4:48 PM Monday29 - June 2026
ಬ್ರೇಕಿಂಗ್ ನ್ಯೂಸ್
ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ… 2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು

ಇತ್ತೀಚಿನ ಸುದ್ದಿ

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ಜಾತ್ರಾ ಮಹೋತ್ಸವ: ಭಕ್ತರಿಗೆ ಭೋಜನ ಬಡಿಸಿದ ಶಾಸಕ ಅಶೋಕ ಕುಮಾರ್ ರೈ

14/04/2025, 20:26

ಜಯಾನಂದ ಪೆರಾಜೆ ಪುತ್ತೂರು

info.reporterkarnataka@gmail.com

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದ 4ನೇ ದಿನ ಮಧ್ಯಾಹ್ನ ಸುಮಾರು 15,000 ಭಕ್ತರು ಅನ್ನಪ್ರಸಾದ ಸ್ವೀಕರಿಸಿ ಸಂತೃಪ್ತಿಪಟ್ಟರು.


ಮಧ್ಯಾಹ್ನ 12 ಗಂಟೆಗೆ ಅನ್ನ ಸಂತರ್ಪಣೆ ಆರಂಭವಾಗಿ ಕುಳಿತು ಊಟ ಮಾಡುವ ಮತ್ತು ಬಫೆಯಲ್ಲಿ ರುಚಿಕರವಾದ ಊಟದ ವ್ಯವಸ್ಥೆ ಮಾಡಲಾಗಿತ್ತು. ಯಾವುದೇ ನೂಕುನುಗ್ಗಲು ಇರಲಿಲ್ಲ. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ಮೇಲುಸ್ತುವಾರಿಯಲ್ಲಿ ಶಿಸ್ತುಬದ್ಧವಾದ ವ್ಯವಸ್ಥೆ ಮಾಡಲಾಗಿತ್ತು. ಜಿಲ್ಲೆ ಮಾತ್ರವಲ್ಲದೆ ಹೊರಜಿಲ್ಲೆಗಳಾದ ಮೈಸೂರು ಮಂಡ್ಯ ಜಿಲ್ಲೆಗಳಿಂದಲೂ ಹೊರೆಕಾಣಿಕೆ ಬಂದಿರುವುದಾಗಿ ತಿಳಿಸಿದರು.
*ಶಾಸಕರ ಭೇಟಿ* ಮಧ್ಯಾಹ್ನ ದೇವಸ್ಥಾನಕ್ಕೆ ಪುತ್ತೂರು ಶಾಸಕ ಅಶೋಕ ರೈ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು. ಅನ್ನಛತ್ರಕ್ಕೆ ತೆರಳಿ ವ್ಯವಸ್ಥೆಯನ್ನು ವೀಕ್ಷಿಸಿ ಸ್ವಚ್ಚತೆಯ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು. ಸರತಿ ಸಾಲಿನಲ್ಲಿ ನಿಂತು ಬಫೆ ಊಟ ಸ್ವೀಕರಿಸಿದರು. ಬಳಿಕ ಸ್ವತಃ ಸ್ವಯಂಸೇವಕರ ಜೊತೆ ಸೇರಿ ಅನ್ನ ಬಡಿಸಿ ಗಮನ ಸೆಳೆದರು.
*ಯಾತ್ರಾರ್ಥಿಗಳಿಗೆ ಅನುಕೂಲ:*
ಎರಡು ವರ್ಷಗಳಲ್ಲಿ ಮಹಾಲಿಂಗೇಶ್ವರ ದೇವಸ್ಥಾನ ವನ್ನು ಪ್ರಸಿದ್ಧ ಯಾತ್ರಾಸ್ಥಳವನ್ನಾಗಿ ಮಾರ್ಪಡಿಸಲಾಗುವುದು‌ ಎಂದು ಸುದ್ದಿಗಾರರೊಂದಿಗೆ ಮತನಾಡುತ್ತಾ ತಿಳಿಸಿದರು. ಅಕ್ರಮವಾಗಿದ್ದ ಸ್ಥಳವು ಮಹಾಲಿಂಗೇಶ್ವರ ದೇವರಿಗೆ ಸಮರ್ಪಣೆಯಾಗಿದೆ. ಮುಂದಿನ ದಿನಗಳಲ್ಲಿ ಯಾತ್ರಾರ್ಥಿಗಳಿಗೆ ಬೇಕಾದ ಅನುಕೂಲಗಳನ್ನು ಮಾಡಿಕೊಡಲಾಗುವುದು ಎಂದರು.
ಪ್ರಸಿದ್ಧವಾದ ಕೆರೆಯನ್ನು ಸಂರಕ್ಷಿಸಿ ಭೋಜನಾ ಶಾಲೆ, ವಸತಿ ಸೇರಿದಂತೆ ಹಲವಾರು ಅಭಿವೃದ್ಧಿ ಕಾರ್ಯಗಳಾಗಲಿವೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು