1:56 PM Tuesday13 - October 2026
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು

ಇತ್ತೀಚಿನ ಸುದ್ದಿ

ಪುತ್ತೂರು ಮಾಜಿ ಶಾಸಕ ಕೆ. ರಾಮ ಭಟ್ ನಿಧನ:  ಕರಾವಳಿಯಿಂದ ವಿಧಾನಸಭೆ ಪ್ರವೇಶಿಸಿದ ಮೊದಲ ಬಿಜೆಪಿ ನಾಯಕ

06/12/2021, 20:40

ಮಂಗಳೂರು(reporterkarnataka.com): ಪುತ್ತೂರಿನ ಮಾಜಿ ಶಾಸಕ, ಬಿಜೆಪಿಯ ಹಿರಿಯ ನಾಯಕ ಉರಿಮಜಲು ಕೆ.ರಾಮ(92) ಭಟ್ ಇಂದು ನಿಧನರಾದರು.

ರಾಮ ಭಟ್ ಅವರು ಕರಾವಳಿಯಿಂದ ಬಿಜೆಪಿಯಲ್ಲಿ ಆಯ್ಕೆಗೊಂಡ ಮೊದಲ ಶಾಸಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಜನಸಂಘ ಮೂಲಕ ರಾಜಕೀಯ ಜೀವನ ಆರಂಭಿಸಿದ ರಾಮ ಭಟ್ ಅವರು ಪುತ್ತೂರು ಕ್ಷೇತ್ರದಿಂದ 

1978ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿ. ಸಂಕಪ್ಪ ರೈ ಅವರನ್ನು ಸೋಲಿಸಿ ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಿದ್ದರು. 1983ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಅವರು ಮತ್ತೆ ಆಯ್ಕೆಗೊಂಡಿದ್ದರು. 80ರ ದಶಕದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಮಂಗಳೂರು ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್ ನ ಬಿ. ಜನಾರ್ದನ ಪೂಜಾರಿ ಎದುರು ಸ್ಪರ್ಧಿಸಿ ಸೋಲು ಅನುಭವಿಸಿದ್ದರು.

ಜನಸಂಘದ ಮೂಲಕ ದಕ್ಷಿಣ ಕನ್ನಡದಲ್ಲಿ ಬಿಜೆಪಿ ಪಕ್ಷವನ್ನು ಕಟ್ಟಲು ಸಾಕಷ್ಟು ಶ್ರಮಪಟ್ಟಿದ್ದರು. ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ರಾಮಭಟ್ ಅವರನ್ನು ಫೋನ್ ಮೂಲಕ ಸಂಪರ್ಕಿಸಿ ಯೋಗಕ್ಷೇಮ ವಿಚಾರಿಸಿದ್ದರು.

 

ಇತ್ತೀಚಿನ ಸುದ್ದಿ

ಜಾಹೀರಾತು