಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು