3:44 AM Tuesday13 - October 2026
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು

ಇತ್ತೀಚಿನ ಸುದ್ದಿ

ಪುತ್ತೂರು: ರೇಡಿಯೋ ಪಾಂಚಜನ್ಯದಲ್ಲಿ ಕನ್ನಡ ಗೀತೆ ಗಾಯನ, ಚರ್ಚಾ ಸ್ಪರ್ಧೆ

13/11/2024, 18:11

ಪುತ್ತೂರು(reporterkarnataka.com): ವಿವೇಕಾನಂದ ವಿದ್ಯಾವರ್ಧಕ ಸಂಘ ಪ್ರವರ್ತಿತ ರೇಡಿಯೋ ಪಾಂಚಜನ್ಯದ ಆಶ್ರಯದಲ್ಲಿ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಮತ್ತು ರೋಟರಿ ಯುವ ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ಗೀತೆ ಗಾಯನ ಸ್ಪರ್ಧೆ ಮತ್ತು ಜೀವನದ ಬೆಳವಣಿಗೆಗೆ ಶಿಕ್ಷಣದಲ್ಲಿ ಕನ್ನಡ ಭಾಷೆ ಬೇಕೆ.. ? ಬೇಡವೇ….? ಚರ್ಚಾ ಸ್ಪರ್ಧೆ ನ. 11ರಂದು ನೆಹರೂ ನಗರ ವಿವೇಕಾನಂದ ಸ್ನಾತಕೋತ್ತರ ಕಾಲೇಜಿನಲ್ಲಿ ನಡೆಯಿತು.


ಕಾರ್ಯಕ್ರಮವನ್ನು ರೇಡಿಯೋ ಪಾಂಚಜನ್ಯದ ಅಧ್ಯಕ್ಷೆ ಕೃಷ್ಣವೇಣಿ ಪ್ರಸಾದ್ ಮುಳಿಯ, ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಉಮೇಶ್ ನಾಯಕ್ ಮತ್ತು ರೋಟರಿ ಯುವ ಅಧ್ಯಕ್ಷೆ ಅಶ್ವಿನಿ ಕೃಷ್ಣ ಮುಳಿಯ ಉದ್ಘಾಟಿದರು.
ಚರ್ಚಾ ಸ್ಪರ್ಧಾ ತೀರ್ಪುಗಾರರಾಗಿ ಬೆವೆಲ್ ಫಾರ್ಮಾ ಮಂಗಳೂರು ಸಿಇಒ ಡಾ. ಅನಿಲ ದೀಪಕ್ ಶೆಟ್ಟಿ, ನ್ಯಾಯವಾದಿ ಸೀಮಾ ನಾಗರಾಜ್ ಮತ್ತು ಕನ್ನಡ ಉಪನ್ಯಾಸಕರಾದ ಮಧು ಕುಮಾರ್ ಹಾಗೂ ಕನ್ನಡ ಗೀತೆ ಗಾಯನ ಸ್ಪರ್ಧೆಯಲ್ಲಿ ತೀರ್ಪುಗಾರರಾಗಿ ಕವಿತಾ ದಿನಕರ್, ಚೈತ್ರಿಕಾ ಮತ್ತು ಗೀತಾ ಗಂಗಾಧರ್ ಆಚಾರ್ಯ ಉಪಸ್ಥಿತರಿದ್ದರು. ಸಭಾಕಾರ್ಯಕ್ರಮವನ್ನು ರೇಡಿಯೋ ಪಾಂಚಜನ್ಯ ನಿಲಯ ನಿರ್ದೇಶಕಿ ತೇಜಸ್ವಿನಿ ರಾಜೇಶ್ ನಿರೂಪಿಸಿದರು. ತಾಂತ್ರಿಕ ಸಲಹೆಗಾರ ಪ್ರಶಾಂತ್, ಪ್ರಜ್ಞಾ ಸಿದ್ಧಾರ್ಥ್ ಮತ್ತು ತ್ರಿವೇಣಿ ಗಣೇಶ್ ಸಹಕರಿಸಿದರು.
ಚರ್ಚಾ ಸ್ಪರ್ಧೆಯ ವಿಜೇತರಾಗಿ ತೆಂಕಿಲ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳಾದ ಪ್ರಜ್ಞಾ ನಿಡ್ವಣ್ಣಾಯ ಮತ್ತು ಗಗನ (ಪ್ರಥಮ), ಬಪ್ಪಳಿಗೆ ಅಂಬಿಕಾ ವಿದ್ಯಾಲಯದ ಅಧ್ವೈತಕೃಷ್ಣ ಮತ್ತು ಜ್ವಲನ್ ಜೋಶಿ (ದ್ವಿತೀಯ), ತೆಂಕಿಲ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ಧನುಷ್ ಮತ್ತು ಕೌಶಿಕ್ (ತೃತೀಯ)ಸ್ಥಾನವನ್ನು ಪಡೆದುಕೊಂಡಿದ್ದಾರೆ.
ಕನ್ನಡ ಗೀತೆ ಗಾಯನ ಸ್ಪರ್ಧೆಯ 5 ರಿಂದ 7ನೇ ತರಗತಿ ವಿಭಾಗದಲ್ಲಿ ಉಪ್ಪಿನಂಗಡಿ ಇಂದ್ರಪ್ರಸ್ಥ ವಿದ್ಯಾಲಯದ ವಿದ್ಯಾರ್ಥಿನಿ ಅನುಪ್ರಿಯ (ಪ್ರಥಮ), ನೆಹರೂನಗರ ವಿವೇಕಾನಂದ ಸೆಂಟ್ರಲ್ ಸ್ಕೂಲ್‍ನ ವಿದ್ಯಾರ್ಥಿನಿ ಧೃತಿ ಬಿ ಮತ್ತು ದರ್ಬೇತ್ತಡ್ಕ ಶಾಲಾ ವಿದ್ಯಾರ್ಥಿ ತೇಜಸ್ ಎಲ್.ಕೆ (ದ್ವಿತೀಯ), ತೆಂಕಿಲ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿನಿ ಗರೀಮಾ (ತೃತೀಯ) ಸ್ಥಾನವನ್ನು ಪಡೆದುಕೊಂಡಿದ್ದಾರೆ.
8 ರಿಂದ 10 ನೇ ತರಗತಿ ವಿಭಾಗದ ಕನ್ನಡ ಗೀತೆ ಗಾಯನ ಸ್ಪರ್ಧೆಯಲ್ಲಿ ಉಪ್ಪಿನಂಗಡಿ ಇಂದ್ರಪ್ರಸ್ಥ ವಿದ್ಯಾಲಯದ ವಿದ್ಯಾರ್ಥಿನಿ ಆದ್ಯಾ (ಪ್ರಥಮ), ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿನಿ ಸಿರಿ ಹಿಳ್ಳೇಮನೆ ಮತ್ತು ಉಪ್ಪಿನಂಗಡಿ ಇಂದ್ರಪ್ರಸ್ಥ ವಿದ್ಯಾಲಯದ ವಿದ್ಯಾರ್ಥಿ ನೇಹಾಲ್ (ದ್ವಿತೀಯ), ಪುತ್ತೂರು ರಾಮಕೃಷ್ಣ ಪ್ರೌಢ ಶಾಲಾ ವಿದ್ಯಾರ್ಥಿಗಳಾದ ಸಮರ್ಥ್ ಪಿ. ಮತ್ತು ಅವನಿ ನಾಯಕ್ (ತೃತೀಯ) ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು