3:39 PM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಪುತ್ತೂರು ಮನೆಗಳ್ಳತನ ಪ್ರಕರಣ: ಆರೋಪಿ ಬಂಧನ; ಚಿನ್ನಾಭರಣ, ಬೈಕ್ ವಶ

17/08/2025, 23:02

ಪುತ್ತೂರು(reporterkarnataka.com): ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಿರುವ ಪೊಲೀಸರು ಸೊತ್ತುಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಬಂಧಿತ ಆರೋಪಿಯನ್ನು ಪುತ್ತೂರು, ನೆಟ್ಟಣಿಗೆ ಮುಡೂರು ಗ್ರಾಮದ ನಿವಾಸಿ ದಯಾನಂದ್ ನಾಯ್ಕ ಎಂ (29) ಎಂದು ಗುರುತಿಸಲಾಗಿದೆ.
ಈತನನ್ನು ಪುತ್ತೂರು ಈಶ್ವರಮಂಗಲದಲ್ಲಿ ದಸ್ತಗಿರಿ ಮಾಡಲಾಗಿದೆ.
ಆಗಸ್ಟ್ 12ರಂದು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ಸುಮಾರು 31 ಗ್ರಾಂ ಬಂಗಾರ ಮತ್ತು ರೂ.5000/- ನಗದು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ಅ.ಕ್ರ:83/2025 ಕಲಂ: 305 ಭಾರತೀಯ ನ್ಯಾಯ ಸಂಹಿತೆ-2023ರಂತೆ ಪ್ರಕರಣ ದಾಖಲಿಸಲಾಗಿದೆ.
ಆರೋಪಿಯಿಂದ 30.120 ಗ್ರಾಂ ಬಂಗಾರ ಮತ್ತು ಪ್ರಕರಣಕ್ಕೆ ಉಪಯೋಗಿಸಿದ ಡಿಸ್ಕವರಿ ಬೈಕ್ ನ್ನು ಸ್ವಾಧೀನಪಡಿಸಿಕೊಳ್ಳಲಾಗಿರುತ್ತದೆ.
ಪ್ರಕರಣದ ಆರೋಪಿ ಪತ್ತೆ ಕಾರ್ಯದಲ್ಲಿ, ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಅರುಣ್ ನಾಗೇಗೌಡ ಮತ್ತು ಪೊಲೀಸ್ ನಿರೀಕ್ಷಕರಾದ ರವಿ ಬಿ ಎಸ್ ರವರ ಮಾರ್ಗದರ್ಶನದಲ್ಲಿ, ಪುತ್ತೂರು ಗ್ರಾಮಾಂತರ ಠಾಣಾ ಉಪನಿರೀಕ್ಷಕರಾದ ಜಂಬುರಾಜ್ ಮಹಾಜನ್ ರವರ ನೇತೃತ್ವದ, ಎಎಸ್‌ಐ ಚಂದ್ರಶೇಖರ್, ಹೆಚ್.ಸಿ 1050 ಪ್ರವೀಣ್, ಹೆಚ್.ಸಿ 396 ಮಧು, ಹೆಚ್.ಸಿ 557 ಹರೀಶ್, ಹೆಚ್.ಸಿ 896 ಸುಬ್ರಹ್ಮಣ್ಯ, ಪಿಸಿ 452 ಆಕಾಶ್, ಪಿಸಿ 455 ಯುವರಾಜ್, ಪಿಸಿ 2394 ಶರಣಪ್ಪ ಪಾಟೀಲ್, ಚಾಲಕರಾದ ಎಆರ್ ಎಸ್ ಐ ಯಜ್ಞ, ಹೆಚ್.ಜಿ ಹರಿಪ್ರಸಾದ್ ಮತ್ತು ಹೆಚ್.ಜಿ ನಿತೇಶ್‌ರವರನ್ನೊಳಗೊಂಡ ತಂಡ ಕಾರ್ಯಾಚರಣೆ ನಡೆಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು