8:15 PM Friday19 - September 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ

ಇತ್ತೀಚಿನ ಸುದ್ದಿ

ಪುತ್ತೂರಿನ ವಕೀಲರ ಸಂಘ ಉದ್ಘಾಟನೆ:ಸುಪ್ರೀಂ ಕೋಟ್೯ ನ್ಯಾಯಮೂರ್ತಿ ಅಬ್ದುಲ್ ನಜೀರ್ ಚಾಲನೆ

28/12/2021, 11:53

ಪುತ್ತೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಂಗ, ಲೋಕೋಪಯೋಗಿ ಇಲಾಖೆ ಹಾಗೂ ಪುತ್ತೂರು ವಕೀಲರ ಸಂಘದ ಸಂಯುಕ್ತಾಶ್ರಯದಲ್ಲಿ ಪುತ್ತೂರಿನ ಆನೆಮಜಲಿನಲ್ಲಿ ನೂತನವಾಗಿ ನಿರ್ಮಿಸಿರುವ ವಕೀಲರ ಸಂಘದ ಕಟ್ಟಡವನ್ನು ಸುಪ್ರೀಂ ಕೋಟ್೯

ನ್ಯಾಯಮೂರ್ತಿ ಎಸ್. ಅಬ್ದುಲ್ ನಜೀರ್ ಮಂಗಳವಾರ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಅವರು ಕಟ್ಟಡದ ಆವರಣದಲ್ಲಿ ಸಸಿಯೊಂದನ್ನು ನೆಟ್ಟರು. ಅವರೊಂದಿಗೆ, ರಾಜ್ಯ ಹೈಕೋರ್ಟ್ ನ್ಯಾಯಾಧೀಶರು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಆಡಳಿತಾತ್ಮಕ ನ್ಯಾಯಾಧೀಶರಾದ ನ್ಯಾಯಮೂರ್ತಿ ಕೆ. ಸೋಮಶೇಖರ್, ಹೈಕೋರ್ಟ್

ನ್ಯಾಯಾಧೀಶರುಗಳಾದ  ಮೊಹಮ್ಮದ್ ನವಾಜ್ ಮತ್ತು ಎಸ್. ವಿಶ್ವಜಿತ್ ಶೆಟ್ಟಿ, ಪುತ್ತೂರು ಶಾಸಕ ಸಂಜೀವ ಮಠಂದೂರು, ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್. ಭೋಜೇಗೌಡ, ಹೆಚ್ಚುವರಿ ಅಡ್ವಕೇಟ್ ಜನರಲ್ ಅರುಣ್ ಶ್ಯಾಮ್, ರಾಜ್ಯ ವಕೀಲರ ಪರಿಷತ್ತನ ಅಧ್ಯಕ್ಷ ಎಲ್. ಶ್ರೀನಿವಾಸ ಬಾಬು ಹಾಗೂ ವಕೀಲರ ಪರಿಷತ್ ಅಧ್ಯಕ್ಷ ಪಿ.ಪಿ ಹೆಗ್ಡೆ, ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ಮುರಲಿಧರ ಪೈ, ಬಿ. ಹಾಗೂ ಇತರೆ ಗಣ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು