ಇತ್ತೀಚಿನ ಸುದ್ದಿ
ಪುತ್ತೂರು: ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ
07/01/2024, 21:05
ಪುತ್ತೂರು (reporterkarnata.com): ಪುತ್ತೂರಿನ ಖಾಸಗಿ ಕಾಲೇಜಿನ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಡೆದಿದೆ.
ಮೃತ ಬಾಲಕಿಯನ್ನು ಸುಳ್ಯಪದವು ಕನ್ನಡ್ಕ ನಿವಾಸಿ ದೀಕ್ಷಾ(16) ಎಂದು ಗುರುತಿಸಲಾಗಿದೆ. ಪುತ್ತೂರು ಸೈಂಟ್ ಫಿಲೋಮಿನಾ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿಯಾದ ಈಕೆ ಮನೆಯ ಪ್ಯಾನ್ ಗೆ ನೇಣು ಬಿಗಿದು ಸಾವಿಗೆ ಶರಣಾಗಿದ್ದಾಳೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.