9:01 AM Friday19 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

Puttur Accident | ಕೆಎಸ್ಸಾರ್ಟಿಸಿ ಬಸ್ – ಬೈಕ್ ಭೀಕರ ಅಪಘಾತ; ಅಪ್ಪ -ಮಗ ದಾರುಣ ಸಾವು

11/05/2025, 19:02

ಜಯಾನಂದ ಪೆರಾಜೆ ಬಂಟ್ವಾಳ
info.reporterkarnataka@gmail.com

ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಬಕ ಸಮೀಪದ ಕುವೆತ್ತಿಲ ಎಂಬಲ್ಲಿ
ಕೆಎಸ್ಸಾರ್ಟಿಸಿ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಂದೆ- ಮಗ ದಾರುಣವಾಗಿ ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.
ಮೃತಪಟ್ಟವರನ್ನು ಅರುಣ ಕುಲಾಲ್‌(45 ) ಹಾಗೂ ಅವರ ಪುತ್ರ ಧ್ಯಾನ್ (15) ಎಂದು ಗುರುತಿಸಲಾಗಿದೆ.
ಕುವೆತ್ತಿಲ ರಸ್ತೆ ತಿರುವಿನಲ್ಲಿ ಬಸ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.
ಮೃತ ಅರುಣ ಕುಲಾಲ್ ಅವರು ಬಂಟ್ವಾಳ ತಾಲೂಕಿನ ನರಿಕೊಂಬು ಬಳಿಯ ಬೋರುಗುಡ್ಡೆ ನಿವಾಸಿಯಾಗಿದ್ದಾರೆ. ನರಿಕೊಂಬು ಗ್ರಾಮ ಪಂಚಾಯತ್ ಸದಸ್ಯ ಹಾಗೂ ಸಮಾಜ ಸೇವಾ ಬ್ಯಾಂಕ್ ನಿರ್ದೇಶಕರೂ ಆಗಿದ್ದಾರೆ.
ಅರುಣ ಕುಲಾಲ್‌ ಕುಟುಂಬ ಭಾನುವಾರ
ಸುಳ್ಯದಲ್ಲಿ ನಡೆಯಲಿದ್ದ ಮದುವೆಗಾಗಿ ಹೊರಟಿದ್ದರು. ತಾಯಿ ಬಸ್ಸಿನಲ್ಲಿ ಪ್ರಯಾಣಿಸಿದ್ದರು. ತಂದೆ ಮಗ ಬೈಕ್ ನಲ್ಲಿ ಹೋಗುತ್ತಿದ್ದರು.
ಬಸ್ ಚಾಲಕನ ಅಜಾಗರೂಕತೆಯಿಂದ ಇಬ್ಬರು ಜೀವಕಳೆದುಕೊಳ್ಳುವಂತಾಯಿತು. ಚಾಲಕನ ವಿರುದ್ದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು