5:28 AM Sunday28 - June 2026
ಬ್ರೇಕಿಂಗ್ ನ್ಯೂಸ್
2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

Puttur | ಏಪ್ರಿಲ್ 27: ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ‘ಕುಂಕುಮ ಮಹತಿ’ ಕೃತಿ ಲೋಕಾರ್ಪಣೆ; ಸಾಮೂಹಿಕ ಕುಂಕುಮಾರ್ಚನೆ

25/04/2025, 18:47

ಪುತ್ತೂರು(reporterkarnataka.com): ಭಾರತೀಯ ಭವ್ಯ ಸನಾತನ ಪರಂಪರೆಯ ಅಸ್ಮಿತೆ ಸಿಂಧೂರ, ಈ ಸಿಂಧೂರದ ಕುರಿತಾದ ಮಹತ್ವವನ್ನು ತಿಳಿಸುವ ಹಿನ್ನೆಲೆಯಲ್ಲಿ, ಹಿಂದೂ ಧಾರ್ಮಿಕ ಶಿಕ್ಷಣ ಪ್ರಕಲ್ಪದ ಸಂಚಾಲಕಿ ಕೃಷ್ಣವೇಣಿ ಮುಳಿಯ ಅವರ ಮುತುವರ್ಜಿಯಲ್ಲಿ, ಕಾಸರಗೋಡಿನ ಲೇಖಕಿ ಶೀಲಾ ಲಕ್ಷ್ಮೀ ಅವರು ಬರೆದ ಕೃತಿ ‘ಕುಂಕುಮ ಮಹತಿ’ ಯು ಏಪ್ರಿಲ್ 27 ಭಾನುವಾರ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕೆರೆಯ ಬಳಿಯಲ್ಲಿರುವ ಅನ್ನಛತ್ರ ದಲ್ಲಿ ಬೆಳಗ್ಗೆ 9:30ಕ್ಕೆ ಲೋಕಾರ್ಪಣೆ ಗೊಳ್ಳಲಿದೆ.

ಬಳಿಕ ಮಹಿಳೆಯರಿಂದ ಸಾಮೂಹಿಕ ಕುಂಕುಮಾರ್ಚನೆ ನಡೆಯಲಿದೆ. ದೇವಾಲಯ ಸಂವರ್ಧನ ಸಮಿತಿ ಮಂಗಳೂರು ವಿಭಾಗ, ಮುಳಿಯ ಪ್ರತಿಷ್ಠಾನ ಪುತ್ತೂರು ಸಹಯೋಗದಲ್ಲಿ , ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಸಹಕಾರದಲ್ಲಿ ನಡೆಯುವ ಕೃತಿ ಲೋಕಾರ್ಪಣಾ ಕಾರ್ಯಕ್ರಮದಲ್ಲಿ ಧಾರ್ಮಿಕ ಚಿಂತಕರಾದ ಕಶೆಕೋಡಿ ಸೂರ್ಯನಾರಾಯಣ ಭಟ್ ಕೃತಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ. ದೇವಾಲಯ ಸಂವರ್ಧನ ಸಮಿತಿಯ ವಿಭಾಗ ಪ್ರಮುಖ್ ಕೇಶವ ಪ್ರಸಾದ್ ಮುಳಿಯ ಅವರು ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಪಂಜಿಗುಡ್ಡೆ ಈಶ್ವರ ಭಟ್ ಹಾಗೂ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಪುತ್ತೂರು ಉಮೇಶ್ ನಾಯಕ್, ದೇವಾಲಯ ಸಂವರ್ಧನ ಸಮಿತಿ ಮಂಗಳೂರು ವಿಭಾಗ ಪ್ರಮುಖ್ ಗಣೇಶ ಮಂಗಳೂರು ಅವರು ಮುಖ್ಯ ಅತಿಥಿಗಳಾಗಿ ಭಾಗಿಯಾಗಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಸಾವಯವ ಕುಂಕುಮದ ಅರಿವನ್ನುಂಟು ಮಾಡುವ ನೆಟ್ಟಿನಲ್ಲಿ, ಸಾವಯವ ಕುಂಕುಮ ಅನಾವರಣಗೊಳ್ಳಲಿದೆ.
ಕೃತಿ ಲೋಕಾರ್ಪಣೆಯ ಬಳಿಕ ಭಗವತ್ ಭಕ್ತ ಮಹಿಳೆಯರಿಂದ ಸಾಮೂಹಿಕ ಕುಂಕುಮಾರ್ಚನೆ ನಡೆಯಲಿದೆ. ಆಸಕ್ತ ಕುಮಾರಿಯರು, ಮಹಿಳೆಯರು ಈ ಕಾರ್ಯಕ್ರಮದಲ್ಲಿ ಹಾಗೂ ಕೃತಿ ಲೋಕಾರ್ಪಣಾ ಸಮಾರಂಭಕ್ಕೆ ಭಾಗಿಯಾಗಿ ದೇವಿಯ ಕೃಪಾಕಟಾಕ್ಷಕ್ಕೆ ಪಾತ್ರರಾಗಬೇಕಾಗಿ ವಿನಂತಿ. ಕುಂಕುಮಾರ್ಚನೆಗೆ ಬೇಕಾದ ಸಾಹಿತ್ಯವನ್ನು ಸಂಘಟಕರೇ ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು