10:36 PM Thursday23 - July 2026
ಬ್ರೇಕಿಂಗ್ ನ್ಯೂಸ್
ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:…

ಇತ್ತೀಚಿನ ಸುದ್ದಿ

Puttur | ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನ ವಠಾರದಲ್ಲಿ ಹಿಂದೂ ಧಾರ್ಮಿಕ ಶಿಕ್ಷಣ ಶಾಖೆ ಆರಂಭ

17/12/2025, 11:17

ಪುತ್ತೂರು(reporterkarnataka.com): ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದ ದೇವಾಲಯ ಸಂವರ್ಧನಾ ಸಮಿತಿಯ ವತಿಯಿಂದ ಹಿಂದೂ ಧಾರ್ಮಿಕ ಶಿಕ್ಷಣ ಶಾಖೆಯ ಉದ್ಘಾಟನೆ ಜಲದುರ್ಗಾದೇವಿ ದೇವಸ್ಥಾನ ದಲ್ಲಿ ಮಂಗಳವಾರ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ದೀಪೊಜ್ವಲನದ ಮೂಲಕ ಶ್ರೀನಿವಾಸ ಹೆಬ್ಬಾರ್ ಅವರು ನೆರವೇರಿಸಿದರು. ದೇವಾಲಯ ಸಂವರ್ಧನಾ ಪ್ರಮುಖ್ ಕೇಶವ ಪ್ರಸಾದ್ ಮುಳಿಯ ಅವರು ಹಿಂದೂ ಧಾರ್ಮಿಕ ಶಿಕ್ಷಣ ದ ಕುರಿತು ಪ್ರಾಸ್ತಾವಿಕ ಮಾತಾಡಿ ವಿದ್ಯಾರ್ಥಿಗಳಿಗೆ ಸುಜ್ಞಾನ ದೀಪಿಕೆ ಪುಸ್ತಕವನ್ನು ಹಸ್ತಾಂತರಿಸಿದರು.
ಅಧ್ಯಕ್ಷತೆ ವಹಿಸಿದ ಪೆರುವಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ
ಜಗನ್ನಾಥ ಪೂಜಾರಿ ಅವರು ಧಾರ್ಮಿಕ ಶಿಕ್ಷಣದ ಮಹತ್ವ ಕುರಿತು ಮಾತಾಡಿದರು.
ಕಾರ್ಯಕ್ರಮದಲ್ಲಿ ಕೇಂದ್ರದ ಸಂಯೋಜಕರಾದ ಶ್ವೇತಾ ಕಾನಾವು ಸ್ವಾಗತಿಸಿದರು. ಪೂರ್ಣಿಮಾ ಉಮೇಶ್ ವಂದಿಸಿದರು. ಕೇಂದ್ರದ ಸಂಯೋಜಕರಾದ ಅಶ್ವಿನಿ ಕೂಡಿಬೈಲು ಕಾರ್ಯಕ್ರಮ ನಿರೂಪಿಸಿದರು.


ಹಿಂದೂ ಧಾರ್ಮಿಕ ಶಿಕ್ಷಣ ಪ್ರಕಲ್ಪದ ಸಂಚಾಲಕರಾದ
ಕೃಷ್ಣವೇಣಿ ಪ್ರಸಾದ್ ಮುಳಿಯ ಅವರು ಶ್ಲೋಕದ ಅರ್ಥ ವಿವರಿಸಿ, ಭಜನೆ ಹಾಗೂ ಚಟುವಟಿಕೆ ಹೇಳಿಕೊಟ್ಟರು.
ಸಂಯೋಜಕರಾದ ಡಾ. ವಿಜಯಸರಸ್ವತಿ ಅವರು ಶ್ಲೋಕ ಅರ್ಥ ಹಾಗೂ ದೈನಂದಿನ ಜೀವನದ ಆಚಾರ ವಿಚಾರಗಳನ್ನು ವಿವರಿಸಿದರು.
ಸಂಯೋಜಕರಾದ ಶಂಕರಿ ಶರ್ಮ ಅವರು ಕಥೆ ಹಾಗೂ ಸದ್ವಿಚಾರವನ್ನು ಹೇಳಿಕೊಟ್ಟರು.
ಕಾರ್ಯಕ್ರಮದಲ್ಲಿ ಗಣ್ಯರು, ಸ್ಥಳೀಯ ಭಕ್ತಾದಿಗಳು , ಪೋಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು