9:59 AM Wednesday23 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಪುತ್ತೂರು: ಕಾರಿನಲ್ಲಿ ಸಂಚರಿಸುತ್ತಿದ್ದ ವ್ಯಕ್ತಿಗೆ ಪಿಸ್ತೂಲ್ ತೋರಿಸಿ ಬೆದರಿಕೆ; ಆರೋಪಿ ಬಂಧನ

05/03/2026, 15:24

ಪುತ್ತೂರು(reporterkarnataka.com): ಇಲ್ಲಿನ ರಿಲ್ಯಾನ್ಸ್ ಮಾಲ್ ಬಳಿ ಕಾರಿನಲ್ಲಿ ಸಂಚರಿಸುತ್ತಿದ್ದ ವ್ಯಕ್ತಿಯೊಬ್ಬರನ್ನು ಅಡ್ಡಗಟ್ಟಿ ಪಿಸ್ತೂಲ್ ತೋರಿಸಿ ಬೆದರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಪುತ್ತೂರು ನಿವಾಸಿ ಮಹಮ್ಮದ್ ಶಫಿಕ್ (19) ಎಂದು ಬಂಧಿತ ಆರೋಪಿ.
ಪುತ್ತೂರು ಕೆಮ್ಮಿಂಜೆ ನಿವಾಸಿ ಅಬ್ದುಲ್ ಹಕೀಂ (42) ಎಂಬವರು ಮಾರ್ಚ್ 2ರಂದು ಮಧ್ಯಾಹ್ನ, ಪುತ್ತೂರಿನಿಂದ ಕೂರ್ನಡ್ಕಕ್ಕೆ ತನ್ನ ಕಾರಿನಲ್ಲಿ ಹೋಗುತ್ತಿದ್ದಾಗ, ಪುತ್ತೂರು ರಿಲ್ಯಾನ್ಸ್ ಮಾಲ್ ಬಳಿ, ದ್ವಿಚಕ್ರ ವಾಹನದಲ್ಲಿ ಹೆಲ್ಮೆಟ್ ಧರಿಸದೆ ಬಂದ ಅಪರಿಚಿತ ವ್ಯಕ್ತಿಯೊಬ್ಬ ಹಕೀಂ ಅವರ ಕಡೆಗೆ ಪಿಸ್ತೂಲ್ ತೋರಿಸಿ ಗುಂಡು ಹೊಡೆಯಲು ಪ್ರಯತ್ನಿಸಿ ಬೆದರಿಸಿರುತ್ತಾನೆ. ಈ ವೇಳೆ ಹಕೀಂ ಹಾಗೂ ಇತರರು ಸೇರಿ ಆತನನ್ನು ಹಿಡಿಯಲು ಹೋದಾಗ ಆತನು ಬೈಕ್ ನಲ್ಲಿ ಪರಾರಿಯಾಗಿದ್ದನು. ಈ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ ಕ್ರ ನಂಬರ್: 26/2026, ಕಲಂ: 351(3) BNS 2023 ಮತ್ತು ಕಲಂ: 3, 25, 27 ಶಸ್ತ್ರಾಸ್ತ್ರ ಕಾಯ್ದೆ 1959ಯಡಿ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸಿ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು