6:23 AM Wednesday10 - December 2025
ಬ್ರೇಕಿಂಗ್ ನ್ಯೂಸ್
ಬೆಂಗಳೂರು ನಗರದಲ್ಲಿ ಕ್ವಾಂಟಮ್ ಮೆಟೀರಿಯಲ್ಸ್ ನೆಟ್‌ವರ್ಕ್ (Q-MINt) ಸ್ಥಾಪಿಸಲು ಪ್ರಧಾನಿಗೆ ಸಿಎಂ ಪತ್ರ ಮಕ್ಕಳ ರಕ್ಷಣಾ ನಿರ್ದೇಶನಾಲಯದ ಯೋಜನೆಗಳ ಸಮರ್ಪಕ ಜಾರಿಗೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕೆಎಸ್ಸಾರ್ಟಿಸಿ ಬಸ್ ಪಲ್ಟಿ; ಶಾಲಾ ವಿದ್ಯಾರ್ಥಿಗಳು ಸೇರಿದಂತೆ 15 ಜನರಿಗೆ ಗಾಯ; ಕಂಡಕ್ಟರ್… ಸುವರ್ಣಸೌಧ ಮುತ್ತಿಗೆ ಹಾಕಲು ಯತ್ನ; ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿ ಪ್ರತಿಭಟನಾಕಾರರು ಪೊಲೀಸ್… ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ನೂತನ ಪ್ರಭಾರ ಅಧ್ಯಕ್ಷರಾಗಿ ಗೀತಾ ರಮೇಶ್ ಆಯ್ಕೆ ಸಿಎ ಸೈಟ್ ನಲ್ಲಿ ಕಟ್ಟಡ ನಿರ್ಮಾಣಕ್ಕೆ ಕಾಲಮಿತಿ ಷರತ್ತು ಸಡಿಲಿಕೆಗೆ ಕ್ರಮ: ವಿಧಾನ… ಜವಾಹರಲಾಲ್ ನೆಹರು ಹೊಂದಾಣಿಕೆಯ ಶಿಲ್ಪಿಯಾಗಿದ್ದರು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಿದ್ವಾಯಿ ಆಸ್ಪತ್ರೆ: ಒಂದೇ ಮೂತ್ರಪಿಂಡ ಹೊಂದಿದ್ದ ವಿಲ್ಮ್ಸ್ ಟ್ಯೂಮರ್ ಕಾಯಿಲೆಪೀಡಿತ ಬಾಲಕನಿಗೆ ಯಶಸ್ವಿ… ​ಬೆಂಗಳೂರಿನಲ್ಲಿ ವಾಹನಗಳ ಸಂಖ್ಯಾ ಸ್ಫೋಟ: 1.47 ಕೋಟಿ ಜನಸಂಖ್ಯೆ; 1.23 ಕೋಟಿ ವಾಹನಗಳ… ಬೆಳಗಾವಿ ಚಳಿಗಾಲದ ಅಧಿವೇಶನದ ನಾಳೆಯಿಂದ ಆರಂಭ: ಕುಂದನಗರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮನ

ಇತ್ತೀಚಿನ ಸುದ್ದಿ

ಪುತ್ತೂರು: ಅಕ್ರಮ ಜಾನುವಾರು ಸಾಗಾಟ; ಆರೋಪಿ ಕಾಲಿಗೆ ಪೊಲೀಸರು ಗುಂಡೇಟು; ಓರ್ವನ ಸೆರೆ, ಮತ್ತೋರ್ವ ಪರಾರಿ

22/10/2025, 13:44

ಪುತ್ತೂರು(reporterkarnataka.com): ಅನಧಿಕೃತವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಐಷರ್ ವಾಹನವನ್ನು ತಡೆಯಲು ಯತ್ನಿಸಿದ ಪೊಲೀಸರ ಜೀಪಿಗೆ ಡಿಕ್ಕಿ ಹೊಡೆದು ಕೊಲೆಯತ್ನ ನಡೆಸಿದ ಆರೋಪಿಯನ್ನು ಪೊಲೀಸರು ಗುಂಡು ಹಾರಿಸಿ ಸೆರೆ ಹಿಡಿದ ಘಟನೆ ಬುಧವಾರ ಮುಂಜಾನೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಈಶ್ವರಮಂಗಳ ಎಂಬಲ್ಲಿ ನಡೆದಿದೆ.


ಕೇರಳದ ಕಾಸರಗೋಡು ಮೂಲದ ಅಬ್ದುಲ್ಲಾ (40) ಗುಂಡೇಟಿನಿಂದ ಗಾಯಗೊಂಡ ಆರೋಪಿ ಆರೋಪಿಯ ಕಾಲಿಗೆ ಗುಂಡು ಬಿದ್ದಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬುಧವಾರ ಮುಂಜಾನೆ ಈಶ್ವರಮಂಗಳ ಭಾಗದಲ್ಲಿ ಅಬ್ದುಲ್ಲಾ ಎಂಬಾತ ಚಲಾಯಿಸುತ್ತಿದ್ದ ಐಷರ್ ವಾಹನದಲ್ಲಿ ಸುಮಾರು 10 ಜಾನುವಾರುಗಳನ್ನು ಅನಧಿಕೃತವಾಗಿ ಸಾಗಿಸಲಾಗುತ್ತಿತ್ತು. ವಾಹನದಲ್ಲಿ ಇನ್ನೊಬ್ಬ ಆರೋಪಿಯೂ ಇದ್ದನು. ಈ ವಾಹನವನ್ನು ನಿಲ್ಲಿಸಲು ಪೊಲೀಸರು ಸೂಚಿಸಿದಾಗ ಚಾಲಕ ಅಬ್ದುಲ್ಲಾ ವಾಹನ ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದ್ದಾನೆ.
ಸುಮಾರು 10 ಕಿ.ಮೀ. ದೂರದವರೆಗೆ ಪೊಲೀಸರು ವಾಹನವನ್ನು ಬೆನ್ನಟ್ಟಿದ್ದಾರೆ. ಈ ವೇಳೆ ಆರೋಪಿಯು ಪೊಲೀಸರ ಜೀಪಿಗೆ ಹಿಂಬದಿಯಿಂದ ಉದ್ದೇಶಪೂರ್ವಕವಾಗಿ ಡಿಕ್ಕಿ ಹೊಡೆದಿದ್ದಾನೆ.
ಪರಿಸ್ಥಿತಿಯ ಗಂಭೀರತೆಯನ್ನು ಮನಗಂಡ ಪಿಎಸ್‌ಐ ಅವರು ಆತ್ಮರಕ್ಷಣೆ ಹಾಗೂ ಆರೋಪಿಯನ್ನು ಹಿಡಿಯುವ ಸಲುವಾಗಿ ಎರಡು ಸುತ್ತು ಗುಂಡು ಹಾರಿಸಿದ್ದಾರೆ. ಅದರಲ್ಲಿ ಒಂದು ಗುಂಡು ಐಷರ್ ವಾಹನದ ಮೇಲೆ ಬಿದ್ದರೆ, ಮತ್ತೊಂದು ಗುಂಡು ಚಾಲಕ ಅಬ್ದುಲ್ಲಾ ಕಾಲಿಗೆ ತಗುಲಿದೆ. ಗುಂಡೇಟಿನಿಂದ ವಾಹನ ನಿಂತ ಕೂಡಲೇ ಅದರಲ್ಲಿದ್ದ ಮತ್ತೋರ್ವ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ.
ಗಾಯಗೊಂಡ ಆರೋಪಿ ಅಬ್ದುಲ್ಲಾನನ್ನು ತಕ್ಷಣವೇ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಆರೋಪಿ ಅಬ್ದುಲ್ಲಾ ಈ ಹಿಂದೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಗೋ ಹತ್ಯೆ ಕಾಯ್ದೆಯಡಿಯಲ್ಲಿಪ್ರಕರಣ ದಾಖಲಾಗಿರುತ್ತದೆ ಎಂದು ತಿಳಿದು ಬಂದಿದೆ.
ಈ ಸಂಬಂಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ. ಪರಾರಿಯಾದ ಮತ್ತೊಬ್ಬ ಆರೋಪಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು