2:21 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಪುತ್ತೂರು ನಗರ ಸಭೆ ಬಿಜೆಪಿ ಸದಸ್ಯ ನಾಪತ್ತೆ: ಬೈಕ್, ಮೊಬೈಲ್, ಚಪ್ಪಲಿ ಪಾಣೆಮಂಗಳೂರು ನೇತ್ರಾವತಿ ನದಿ ಬದಿ ಪತ್ತೆ

05/06/2025, 19:16

ಜಯಾನಂದ ಪೆರಾಜೆ ಬಂಟ್ವಾಳ

info.reporterkarnataka@gmail.com

ಪುತ್ತೂರು ಬಿಜೆಪಿ ನಗರ ಸಭೆ ಸದಸ್ಯ ರಮೇಶ್ ರೈ ನೆಲ್ಲಿಕಟ್ಟೆ ಅವರು ನಾಪತ್ತೆಯಾಗಿದ್ದು, ಅವರದ್ದು ಎನ್ನಲಾದ ಬೈಕ್, ಚಪ್ಪಲಿ ಮತ್ತು ಮೊಬೈಲ್ ಫೋನ್ ಪಾಣೆಮಂಗಳೂರು
ನೇತ್ರಾವತಿ ನದಿ ಬದಿ ಪತ್ತೆಯಾಗಿದೆ.
ಪಾಣೆಮಂಗಳೂರು ಹಳೆ ಸೇತುವೆ ಕೆಳಭಾಗದಲ್ಲಿ ಬೈಕ್, ಮೊಬೈಲ್, ಶರ್ಟ್ ಮತ್ತು ಚಪ್ಪಲಿ ಪತ್ತೆಯಾಗಿದೆ.
ಇಂದು ಬೆಳಿಗ್ಗೆ ಸುಮಾರು 11 ಗಂಟೆಯಿಂದ ಬೈಕ್ ಹಾಗೂ ಸೊತ್ತುಗಳು ಇಲ್ಲಿ ಅನಾಥವಾಗಿ ಕಂಡು ಬಂದಿವೆ ಎಂದು ಸ್ಥಳೀಯರು ಪೋಲೀಸರಿಗೆ ತಿಳಿಸಿದ್ದಾರೆ.
ಸ್ಥಳದಲ್ಲಿ ಸಿಕ್ಕಿದ ಮೊಬೈಲ್ ನಿಂದ ನಂಬರ್ ಪಡೆದು ಕರೆ ಮಾಡಿದಾಗ ಇದು ಪುತ್ತೂರು ರಮೇಶ್ ರೈ ಅವರದು ಎಂದು ತಿಳಿದಿದ್ದು,ಮನೆಯವರಿಗೆ ತಿಳಿಸಲಾಗಿದೆ. ಸ್ಥಳದಲ್ಲಿ ರಮೇಶ್ ರೈ ಅವರ ಕುಟುಂಬದ ಸದಸ್ಯರು ಪೋಲೀಸರು ಹಾಗೂ ಸ್ಥಳೀಯರು ಜಮಾಯಿಸಿದ್ದು ಸುತ್ತ ಮುತ್ತಲಿನ ಜಾಗದಲ್ಲಿ ಹುಡುಕಲು ಪ್ರಾರಂಭಿಸಿದ್ದಾರೆ.
ರಮೇಶ್ ರೈ ಅವರು ಇತ್ತೀಚಿಗೆ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಅಯ್ಕೆಯಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು