1:10 PM Thursday2 - July 2026
ಬ್ರೇಕಿಂಗ್ ನ್ಯೂಸ್
ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಸ್ಥರಿಂದ ಭೂಕಬಳಿಕೆ ಆರೋಪ: ಮುಖ್ಯಮಂತ್ರಿ ಡಿಕೆಶಿ ಮುಂದೆ ಹಾಸನ… ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ…

ಇತ್ತೀಚಿನ ಸುದ್ದಿ

ಪುತ್ತೂರು: ಮಾದಕ ವಸ್ತು ಎಂಡಿಎಂಎ ಮಾರಾಟ ಜಾಲ ಪತ್ತೆ: 4 ಮಂದಿ ಆರೋಪಿಗಳ ಬಂಧನ

28/01/2026, 17:59

ಪುತ್ತೂರು(reporterkarnataka.com): ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ 4 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಕಾರು ವಶಪಡಿಸಿಕೊಂಡಿದ್ದಾರೆ.
ಬಂಧಿತ ಆರೋಪಿಗಳನ್ನು ಪುತ್ತೂರಿನ ಮೊಹಮ್ಮದ್ ಹರ್ಷದ್ (33), ಮಹಮ್ಮದ್ ಆರೀಶ್ (31), ಇಬ್ರಾಹಿಂ ಅಶ್ರಫ್ ಅಲಿಯಾಸ್ ರೋಜಾ ಅಶ್ರಫ್ (46) ಹಾಗೂ ಬಂಟ್ವಾಳ ನಿವಾಸಿ ಮುಸ್ತಾಫ (46) ಎಂದು ಗುರುತಿಸಲಾಗಿದೆ.
ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಬೆಟ್ಟಂಪಾಡಿ, ಇರ್ದೆ, ರೆಂಜ, ಅರ್ಲಪದವು ಪರಿಸರದಲ್ಲಿ ಅಕ್ರಮವಾಗಿ ಮಾದಕ ವಸ್ತುವಾದ ಎಂಡಿಎಂಎ ಸೇವನೆ ಮತ್ತು ಮಾರಾಟ ಮಾಡುತ್ತಿದ್ದ ಜಾಲವೊಂದನ್ನು ಪತ್ತೆ ಮಾಡಿ, ಆರೋಪಿಗಳನ್ನು ದಸ್ತಗಿರಿ ಮಾಡಲಾಗಿದೆ.
ಆರೋಪಿಗಳಿಂದ ಅಂದಾಜು ರೂ. 50,000/- ಮೌಲ್ಯದ ಸುಮಾರು 6.39 ಗ್ರಾಂ ಎಂಡಿಎಂಎ, ಗಾಂಜಾ 0.87 ಗ್ರಾಂ, ಮೊಬೈಲ್ ಫೋನ್ ಗಳು ಹಾಗೂ ಕೃತ್ಯಕ್ಕೆ ಬಳಸಿದ ಅಂದಾಜು 6 ಲಕ್ಷ ಮೌಲ್ಯದ 2 ಕಾರುಗಳನ್ನು ಹಾಗೂ ಇತರೆ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಒಟ್ಟು ಸೊತ್ತುಗಳ ಅಂದಾಜು ಮೌಲ್ಯ 6,50,000/-ರೂ ಗಳಾಗಿದ್ದು, ಈ ಬಗ್ಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕರಾದ ಗುಣಾಪಾಲ ಜೆ ರವರು ನೇತೃತ್ವದ ತನಿಖಾ ತಂಡದಲ್ಲಿ ಪುತ್ತೂರು ಗ್ರಾಮಾಂತರ ಠಾಣಾ ಉಪ ನಿರೀಕ್ಷಕರಾದ ಸುಶ್ಮಾ ಭಂಡಾರಿ ಹಾಗೂ ಸಿಬ್ಬಂಧಿಗಳಾದ ಮುರುಗೇಶ್ ಪರಮೇಶ್ವರ, ಸತೀಶ್, ಸುಬ್ರಹ್ಮಣ್ಯ, ಹರೀಶ್, ನಾಗೇಶ್, ಭವಿತ್ ರೈ ವಿನೋದ್, ನಾಗರಾಜ್, ಕಾರ್ತಿಕ್ ಹಾಗೂ ವಿಶೇಷ ತಂಡದ ಸಿಬ್ಬಂದಿಗಳಾದ ಅದ್ರಾಮ್ , ಪ್ರಶಾಂತ ಎಂ, ಪ್ರವೀಣ್ ರೈ, ಪ್ರಶಾಂತ್ ರೈ, ಹರ್ಷಿತ್, ಸಂಪತ್ ರವರು ಹಾಗೂ ಸೋಕೋ ತಂಡದವರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು