11:28 PM Friday12 - December 2025
ಬ್ರೇಕಿಂಗ್ ನ್ಯೂಸ್
ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ ಆರೆಸ್ಸೆಸ್ ಅಂದ್ರೆ ಉರಿಯುವ ಕಾಂಗ್ರೆಸ್ ನಾಯಕರಿಗೆ ಅವರ ಸರ್ಕಾರದಿಂದಲೇ ಉತ್ತರ: ಕೇಂದ್ರ ಸಚಿವ… ಮೈಸೂರು-ಕುಶಾಲನಗರ ಹೆದ್ದಾರಿ ಪ್ಯಾಕೇಜ್ 2 ಕಾಮಗಾರಿ ಆರಂಭ: 4126 ಕೋಟಿ ವೆಚ್ಚದಲ್ಲಿ ಅಗಲೀಕರಣ ಭೂ ಪರಿವರ್ತನೆ ನಿಯಮಗಳ ಸರಳೀಕರಣ: ವಿಧಾನ ಪರಿಷತ್ ನಲ್ಲಿ ಸಚಿವ ಕೃಷ್ಣ ಬೈರೇಗೌಡ

ಇತ್ತೀಚಿನ ಸುದ್ದಿ

ಪುತ್ತೂರು: ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದು ಬಸ್ಸಿಗೆ ಗುದ್ದಿದ ಬೈಕ್; ಓರ್ವ ಸ್ಥಳದಲ್ಲೇ ಸಾವು, ಇನ್ನೋರ್ವನಿಗೆ ಗಾಯ

04/09/2022, 20:07

ಪುತ್ತೂರು(reporterkarnataka.com): ಪರ್ಲಡ್ಕ ರಸ್ತೆಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಒಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೊಬ್ಬರು ಗಾಯಗೊಂಡಿದ್ದಾರೆ.

ಬೈಕ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬಸ್‌ಗೆ ಗುದ್ದಿದ ಪರಿಣಾಮ ದ್ವಿಚಕ್ರ ವಾಹನ ಸವಾರರಾದ.ವೀರಮಂಗಲ ಖಂಡಿಗೆಯ ಭರತ್ ರಾಜ್ ಗೌಡ (22) ಮೃತಪಟ್ಟಿದ್ದು,ಕೊಳ್ತಿಗೆ ಪೆರ್ಲಂಪಾಡಿ ನಿವಾಸಿ ಧನುಷ್(24) ಗಾಯಗೊಂಡಿದ್ದಾರೆ.

ಭರತ್ ರಾಜ್ ಗೌಡ ಹಾಗೂ ಸ್ನೇಹಿತ ಧನುಷ್‌ ಶನಿವಾರ ದಂದು ಬೈಕ್‌ ನಲ್ಲಿ ಗಣೇಶೋತ್ಸವ ಶೋಭಾಯಾತ್ರೆಗೆಂದು ಪುತ್ತೂರಿಗೆ ಹೋಗಿ ಬರುವ ವೇಳೆ ಪರ್ಲಡ್ಕ ರಸ್ತೆಯಲ್ಲಿ ಸವಾರನ ನಿಯಂತ್ರಣ ತಪ್ಪಿ ಬೈಕ್‌ ರಸ್ತೆ ಬದಿಯ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದು, ಮಂಗಳೂರು ಕಡೆ ಹೋಗುತ್ತಿದ್ದ ಬಸ್ಸಿನ ಹಿಂಬದಿಯ ಭಾಗಕ್ಕೆ ಗುದ್ದಿದೆ.

ಇದರಿಂದಾಗಿ ಭರತ್‌ ರಾಜ್‌ ತಲೆಗೆ ತೀವ್ರತರದ ಪೆಟ್ಟು ಬಿದ್ದಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋದರು. ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದರು.

ಬೈಕ್‌ನಲ್ಲಿದ್ದ ಇನ್ನೋರ್ವ ಧನುಷ್ ಅವರು ಪುತ್ತೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು