11:50 AM Sunday19 - January 2025
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಕೃಷಿ ಬಲವರ್ಧನೆ ನೆರವಿಗೆ ಸಚಿವ ಚಲುವರಾಯಸ್ವಾಮಿ ಮನವಿ: ಕೇಂದ್ರ ಸಮ್ಮತಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ಕೋತಿಗೆ ಗ್ರಾಪಂ ಮಾಜಿ ಅಧ್ಯಕ್ಷರಿಂದ ಅಂತ್ಯ ಸಂಸ್ಕಾರ: ರಾತ್ರಿ… ಜಾತಿಗಣತಿ ವರದಿ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡನೆ: ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ… ಸಂಭ್ರಮ- ಸಡಗರಕ್ಕೆ ಸಾಕ್ಷಿಯಾದ ಕಡಲನಗರಿಯ ಮಂಗಳಾ ಕ್ರೀಡಾಂಗಣ: 4500 ಕ್ರೀಡಾಪಟುಗಳ ಪಾದಸ್ಪರ್ಶ ಎಷ್ಟಾದರೂ ಹಣ-ಸವಲತ್ತು ಕೇಳಿ ಕೊಡ್ತೀನಿ, ಆದರೆ ಒಲಂಪಿಕ್ ಮೆಡಲ್ ತನ್ನಿ: ಮಂಗಳೂರಿನಲ್ಲಿ ಸಿಎಂ… ಮಂಗಳೂರು: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಪ್ರಾದೇಶಿಕ ಕಚೇರಿಗೆ ಸಿಎಂ ಸಿದ್ದರಾಮಯ್ಯ… ಮಂಗಳೂರಿಗೆ ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ: ರಾಜೀವ್ ಗಾಂಧಿ ವಿವಿ ಪ್ರಾದೇಶಿಕ ಕೇಂದ್ರಕ್ಕೆ ಶಿಲಾನ್ಯಾಸ ಕುರ್ಚಿಗಾಗಿ ಕಾದಾಟದಲ್ಲೇ ಎಲ್ಲರೂ ಮಗ್ನ, ಜನರ ಪಾಲಿಗೆ ಸರ್ಕಾರದ ನೆರವು ಮರೀಚಿಕೆ: ಪ್ರತಿಪಕ್ಷ… ಕೆಎಎಸ್‌ ಪೂರ್ವಭಾವಿ ಮರುಪರೀಕ್ಷೆಯ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್… ಬಾಲಿವುಡ್ ನಟ ಸೈಫ್ ಅಲಿಖಾನ್ ಗೆ 6 ಬಾರಿ ಚಾಕು ಇರಿತ: ಮುಂಜಾನೆ…

ಇತ್ತೀಚಿನ ಸುದ್ದಿ

ಪುತ್ತೂರು ಪೊಲೀಸರ ಅತಿರೇಕದ ವರ್ತನೆ: ಶಾಸಕ ಡಾ.ಭರತ್ ಶೆಟ್ಟಿ ಕಿಡಿ

18/05/2023, 21:38

ಮಂಗಳೂರು(reporterkarnataka.com): ಪುತ್ತೂರಿನ ಹಿಂದು ಸಂಘಟನೆಯ ಕಾರ್ಯಕರ್ತರ ಕೈ ಕಾಲು ಮುರಿಯುವಂತೆ ಥರ್ಡ್ ಡಿಗ್ರಿ ಶಿಕ್ಷೆ ಪ್ರಯೋಗ ಮಾಡಿದ ಪೊಲೀಸರು ಆಸ್ಪತ್ರೆಯಲ್ಲಿ ಮಲಗುವಂತೆ ಮಾಡಿದ್ದಾರೆ. ಪೊಲೀಸರ ಅತಿರೇಕದ ವರ್ತನೆಗೆ ವಜಾ ಅಲ್ಲ ,ಮನೆಗೆ ಕಳಿಸುವ ಕೆಲಸವನ್ನು ಇಲಾಖೆ ಮಾಡಬೇಕು ಎಂದು ಮಂಗಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿ ವೈ ಒತ್ತಾಯಿಸಿದ್ದಾರೆ.
ಅತ್ಯಾಚಾರವಾದರೆ, ಮಾದಕ ದ್ರವ್ಯ ಜಾಲದಲ್ಲಿ ಸಿಕ್ಕಿ ಬಿದ್ದವರಿಗೆ ಪೊಲೀಸರ ರಾಜಾತಿಥ್ಯ ಸಿಗುತ್ತದೆ. ಸನಾತನ ಧರ್ಮ ಹಿಂದುತ್ವದ ಪರ ಕೆಲಸ ಮಾಡಿದರೆ, ಇಲ್ಲವೇ ಯಾವುದೋ ದ್ವೇಷದಿಂದ ಪೊಲೀಸ್ ಇಲಾಖೆ ಲಾಠಿ ಬೀಸಿ ಕೈ ಕಾಲು ಮುರಿಯುವ ಕೆಲಸ ಮಾಡುತ್ತಿದೆ. ಹಿರಿಯ ಅಧಿಕಾರಿಗಳು ಏನು ಮಾಡುತ್ತಿದ್ದಾರೆ. ನಿಮಗೆ ತಿಳಿಯದೆ ಈ ಗಂಭೀರ ಕೃತ್ಯ ಆಗಿದೆಯೆ? ಲಾಕಪ್ ಟಾರ್ಚರ್ ವಿರುದ್ದ ಸೂಕ್ತ ತನಿಖೆ ಮಾಡಿ ತಪ್ಪಿತಸ್ಥರನ್ನು ಮನೆಗೆ ಕಳಿಸಿ , ಇತರರಿಗೆ ಇದು ಪಾಠವಾಗಬೇಕು ಎಂದು ರಾಜ್ಯದ ಪೊಲೀಸ್ ಮಹಾನಿರ್ದೇಶಕರನ್ನು ಆಗ್ರಹಿಸಿದ್ದಾರೆ
ನಮ್ಮ ಸಂಘಟನೆಯ ಕಾರ್ಯಕರ್ತರೊಂದಿಗೆ ಸದಾ ನಾವಿದ್ದೇವೆ ಎಂದು ಡಾ. ಭರತ್ ಶೆಟ್ಟಿ ವೈ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು