ಇತ್ತೀಚಿನ ಸುದ್ದಿ
ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ ರಾಷ್ಟ್ರೀಯ ಚುನಾವಣಾ ದಿನಾಚರಣೆ
28/01/2023, 17:59
ಪುತ್ತೂರು(reporterkarnataka.com): ಸಂತ ಫಿಲೋಮಿನಾ ಕಾಲೇಜಿನ ಚುನಾವಣಾ ಸಾಕ್ಷರತಾ ಕ್ಲಬ್ ಹಾಗೂ ಆಂತರಿಕ ಗುಣಮಟ್ಟ ಕೋಶಗಳ ಸಹಯೋಗದಲ್ಲಿ ರಾಷ್ಟ್ರೀಯ ಚುನಾವಣಾ ದಿನವನ್ನು ಆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಉಪಪ್ರಾಂಶುಪಾಲರಾದ ಪ್ರೊ. ಗಣೇಶ್ ಭಟ್ ಅವರು “ಯುವ ಜನತೆಯು ರಾಷ್ಟ್ರದ ಅತಿ ದೊಡ್ಡ ಸಂನ್ಮೂಲವಾಗಿದೆ, ಮನಾವಣೆಯಲ್ಲಿ ಭಾಗವಹಿಸುವುದು ಪ್ರತಿಯೋರ್ವ ನಾಗರಿಕನ ಕರ್ತವ್ಯವಾಗಿದೆ. ಯುವ ಜನತೆ ತಮ್ಮ ಜವಾಬ್ದಾರಿಯನ್ನರಿಗೆ ರಾಜ್ಯ ನಿರ್ಮಾಣ ಕಾರ್ಯದಲ್ಲಿ ಲಾಗಿಯಾಗಬೇಕು ಎಂದು ವಿದ್ಯಾರ್ಥಿಗಳಿಗೆ ಕರೆನೀಡಿದರು.
ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ. ಎ. ರಾಧಾಕೃಷ್ಣರವರು ರಾಷ್ಟ್ರೀಯ ಚುನಾವಣಾ ದಿನದ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸುತ್ತಾ” ಚುನಾವಣೆಯಲ್ಲಿ ಭಾಗವಹಿಸಿದಾಗ ಮಾತ್ರವೇ ನಾವು ಪ್ರಜಾಪ್ರಭುತ್ವ ವ್ಯವಸ್ಥೆಯ ಅಂಗವಾಗಿರುತ್ತೇವೆ. ಭಾರತೀಯ ಚುನಾವಣಾ ಆಯೋಗದ ಸಂಸ್ಥಾಪನಾ ದಿನದ ನೆನಪಿಗಾಗಿ ಹಾಗೂ ಯುವ ಚುನಾವಣೆಯ ಮುಹತ್ವದ ಬಗ್ಗೆ ಅರಿವು ಮೂಡಿಸುವ ಸಲುವಾಗಿ ರಾಷ್ಟ್ರೀಯ ಚುನಾವಣಾ ದಿನವನ್ನು ಆಚರಿಸಲಾಗುತ್ತಿದೆ” ಎಂದು ಹೇಳಿದರು.
ಕಾಲೇಜಿನ ಚುನಾವಣಾ ಸಾಕ್ಷರತಾ ಕ್ಲಬ್‌ನ ಸಂಯೋಜಕರಾದ ಡಾ. ಎಂ ವಯಾ ಪ್ರತಿಜ್ಞಾವಿಧಿ ಬೋಧಿಸಿದರು. ಹರ್ಷಿತಾ ಮತ್ತು ಬಳಗೆ ಪ್ರಾರ್ಥಿಸಿದರು. ಚುನಾವಣಾ ಸಾಕ್ಷರತಾ ಕ್ಲಬ್‌ನ ಸದಸ್ಯರಾದ ಗೀತಾ ಪೂರ್ಣಿಮಾ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ಮತಗಟ್ಟೆಯ ಬೂತ್ ಲೆವೆಲ್ ಸರ್ ರಾಬರ್ಟ್ ಮೊಂತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.