5:51 PM Saturday19 - April 2025
ಬ್ರೇಕಿಂಗ್ ನ್ಯೂಸ್
Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ…

ಇತ್ತೀಚಿನ ಸುದ್ದಿ

ಪುತ್ತೂರು ಸಂತ ಫಿಲೋಮಿನಾ ಕಾಲೇಜು ನೂತನ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಮಾಹಿತಿ ಕಾರ್ಯಕ್ರಮ

11/11/2022, 18:46

ಪುತ್ತೂರು(reporterkarnataka): ಸಂತ ಪಿಲೋಮಿನಾ ಕಾಲೇಜಿನಲ್ಲಿ ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶ ಹಾಗೂ ವಿದ್ಯಾರ್ಥಿ ಸಂಘ ಜಂಟಿಯಾಗಿ 2022-23ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಮಾಹಿತಿ ಕಾರ್ಯಕ್ರಮ ಕಾಲೇಜಿನ ಸ್ಪಂದನ ಸಭಾಂಗಣದಲ್ಲಿ ಜರುಗಿತು.

ಅಧ್ಯಕ್ಷತೆಯನ್ನು ಕಾಲೇಜಿನ ಉಪ ಪ್ರಾಂಶುಪಾಲ ಪ್ರೊ.ಗಣೇಶ್ ಭಟ್ ವಹಿಸಿ,ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಅವರ ಜವಾಬ್ದಾರಿಗಳು ಮತ್ತು ಅವುಗಳನ್ನು ನಿಭಾಯಿಸುವ ಪರಿ ಹೇಗೆ ಎನ್ನುವ ನುಡಿಗಳೊಂದಿಗೆ 64 ವರ್ಷಗಳ ಇತಿಹಾಸವುಳ್ಳ ಈ ಕಾಲೇಜಿನ ಆಶೋತ್ತರಗಳಿಗೆ ಸದಾ ಸ್ಪಂದಿಸುವ ಮನೋಭಾವವನ್ನು ಹೊಂದಿರಬೇಕು ಹಾಗೂ ಕಾಲೇಜಿನ ಶಿಸ್ತು ಪರಿಪಾಲನೆಯ ಕಡೆಗೆ ವಿಶೇಷ ಗಮನ ಹರಿಸಬೇಕು. ಎಂದು ಕರೆ ನೀಡಿದರು.

ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶದ ಸಂಯೋಜಕ ಹಾಗೂ ಕಾಲೇಜಿನ ಉಪ ಪ್ರಾಂಶುಪಾಲ ಡಾ. ಎ.ಪಿ.ರಾಧಾಕೃಷ್ಣ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ನಾಯಕತ್ವಗುಣ ಹಾಗೂ ಕಾಲೇಜಿನಲ್ಲಿ ದೊರಕುವ ಅವಕಾಶಗಳ ಸದುಪಯೋಗದಿಂದ ಕ್ರಿಯಾಶೀಲರಾಗಿ ಮುನ್ನಡೆದು ಮುಂದೆ ದೇಶದ ಸಜೆಗಳಾಗಿ ಬಾಳಬೇಕು ಎಂದು
ನುಡಿದರು.
ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ ಡಾ. ಚಂದ್ರಶೇಖರ್ ಹಾಗೂ ಭಾರತಿ ಎಸ್. ರೈ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಕಾರ್ಯನಿರ್ವಹಿಸುವ ವಿಧಾನದ ಬಗ್ಗೆ ಕಾರ್ಯಕ್ರಮಗಳ ಬಗ್ಗೆ ವಿವರಿಸಿದರು.

ವಿನ್ಸನ್ ಜೋಯ್ ಮಿನೇಜಸ್ ಹಾಗೂ ನಾಗ ಪ್ರಸಾದ್ ಪ್ರಾರ್ಥಿಸಿದರು. ವಿದ್ಯಾರ್ಥಿ ಸಂಘದ ಅಧ್ಯಕ್ಷ ಮಹಮ್ಮದ್ ಅಕಿ‌ ಸ್ವಾಗತಿಸಿದರು.
ಜೊತೆ ಕಾರ್ಯದರ್ಶಿ ಶಿವಾನಿ ವಂದಿಸಿ, ಕಾರ್ಯದರ್ಶಿ ಅನುಶ್ರೀ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು