ಇತ್ತೀಚಿನ ಸುದ್ದಿ
ಪುತ್ತೂರು ಪೊಲೀಸರ ಅತಿರೇಕದ ಕ್ರಮ: ಶಾಸಕ ವೇದವ್ಯಾಸ ಕಾಮತ್ ಖಂಡನೆ; ಸೇವೆಯಿಂದ ವಜಾಕ್ಕೆ ಒತ್ತಾಯ
18/05/2023, 22:01
ಮಂಗಳೂರು(reporterkarnataka.com): ಪುತ್ತೂರು ಕಾರ್ಯಕರ್ತರ ಮೇಲಿನ ಹಲ್ಲೆ ಅಮಾನವೀಯ ಕೃತ್ಯವಾಗಿದ್ದು, ಹಲ್ಲೆ ನಡೆಸಿದ ಪೊಲೀಸರನ್ನು ಸೇವೆಯಿಂದ ವಜಾಗೊಳಿಸುವಂತೆ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅವರು ಒತ್ತಾಯಿಸಿದ್ದಾರೆ.
ಸಂಘಟನೆಯ ಕಾರ್ಯಕರ್ತರ ಮೇಲೆ ಈ ರೀತಿಯಲ್ಲಿ ಹಲ್ಲೆ ನಡೆಸುವುದರ ಹಿಂದೆ ಯಾರ ಕೈವಾಡವಿದೆ ಎನ್ನುವುದನ್ನು ತನಿಖೆ ನಡೆಸಿ ಬಹಿರಂಗಪಡಿಸಬೇಕು. ಕಾಂಗ್ರೇಸ್ ಅಧಿಕಾರಕ್ಕೆ ಬಂದ ತಕ್ಷಣ ನಮ್ಮ ಕಾರ್ಯಕರ್ತರನ್ನು ಬೆದರಿಸುವ ಕೆಲಸವಾಗುತ್ತಿದೆ ಇದರ ಹಿಂದಿನ ಕೈ ಯಾರದ್ದು ಎನ್ನುವುದು ಬಹಿರಂಗವಾಗಬೇಕು ಎಂದು ಶಾಸಕ ಕಾಮತ್ ಆಗ್ರಹಿಸಿದ್ದಾರೆ.