11:16 PM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಪುತ್ತೂರು: ಮನೆಗಳ್ಳತನಕ್ಕೆ ಯತ್ನ; ಆರೋಪಿ ದಂಪತಿಯ ಬಂಧನ; ಬೈಕ್ ವಶ

31/12/2025, 23:02

ಪುತ್ತೂರು(reporterkarnataka.com): ಇಲ್ಲಿನ ಕಸಬಾ ಬಳಿ ಮನೆಯೊಂದರಿಂದ ಕಳ್ಳತನಕ್ಕೆ ಯತ್ನಿಸಿದ ಆರೋಪದ ಮೇಲೆ ದಂಪತಿಯ ಬಂಧಿಸಲಾಗಿದ್ದು, ಅವರು ಬಳಸಿದ ಬೈಕ್ ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಪುತ್ತೂರು ಕಸಬಾ ನಿವಾಸಿ ಎ.ವಿ ನಾರಾಯಣ (84) ಎಂಬವರ ಮನೆಗೆ ಡಿ. 17ರಂದು ಮಧ್ಯರಾತ್ರಿ, ಯಾರೋ ಇಬ್ಬರು ಅಪರಿಚಿತ ವ್ಯಕ್ತಿಗಳು, ಹೆಲ್ಮೆಟ್ ಧರಿಸಿಕೊಂಡು, ಮುಖಚಹರೆಯನ್ನು ಮರೆಮಾಚಿ ಮನೆಯಿಂದ ಬೆಲೆ ಬಾಳುವ ಸೊತ್ತುಗಳನ್ನು ಕಳ್ಳತನ ಮಾಡಲು ಮನೆಯ ಹಿಂಬಾಗಿಲಿನಿಂದ ಮನೆಗೆ ಪ್ರವೇಶಿಸಿದ್ದರು. ನಾರಾಯಣ ಹಾಗೂ ಅವರ ಪತ್ನಿಯನ್ನು ಬೆದರಿಸಿದ್ದು, ಈ ವೇಳೆ ನಡೆದ ತಳ್ಳಾಟದಲ್ಲಿ ನಾರಾಯಣ ಅವರ ಪತ್ನಿಗೆ ಗಾಯವಾಗಿದ್ದು, ಜೋರಾಗಿ ಕಿರುಚಿದ್ದಾರೆ. ಇದರಿಂದ ಹೆದರಿದ ಆರೋಪಿಗಳು ಮನೆಯ ಹಿಂಬಾಗಿಲಿನ ಮೂಲಕ ಓಡಿ ಪರಾರಿಯಾಗಿರುತ್ತಾರೆ. ನಾರಾಯಣ ಅವರು ನೀಡಿದ ದೂರಿನ ಮೇರೆಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 127/2025, ಕಲಂ: 307 ಜೊತೆಗೆ 3(5) ಬಿ ಎನ್ ಎಸ್ 2023 ರಂತೆ ಪ್ರಕರಣ ದಾಖಲಿಸಿದ್ದು, ತನಿಖೆ ನಡೆಸಿದ ಪುತ್ತೂರು ನಗರ ಪೊಲೀಸರು ಆರೋಪಿಗಳಾದ ಪುತ್ತೂರು, ಮುಡೂರು ನಿವಾಸಿ (ಪ್ರಸ್ತುತ ಬಾಡಿಗೆ ಮನೆ ವಾಸ:ಪಂಜ) ಕಾರ್ತಿಕ್ ರಾವ್ (31) ಮತ್ತು ಆತನ ಪತ್ನಿ ಕೆ.ಎಸ್. ಸ್ವಾತಿ ರಾವ್ (25)ಎಂಬವರನ್ನು ಬಂಧಿಸಿದ್ದಾರೆ. ಕೃತ್ಯಕ್ಕೆ ಬಳಸಿದ ಮೋಟಾರು ಸೈಕಲ್‌ನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿ ಕಾರ್ತಿಕ್ ರಾವ್ ಸಹಾಯಕ ಅರ್ಚಕರಾಗಿ ಕೆಲಸ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು