1:10 PM Thursday16 - January 2025
ಬ್ರೇಕಿಂಗ್ ನ್ಯೂಸ್
ಗರೋಡಿ ಜಾತ್ರೆಗೂ ಊರವರಿಗೆ ನೀರಿಲ್ಲ!: 5 ದಿನಗಳಿಂದ ನೋ ವಾಟರ್!!; ಮೇಯರ್ ಅವರೇ… ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಸಚಿವ ಜಮೀರ್‌ ಭಾವಚಿತ್ರಕ್ಕೆ ಸಗಣಿ ಬಳಿದು ಬಿಜೆಪಿ… ಕೆಚ್ಚಲು ಕೊಯ್ದ ಪ್ರಕರಣ: ದನದ ಮಾಲೀಕನ ತಾಯಿಗೆ 3 ಹಸು ಕೊಡಿಸಿದ ಸಚಿವ… 5 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರ: ಆರೋಪಿಯ ತಕ್ಷಣ ಬಂಧಿಸಲು ಆಗ್ರಹಿಸಿ ಎಐಎಂಎಸ್ಎಸ್… ಕಾಡಾನೆಯ ಚಿತ್ರೀಕರಣ ಮಾಡಲು ಹೋದ ಯೂಟ್ಯೂಬರ್ ಮೇಲೆ ಸಲಗ ದಾಳಿ: ಕೂದಲೆಳೆ ಅಂತರದಲ್ಲಿ… ವಿಕಲಚೇತನ ಉದ್ಯೋಗಿಗಳ ಜತೆ ಸಂಕ್ರಾಂತಿ ಹಬ್ಬ ಆಚರಿಸಿಕೊಂಡ ಕೇಂದ್ರ ಸಚಿವ ಕುಮಾರಸ್ವಾಮಿ ಶಬರಿಮಲೆ: ಆಕಾಶದತ್ತ ಮುಖ ಮಾಡಿ ಕಾಯುತ್ತಿದ್ದ ಭಕ್ತರಿಗೆ ಮಕರ ಜ್ಯೋತಿ ದರ್ಶನ: ಪುನೀತರಾದ… ನಂಜನಗೂಡು: ಶಿವಶರಣ ಶ್ರೀ ಸಿದ್ದರಾಮೇಶ್ವರ ರ ಜಯಂತಿ ಆಚರಣೆ ಜಿಹಾದಿ ಮನಸ್ಥಿತಿಯನ್ನು ಪೋಷಿಸಿ ಬೆಳೆಸುತ್ತಿರುವ ಸಿದ್ದರಾಮಯ್ಯ ಸರಕಾರ: ಸಂಸದ ಕ್ಯಾ ಬ್ರಿಜೇಶ್ ಚೌಟ… ವಿಜಯಪುರ: 4 ಮಂದಿ ಮಕ್ಕಳ ಜತೆ ಕಾಲುವೆಗೆ ಜಿಗಿದ ಹೆತ್ತಬ್ಬೆ: ಮಕ್ಕಳ ದಾರುಣ…

ಇತ್ತೀಚಿನ ಸುದ್ದಿ

ಪುತ್ತೂರು: ಬಿಜೆಪಿ ಓಬಿಸಿ ಮೋರ್ಚಾ ವತಿಯಿಂದ ಪೌರಕಾರ್ಮಿಕರಿಗೆ ಆಹಾರ ಪೊಟ್ಟಣ ವಿತರಣೆ

30/05/2021, 14:28

ಪುತ್ತೂರು(reporterkarnataka news);

ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಮತ್ತು ಪುತ್ತೂರು ನಗರ ಬಿಜೆಪಿ ಓಬಿಸಿ ಮೋರ್ಚಾ ವತಿಯಿಂದ ಇಂದು ಬೆಳಿಗ್ಗೆ ಪುತ್ತೂರು ನಗರಸಭೆಯ ಪೌರಕಾರ್ಮಿಕರಿಗೆ ಆಹಾರ ಪೊಟ್ಟಣ ಹಾಗೂ ಸಿಹಿತಿನಿಸು ವಿತರಿಸಲಾಯಿತು. 

ಕೇಂದ್ರ ಸರ್ಕಾರದ ಎರಡನೇ ಅವಧಿಯ ಎರಡನೇ ವರ್ಷದ ಆಚರಣೆ ಸಂದರ್ಭದಲ್ಲಿ ‘ಸೇವಾ ಹಿ ಸಂಘಟನ್’ ಕಾರ್ಯಕ್ರಮದಲ್ಲಿ ಕೋವಿಡ್ ಕಾರ್ಯದಲ್ಲಿ ಮುಂಚೂಣಿ ಕೆಲಸ ನಿರ್ವಹಿಸುವ ಪೌರಕಾರ್ಮಿಕರಿಗೆ ಆಹಾರ ಪೊಟ್ಟಣಗಳನ್ನು ಪುತ್ತೂರು ಶಾಸಕ ಸಂಜೀವ ಮಠಂದೂರು ವಿತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಸಂಜೀವ ಮಠಂದೂರು, ದೇಶ ಸಂಕಷ್ಟ ಎದುರಿಸುವ ಸಂದರ್ಭದಲ್ಲಿ ನಗರ ಸ್ವಚ್ಛತೆಯ ಹೊಣೆಹೊತ್ತಿರುವ ಪೌರಕಾರ್ಮಿಕರು ನೆಮ್ಮದಿಯಿಂದ ಇರಬೇಕು ಹಾಗೂ ಕೇಂದ್ರ ಸರಕಾರ ನಿರಂತರ ಏಳು ವರ್ಷ ಆಡಳಿತ ನಡೆಸಿ ಜನರ ಪ್ರೀತಿ-ವಿಶ್ವಾಸಕ್ಕೆ ಪಾತ್ರರಾಗಿದೆ. ಈ ಸಂದರ್ಭದಲ್ಲಿ ಜನರ ಕಷ್ಟಗಳಿಗೆ ಸ್ಪಂದಿಸುವ ಓಬಿಸಿ ಮೋರ್ಚಾದ ಕಾರ್ಯ ವೈಖರಿ ಶ್ಲಾಘನೀಯ ಎಂದರು.

ಓಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ಆರ್.ಸಿ.

ನಾರಾಯಣ್ ಮಾತನಾಡಿ, ದೇಶದ ಸಂಕಷ್ಟ ಸಮಯದಲ್ಲಿ ಜನರ ಆರೋಗ್ಯ ಕಾಪಾಡುವುದರ ಜೊತೆಗೆ ಜನರೊಂದಿಗೆ ಇದ್ದು ‌ ಜನಸೇವೆ ಮಾಡಬೇಕು. ಈ ನಿಟ್ಟಿನಲ್ಲಿ ಬಿಜೆಪಿ ಸೇವಾ ಹಿ ಸಂಘಟನ್ ಹೆಸರಿನಲ್ಲಿ ನಾಲ್ಕು ದಿನಗಳ ಕಾಲ ನಿರಂತರ ಹಲವು ಸೇವಾಕಾರ್ಯವನ್ನು ನಡೆಸಲಿದೆ. ಪ್ರಧಾನಿ ನರೇಂದ್ರ ಮೋದಿ ಸರಕಾರ ದೇಶಕ್ಕೆ ಹೊಸ ದಿಕ್ಕನ್ನು ತೋರಿಸುವ ಮುಖಾಂತರ ಜನಾನುರಾಗಿ ಕೆಲಸ ನಿರ್ವಹಿಸಿದೆ ಎಂದರು. 

ಕಾರ್ಯಕ್ರಮದಲ್ಲಿ ನಗರಸಭಾ ಅಧ್ಯಕ್ಷ ಜೀವಂಧರ್ ಜೈನ್, ಉಪಾಧ್ಯಕ್ಷರಾದ ವಿದ್ಯಾ ಆರ್. ಗೌರಿ, ಪೂಡಾ ಅಧ್ಯಕ್ಷ ಅಶೋಕ್ ಶೆಣೈ, ಸ್ಥಾಯಿ ಸಮಿತಿ ಅಧ್ಯಕ್ಷೆ ಗೌರಿ ಬನ್ನೂರು, ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಶಂಭು ಭಟ್, ಬಿಜೆಪಿ ಪುತ್ತೂರು ನಗರ ಪ್ರಧಾನ ಕಾರ್ಯದರ್ಶಿ ಯುವರಾಜ್,  ಜಯಶ್ರೀ ಶೆಟ್ಟಿ, ನಗರ ಓಬಿಸಿ ಮೋರ್ಚಾ ಅಧ್ಯಕ್ಷ ಶಿವರಾಮ ಸಪಲ್ಯ, ಪ್ರಧಾನ ಕಾರ್ಯದರ್ಶಿಗಳಾದ  ಜಯರಾಮ್ ಪೂಜಾರಿ, ದಿವಾಕರ ಆಚಾರ್ಯ, ನಗರಸಭಾ ಸದಸ್ಯರಾದ ಯಶೋಧ ಪೂಜಾರಿ, ರಾಜ್ಯ ಅಲ್ಪಸಂಖ್ಯಾತ ಮೋರ್ಚಾ ಸದಸ್ಯರಾದ ಸಂದೀಪ್ ಲೋಬೋ, ನಗರ ಯುವ ಮೋರ್ಚಾ ಅಧ್ಯಕ್ಷ ಸಚಿನ್ ಶೆಣೈ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು